Corona Crisis: ಬೆಂಗ್ಳೂರಲ್ಲಿ ಕೊರೋನಾ ಪಾಸಿಟಿವಿಟಿ ದರ ಶೇ.2.5ಕ್ಕೆ ಹೆಚ್ಚಳ
ರಾಜಧಾನಿಯಲ್ಲಿ ಕೊರೋನಾ ಸೋಂಕು ಹೊಸ ಪ್ರಕರಣಗಳು 100 ಆಸುಪಾಸಿಗೆ ಹೆಚ್ಚಳವಾಗಿದ್ದು, ಸೋಂಕು ಪರೀಕ್ಷೆಗಳ ಪಾಸಿಟಿವಿಟಿ ದರ ಶೇ.2.5ರಷ್ಟು ದಾಖಲಾಗಿದೆ. ನಗರದಲ್ಲಿ ಗುರುವಾರ 91 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, 45 ಮಂದಿ ಗುಣಮುಖರಾಗಿದ್ದಾರೆ.
ಬೆಂಗಳೂರು (ಏ.22): ರಾಜಧಾನಿಯಲ್ಲಿ (Bengaluru) ಕೊರೋನಾ ಸೋಂಕು (Coronavirus) ಹೊಸ ಪ್ರಕರಣಗಳು 100 ಆಸುಪಾಸಿಗೆ ಹೆಚ್ಚಳವಾಗಿದ್ದು, ಸೋಂಕು ಪರೀಕ್ಷೆಗಳ ಪಾಸಿಟಿವಿಟಿ ದರ (Positivity Rate) ಶೇ.2.5ರಷ್ಟು ದಾಖಲಾಗಿದೆ. ನಗರದಲ್ಲಿ ಗುರುವಾರ 91 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, 45 ಮಂದಿ ಗುಣಮುಖರಾಗಿದ್ದಾರೆ. ಸೋಂಕಿತರ ಸಾವು ವರದಿಯಾಗಿಲ್ಲ. ಸದ್ಯ 1,474 ಸೋಂಕಿತರು ಆಸ್ಪತ್ರೆ/ಮನೆಯಲ್ಲಿ ಚಿಕಿತ್ಸೆ, ಆರೈಕೆಯಲ್ಲಿದ್ದಾರೆ. 3760 ಸೋಂಕು ಪರೀಕ್ಷೆಗಳು ನಡೆದಿದ್ದು, ಪಾಸಿಟಿವಿಟಿ ದರ ಶೇ.2.5ರಷ್ಟುದಾಖಲಾಗಿದೆ. ಬುಧವಾರಕ್ಕೆ ಹೋಲಿಸಿದರೆ ಹೊಸ ಪ್ರಕರಣಗಳು 36 ಹೆಚ್ಚಳವಾಗಿವೆ. (ಬುಧವಾರ 55 ಕೇಸ್, ಶೂನ್ಯ ಸಾವು)
ಸದ್ಯ ಸಕ್ರಿಯ ಸೋಂಕಿತರ ಪೈಕಿ 8 ಮಂದಿ ಮಾತ್ರ ಆಸ್ಪತ್ರೆಯಲ್ಲಿದ್ದು, ಈ ಪೈಕಿ ವೆಂಟಿಲೇಟರ್ ಒಬ್ಬರು, ಆಕ್ಸಿಜನ್ ಹಾಸಿಗೆಯಲ್ಲಿ ಇಬ್ಬರು, ಸಾಮಾನ್ಯ ಹಾಸಿಗೆಗಳಲ್ಲಿ ಐದು ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದ 1,466 ಮಂದಿ ಮನೆಯಲ್ಲಿ ಆರೈಕೆಯಲ್ಲಿದ್ದಾರೆ. ಸೋಂಕು ಪರೀಕ್ಷೆಗಳು ಹೆಚ್ಚಳವಾಗದಿದ್ದರೂ ಹೊಸ ಪ್ರಕರಣಗಳು ದಿಢೀರ್ ಹೆಚ್ಚಳವಾಗಿದ್ದು, ಪಾಸಿಟಿವಿಟಿ ದರವೂ ಏರಿಕೆಯಾಗಿರುವುದು ಆತಂಕ ಮೂಡಿಸಿವೆ. ಪಾಸಿಟಿವಿಟಿ ದರವು ರಾಜ್ಯ ಸರಾಸರಿಗಿಂತ ದುಪ್ಪಟ್ಟು 2.5 ರಷ್ಟುವರದಿಯಾಗಿದೆ. ಅಂದರೆ, ಸೋಂಕು ಪರೀಕ್ಷೆಗೊಳಪಡುವ ಒಂದು ಸಾವಿರ ಮಂದಿಗೆ 25 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಈವರೆಗೆ ಸೋಂಕಿಗೆ ಒಳಗಾದವರ ಸಂಖ್ಯೆ 17.8 ಲಕ್ಷಕ್ಕೆ, ಗುಣಮುಖರ ಸಂಖ್ಯೆ 17.6 ಲಕ್ಷಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 16,964 ಇದೆ ಎಂದು ಬಿಬಿಎಂಪಿ ಕೊರೋನಾ ವರದಿಯಲ್ಲಿ ತಿಳಿಸಲಾಗಿದೆ.
Covid Crisis: ಕರ್ನಾಟಕದಲ್ಲಿ 4ನೇ ಅಲೆ ಭೀತಿ: ಸಚಿವ ಸುಧಾಕರ್ ಹೇಳಿದ್ದಿಷ್ಟು
ಒಂದೊಂದೇ ರಾಜ್ಯದಲ್ಲಿ ಮತ್ತೆ ಮಾಸ್ಕ್ ಕಡ್ಡಾಯ, ಜೋಪಾನ: ಭಾರತದಲ್ಲಿ ಮತ್ತೆ ಕೊರೋನಾ ಆರ್ಭಟ ಶುರುವಾಗಿದೆ. ಚೀನಾ, ಯೂರೋಪ್ ಸೇರಿದಂತೆ ವಿದೇಶಗಳಲ್ಲಿ ಹೊಸ ತಳಿಗಳ ಆತಂಕ ಹೆಚ್ಚಾಗುತ್ತಿದ್ದಂತೆ ಭಾರತದಲ್ಲೂ ಇದೀಗ ಕೊರೋನಾ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ. ಪರಿಣಾಮ ಒಂದೊಂದೆ ರಾಜ್ಯಗಳಲ್ಲಿ ಕಠಿಣ ನಿರ್ಬಂಧಗಳು ಜಾರಿಯಾಗುತ್ತಿದೆ. ಇದೀಗ ದೆಹಲಿ ಬಳಿಕ ಪಂಜಾಬ್‌ನಲ್ಲೂ ಮಾಸ್ಕ್ ಕಡ್ಡಾಯ ಮಾಡಲಾಗಿದೆ. ಕೊರೋನಾ ಇಳಿಕೆಯಾಗಿ ಸಹಜಸ್ಥಿತಿಗೆ ಮರಳಿದ ಕಾರಣ ಪಂಜಾಬ್ ಸೇರಿದಂತೆ ಭಾರತದ ಬಹುತೇಕ ರಾಜ್ಯಗಳಲ್ಲಿ ಕೊರೋನಾ ನಿರ್ಬಂಧ ಸಡಿಲಗೊಳಿಸಲಾಗಿತ್ತು.
ಇದೀಗ ಮತ್ತೆ ನಿರ್ಬಂಧಗಳು ಜಾರಿಯಾಗುತ್ತಿದೆ. ಪಂಜಾಬ್‌ನಲ್ಲಿ ಸಿನಿಮಾ ಹಾಲ್, ಸಾರ್ವಜನಿಕ ಸಾರಿಗೆ, ಶಾಪಿಂಗ್ ಮಾಲ್ ಸೇರಿದಂತೆ ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್ ಕಡ್ಡಾಯ ಮಾಡಲಾಗಿದೆ. ಶಾಲಾ ತರಗತಿ, ಕಚೇರಿ, ಒಳಾಂಗಣ ಸಭೆ, ಸಮಾರಂಭ, ಸಾರ್ವಜನಿಕ ಸಭೆ ಸೇರಿದಂತೆ ಎಲ್ಲಾ ಕಡೆಗಳಲ್ಲಿ ಮಾಸ್ಕ್ ಕಡ್ಡಾಯ ಎಂದು ಆಮ್ ಆದ್ಮಿ ಸರ್ಕಾರ ಆದೇಶಿಸಿದೆ. ಪಂಜಾಬ್‌ನಲ್ಲೂ ಕೊರೋನಾ ಪ್ರಕರಣ ಗಣನೀಯ ಏರಿಕೆ ಕಂಡಿದೆ. 4ನೇ ಅಲೆ ಭೀತಿಯೂ ಎದುರಾಗಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಮಾಸ್ಕ್ ಕಡ್ಡಾಯ ಮಾಡಲಾಗಿದೆ.
ದೆಹಲಿಯಲ್ಲಿ ಕೊರೋನಾ ಪ್ರಕರಣ ದುಪ್ಪಟ್ಟಾಗಿದೆ. ದಿನದಿಂದ ದಿನಕ್ಕೆ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ದೆಹಲಿ ಸರ್ಕಾರ ಮಾಸ್ಕ್ ಕಡ್ಡಾಯ ಎಂದು ಘೋಷಿಸಿದೆ. ಈ ಮೂಲಕ ಮತ್ತೆ ಕಠಿಣ ನಿಯಮಗಳನ್ನು ಜಾರಿಗೊಳಿಸುತ್ತಿದೆ. ಇನ್ನು ಹರ್ಯಾಣದಲ್ಲೂ ಕೊರೋನಾ ಹೆಚ್ಚಾಗಿರುವ ಕಾರಣ ಗುರುಗ್ರಾಂ, ಫರೀದಾಬಾದ್, ಸೋನಿಪತ್ ಹಾಗೂ ಝಾಜರ್ ಪ್ರದೇಶಗಳಲ್ಲಿ ಮಾಸ್ಕ್ ಕಡ್ಡಾಯ ಮಾಡಲಾಗಿದೆ.
ಕೋವಿಡ್ 4ನೇ ಅಲೆಯ ಮುನ್ಸೂಚನೆ: ದೇಶದಲ್ಲಿ ಕೋವಿಡ್ ಪ್ರಸರಣ ವೇಗ 3 ತಿಂಗಳ ಗರಿಷ್ಠಕ್ಕೆ ಏರಿಕೆ
ದಿಲ್ಲಿಗೆ 4ನೇ ಅಲೆ ಆತಂಕ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದೈನಂದಿನ ಕೋವಿಡ್ ಪ್ರಕರಣಗಳ ಸಂಖ್ಯೆ ಆತಂಕಕಾರಿಯಾಗಿ ಏರಿಕೆಯಾಗುತ್ತಿದ್ದು, ಬುಧವಾರ 1009 ಪ್ರಕರಣಗಳು ದೃಢಪಟ್ಟಿವೆ. ಈ ಮೂಲಕ ಕೋವಿಡ್ ಪಾಸಿಟಿವಿಟಿ ದರ ಶೇ.5.7ಕ್ಕೆ ಏರಿಕೆಯಾಗಿದೆ. ಪಾಸಿಟಿವಿಟಿ ದರ ಏ.11- 18ರ ಅವಧಿಗಿಂತ ಮೂರು ಪಟ್ಟು ಅಧಿಕವಾಗಿದೆ. ಇನ್ನು ಸಕ್ರಿಯ ಪ್ರಕರಣಗಳ ಸಂಖ್ಯೆ 2641ಕ್ಕೆ ಏರಿಕೆಯಾಗಿದೆ. ದೆಹಲಿಯಲ್ಲಿ ಭಾನುವಾರ 517, ಸೋಮವಾರ 501, ಮಂಗಳವಾರ 632 ಕೊರೋನಾ ಕೇಸ್ ಪತ್ತೆಯಾಗಿದ್ದವು. ಆದರೆ ಮಂಗಳವಾರಕ್ಕೆ ಹೋಲಿಸಿದರೆ ಬುಧವಾರ ದೈನಂದಿನ ಕೋವಿಡ್ ಕೇಸುಗಳ ಪ್ರಮಾಣ ಏಕಾಏಕಿ ಶೇ.60ರಷ್ಟುಏರಿಕೆಯಾಗಿದೆ.