ವೈಶಿಷ್ಟ್ಯಪೂರ್ಣ ಸಾಹಿತ್ಯ ಸಮ್ಮೇಳನ: ಸಚಿವ ಹೆಬ್ಬಾರ
ಹಾವೇರಿಯಲ್ಲಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ವಿಜೃಂಭಣೆಯಿಂದ ನಡೆಯಲಿದ್ದು, ಸರ್ಕಾರ .20 ಕೋಟಿ ಅನುದಾನ ಬಿಡುಗಡೆಗೊಳಿಸಿದೆ. ಸಮ್ಮೇಳನವನ್ನು ವೈಶಿಷ್ಟ್ಯಪೂರ್ಣವಾಗಿ ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ, ಸಚಿವ ಶಿವರಾಮ ಹೆಬ್ಬಾರ ಹೇಳಿದರು.
ಯಲ್ಲಾಪುರ (ಡಿ.3) : ಹಾವೇರಿಯಲ್ಲಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ವಿಜೃಂಭಣೆಯಿಂದ ನಡೆಯಲಿದ್ದು, ಸರ್ಕಾರ .20 ಕೋಟಿ ಅನುದಾನ ಬಿಡುಗಡೆಗೊಳಿಸಿದೆ. ಸಮ್ಮೇಳನವನ್ನು ವೈಶಿಷ್ಟ್ಯಪೂರ್ಣವಾಗಿ ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ, ಸಚಿವ ಶಿವರಾಮ ಹೆಬ್ಬಾರ ಹೇಳಿದರು.
ಪಟ್ಟಣದ ಎಪಿಎಂಸಿ ಬಳಿಯಿಂದ ಬಸ್ ನಿಲ್ದಾಣದ ವೃತ್ತದವರೆಗೆ ಮೆರವಣಿಗೆಯಲ್ಲಿ ಸಾಗಿ ಬಂದ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡರಥದಲ್ಲಿರಿಸಿದ ಭುವನೇಶ್ವರಿ ಮಾತೆಗೆ ಪೂಜೆ ಸಲ್ಲಿಸಿ ಮಾತನಾಡುತ್ತಿದ್ದರು.
ಹಿಂದುಳಿದ ಹಣೆ ಪಟ್ಟಿಹೊತ್ತ ಪ್ರದೇಶಗಳ ಸರ್ವಾಂಗೀಣ ಅಭಿವೃದ್ಧಿ: ಸಚಿವ ಹೆಬ್ಬಾರ್
ಕನ್ನಡದ ನೆಲ, ಜಲ, ಒಂದಿಂಚನ್ನೂ ಯಾರಿಂದಲೂ ಕಿತ್ತುಕೊಳ್ಳಲಾಗದು. ಕನ್ನಡ ನಾಡಿನ ಸಮಸ್ತ ಜನತೆ ಮತ್ತು ಎಲ್ಲ ರಾಜಕೀಯ ಪಕ್ಷಗಳೂ ಒಗ್ಗಟ್ಟಿನಿಂದ ನಮ್ಮ ನೆಲ-ಜಲ ರಕ್ಷಣೆಗೆ ಕಟಿಬದ್ಧರಾಗಿದ್ದೇವೆ. ಮಹಾರಾಷ್ಟ್ರದಲ್ಲಿರುವ ಕನ್ನಡಿಗರಿಗೆ ರಕ್ಷಣೆ ನೀಡುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದರು.
ಕಳೆದೆರಡು ವರ್ಷಗಳಿಂದ ಕೋವಿಡ್ ಕಾರಣದಿಂದಾಗಿ ಸಮ್ಮೇಳನ ನಡೆಸಲಾಗಲಿಲ್ಲ. ಸುಮಾರು 128 ಎಕರೆ ವಿಸ್ತೀರ್ಣದ ಪ್ರದೇಶದಲ್ಲಿ ಭವ್ಯ ವೇದಿಕೆ ನಿರ್ಮಿಸಲಾಗುತ್ತಿದೆ. 3 ದಿನಗಳ ಕಾಲ ನಡೆಯುವ ಈ ಸಮ್ಮೇಳನದಲ್ಲಿ ಅತಿಥಿ-ಅಭ್ಯಾಗತರು ಮತ್ತು ಸಾಹಿತಿಗಳಿಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.
ಈ ಸಮ್ಮೇಳನದಲ್ಲಿ .10 ಲಕ್ಷಕ್ಕೂ ಅಧಿಕ ಸಂಖ್ಯೆಯ ಸಾಹಿತ್ಯಾಸಕ್ತರು ಭಾಗವಹಿಸುವ ನಿರೀಕ್ಷೆ ಇದೆ ಎಂದ ಅವರು, ಈ ರಥ ಡಿ.1ರವರೆಗೆ ರಾಜ್ಯದೆಲ್ಲೆಡೆ ಸಂಚರಿಸಿ, ಕನ್ನಡ ಜಾಗೃತಿ ಮೂಡಿಸಿ; ಜ.1ರಿಂದ ಹಾವೇರಿ ಜಿಲ್ಲೆಯಲ್ಲಿ ಸಂಚರಿಸಲಿದೆ ಎಂದರು.
ಮೂಲ ಬಿಜೆಪಿ, ವಲಸೆ ಬಿಜೆಪಿಗ ಎಂಬ ಪ್ರಶ್ನೆ ನನ್ನೆದುರಿಗಿಲ್ಲ: ಸಚಿವ ಹೆಬ್ಬಾರ
ಕಸಾಪ ಜಿಲ್ಲಾಧ್ಯಕ್ಷ ಬಿ.ಎನ್.ವಾಸರೆ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಪಪಂ ಅಧ್ಯಕ್ಷೆ ಸುನಂದಾ ದಾಸ್, ತಹಶೀಲ್ದಾರ ಶ್ರೀಕೃಷ್ಣ ಕಾಮ್ಕರ್, ಡಾ.ನರೇಂದ್ರ ಪವಾರ್, ಗ್ರೇಡ್-2 ತಹಶೀಲ್ದಾರ ಸಿ.ಜಿ. ನಾಯ್ಕ, ಭುವನೇಶ್ವರಿ ರಥದ ಉಸ್ತುವಾರಿ ನಬೀಬ್‌ಸಾಬ್ ಕುಷ್ಟಗಿ, ಪ್ರಮುಖರಾದ ಜಿ.ಆರ್. ಹೆಗಡೆ, ಎಂ.ಆರ್. ಹೆಗಡೆ ಕುಂಬ್ರಿಗುಡ್ಡೆ, ಶ್ರೀರಂಗ ಕಟ್ಟಿ, ಬೀರಣ್ಣ ನಾಯಕ, ಡಿ.ಜಿ. ಹೆಗಡೆ, ಜಯರಾಮ ಗುನಗಾ, ಸುಬ್ರಹ್ಮಣ್ಯ ಭಟ್ಟ, ವೇಣುಗೋಪಾಲ ಮದ್ಗುಣಿ, ಮುಕ್ತಾ ಶಂಕರ, ಪುಷ್ಪಾ ನಾಯ್ಕ, ಶೀವಲೀಲಾ ಹುಣಸಗಿ ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಶಿಕ್ಷಕರು, ವೈಟಿಎಸ್‌ಎಸ್, ಹೋಲಿರೋಜರಿ ಪ್ರೌಢಶಾಲಾ ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.