ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ ನೇತೃತ್ವದ ವಿಭಾಗೀಯ ಪೀಠ| ವಿಚಾರಣೆಯನ್ನು ಜೂ. 22ಕ್ಕೆ ಮುಂದೂಡಿದ ನ್ಯಾಯಾಲಯ| 

ಬೆಂಗಳೂರು(ಏ. 21): ನಗರದ ಡಿ.ಜೆ. ಹಳ್ಳಿ ಹಾಗೂ ಕೆ.ಜಿ. ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಷ್ಟ ಪರಿಹಾರ ಕೋರಿ 90 ಅರ್ಜಿಗಳು ಸಲ್ಲಿಕೆಯಾಗಿದ್ದು, ಅವುಗಳನ್ನು ಕ್ಲೇಮ್‌ ಕಮಿಷನರ್‌ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

ಗಲಭೆ ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸಲು ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಗೂ ಆಸ್ತಿ ನಷ್ಟ ಅಂದಾಜು ಮಾಡಲು ಕ್ಲೇಮ್‌ ಕಮಿಷನರ್‌ ನೇಮಕ ಮಾಡುವಂತೆ ಕೋರಿ ಸರ್ಕಾರ ಸಲ್ಲಿಸಿರುವ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ ನೇತೃತ್ವದ ವಿಭಾಗೀಯ ಪೀಠ ಮಂಗಳವಾರ ವಿಚಾರಣೆ ನಡೆಸಿದೆ.

ಡಿಜೆ ಹಳ್ಳಿ ಗಲಭೆ; ಜೈಲಿನಿಂದ ಹೊರಬಂದ 29 ಆರೋಪಿಗಳು

ಈ ಹೇಳಿಕೆ ದಾಖಲಿಸಿಕೊಂಂಡ ಪೀಠ, ಗಲಭೆಗೆ ಸಂಬಂಧಿಸಿದಂತೆ ದಾಖಲಾಗಿರುವ ಪ್ರಕರಣಗಳಲ್ಲಿ ಈವರೆಗೆ ನಡೆಸಿರುವ ತನಿಖೆಯ ಪ್ರಗತಿ ವರದಿಯನ್ನು ಮುಂದಿನ ವಿಚಾರಣೆ ವೇಳೆ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ಬಾಣಸವಾಡಿ ಎಸಿಪಿ ಹಾಗೂ ಎನ್‌ಐಎ ಅಧಿಕಾರಿಗಳಿಗೆ ನಿರ್ದೇಶಿಸಿ, ವಿಚಾರಣೆಯನ್ನು ಜೂ. 22ಕ್ಕೆ ಮುಂದೂಡಿದೆ.