ಮೈಸೂರು (ಜೂ.09): ಕೊರೋನಾ ಗೆದ್ದ ವೃದ್ಧರೊಬ್ಬರಿಗೆ ಅದ್ಧೂರಿ ಸ್ವಾಗತ ಕೋರಿದ ಘಟನೆ ಮೈಸೂರಿನ ವಿದ್ಯಾರಣ್ಯಪುರಂನಲ್ಲಿ ನಡೆದಿದೆ. ವಿದ್ಯಾರಣ್ಯಪುರಂ ನಿವಾಸಿ 98 ವರ್ಷದ ಸೂರ್ಯನಾರಾಯಣ್‌ ಎಂಬವರೇ ಕೊರೋನಾ ಗೆದ್ದವರು.

 ಇವರು ಕೊರೋನಾ ಸೋಂಕಿನಿಂದ ಆಸ್ಪತ್ರೆ ಸೇರಿದ್ದು, ಗುಣಮುಖರಾಗಿ ಸೋಮವಾರ ಮನೆಗೆ ವಾಪಸ್‌ ಆಗಿದ್ದಾರೆ. ಈ ವೇಳೆ ಅವರಿಗೆ ಪುಷ್ಪಾರ್ಚನೆ ಮೂಲಕ ಕುಟುಂಬಸ್ಥರು ಸ್ವಾಗತ ಕೋರಿದ್ದಾರೆ. ಇದಕ್ಕೆ ನಗರ ಪಾಲಿಕೆ ಸದಸ್ಯೆ ಶೋಭಾ ಸುನಿಲ್‌ ಅವರು ಸಹ ಸಾಥ್‌ ನೀಡಿ ಸ್ವಾಗತ ಕೋರಿದ್ದಾರೆ.

ಗುಡ್ ನ್ಯೂಸ್ : ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಸಂಖ್ಯೆಯಲ್ಲಿ ಭಾರೀ ಇಳಿಕೆ

ಕೊರೋನಾ ಬಂದವರನ್ನ ಮಾನವೀಯತೆ ದೃಷ್ಟಿಯಿಂದ ನೋಡಲಿ. ಅವರನ್ನ ದೂರ ಮಾಡುವುದು ಬೇಡ. ಈ ಹಿನ್ನಲೆಯಲ್ಲಿ ಅವರಿಗೆ ಈ ರೀತಿಯ ಅದ್ಧೂರಿ ಸ್ವಾಗತ ಕೋರಿದ್ದೇವೆ ಎಂದು ಪಾಲಿಕೆ ಸದಸ್ಯೆ ಶೋಭಾ ಸುನಿಲ್‌ ತಿಳಿಸಿದ್ದಾರೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona