Udupi: ಯಕ್ಷ ಶಿಕ್ಷಣ ವಿದ್ಯಾರ್ಥಿಗಳಿಂದ ವೈಭವದ ಯಕ್ಷೋತ್ಸವ

ಯಕ್ಷ ಶಿಕ್ಷಣ ಟ್ರಸ್ಟ್ (ರಿ.) ಉಡುಪಿ ಇವರು ತರಬೇತಿ ನೀಡಿದ ಉಡುಪಿ ವಿಧಾನ ಸಭಾ ಕ್ಷೇತ್ರದ 44 ಪ್ರೌಢ ಶಾಲೆಗಳ ವಿದ್ಯಾರ್ಥಿಗಳಿಂದ 45 ಯಕ್ಷಗಾನ ಪ್ರದರ್ಶನ 'ಕಿಶೋರ ಯಕ್ಷಗಾನ ಸಂಭ್ರಮ 2022ವು ನ. 27 ರಿಂದ ಡಿ.12 ರವರೆಗೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿದೆ.

A glorious Yakshotsava by Yaksha Education students at udupi gvd

ಉಡುಪಿ (ನ.26): ಯಕ್ಷ ಶಿಕ್ಷಣ ಟ್ರಸ್ಟ್ (ರಿ.) ಉಡುಪಿ ಇವರು ತರಬೇತಿ ನೀಡಿದ ಉಡುಪಿ ವಿಧಾನ ಸಭಾ ಕ್ಷೇತ್ರದ 44 ಪ್ರೌಢ ಶಾಲೆಗಳ ವಿದ್ಯಾರ್ಥಿಗಳಿಂದ 45 ಯಕ್ಷಗಾನ ಪ್ರದರ್ಶನ 'ಕಿಶೋರ ಯಕ್ಷಗಾನ ಸಂಭ್ರಮ 2022ವು ನ. 27 ರಿಂದ ಡಿ.12 ರವರೆಗೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಹಾಗೂ ಡಿ.13 ರಿಂದ ಡಿ.20 ರವರೆಗೆ ಬ್ರಹ್ಮಾವರ ಪೇಟೆಯ ಬಂಟರ ಭವನದ ಬಳಿಯಲ್ಲಿ ನಡೆಯಲಿದೆ ಎಂದು ಶಾಸಕ ಹಾಗು ಯಕ್ಷಶಿಕ್ಷಣ ಟ್ರಸ್ಟ್‌ನ ಅಧ್ಯಕ್ಷ ರಘುಪತಿ ಭಟ್ ಹೇಳಿದರು. 

ಅವರು ಶನಿವಾರ ಉಡುಪಿಯ ಪತ್ರಿಕಾಭವನದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿಯನ್ನು ವಿವರಿಸಿದರು. ಕಿಶೋರ ಯಕ್ಷಗಾನ ಸಂಭ್ರಮ 2022 ಕಾಯಕ್ರಮ ಶ್ರೀಕೃಷ್ಣ ಮಠ, ಪರ್ಯಾಯ ಶ್ರೀ ಕೃಷ್ಣಾಪುರ ಮಠ ಉಡುಪಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು, ಯಕ್ಷಗಾನ ಕಲಾರಂಗ (ರಿ.) ಉಡುಪಿ ಇವರ ಸಹಯೋಗದಲ್ಲಿ ನಡೆಯಲಿದೆ. 

ಮಹಿಳೆಯ ದೇಹದಿಂದ ವಿಶ್ವದ ಅತಿ ದೊಡ್ಡ ಕಿಡ್ನಿ ಸ್ಟೋನ್ ಹೊರ ತೆಗೆದ ಮಣಿಪಾಲದ ವೈದ್ಯರು

ಕಿಶೋರ ಯಕ್ಷಗಾನ ಸಂಭ್ರಮ 2022 ನ್ನು ನ.27 ಅಪರಾಹ್ನ 3.45 ಕ್ಕೆ ಪರ್ಯಾಯ ಶ್ರೀ ವಿದ್ಯಾಸಾಗರತೀರ್ಥರು ರಾಜಾಂಗಣದಲ್ಲಿ ಉದ್ಘಾಟಿಸಲಿದ್ದು, ಅಂಬಲಪಾಡಿ ದೇವಸ್ಥಾನದ ಧರ್ಮದರ್ಶಿ ಡಾ| ವಿಜಯ ಬಲ್ಲಾಳ್, ಉದ್ಯಮಿ ಪುರುಷೋತ್ತಮ್ ಶೆಟ್ಟಿ, ಕನ್ನಡ ಸಂಸ್ಕೃತಿ ಇಲಾಖೆಯ ಉಡುಪಿಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಪರ್ಯಾಯ ಮಠದ ದಿವಾನ ವರದರಾಜ್ ಭಟ್, ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ ರಾವ್ ಉಪಸ್ಥಿತರಿರಲಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಯಕ್ಷಶಿಕ್ಷಣ ಟ್ರಸ್ಟ್‌ನ ಕಾರ್ಯದರ್ಶಿ ಮುರುಳಿ ಕಡೆಕಾರ್, ಟ್ರಸ್ಟಿ ಶೃಂಗೇಶ್ ಉಪಸ್ಥಿತರಿದ್ದರು. 

ಹೊಂಡಾ ಗುಂಡಿ ರಸ್ತೆಯಲ್ಲೇ ಹೆರಿಗೆ: ಅಭಿವೃದ್ಧಿ ಹೊಂದಿದ ಉಡುಪಿಯಲ್ಲಿ ಇದೆಂಥಾ ಅವ್ಯವಸ್ಥೆ?

ನ. 27 ರಿಂದ ಡಿ.11 ರವರೆಗೆ ಸಂಜೆ 4 ರಿಂದ 5.30 ಹಾಗೂ 7 ರಿಂದ 8.30 ರವರೆಗೆ ದಿನಕ್ಕೆ 2 ಪ್ರೌಢ ಶಾಲೆಯ ವಿದ್ಯಾರ್ಥಿಗಳಿಂದ ಆಯ್ದ 2 ಪ್ರಸಂಗಗಳ ಯಕ್ಷಗಾನ ಪ್ರದರ್ಶನ ಉಡುಪಿ ಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿದೆ. ಹಾಗೂ ಡಿ. 13 ರಿಂದ ಡಿ. 20 ರವರೆಗೆ ಬ್ರಹ್ಮಾವರ ಪೇಟೆಯ ಬಂಟರ ಭವನದ ಬಳಿ ಸಂಜೆ 5.30 ರಿಂದ 7 ಹಾಗೂ 7.15 ರಿಂದ 8.45 ರವರೆಗೆ ದಿನಕ್ಕೆ 2 ಪ್ರೌಢ ಶಾಲೆಯ ವಿದ್ಯಾರ್ಥಿಗಳಿಂದ ಆಯ್ದ 2 ಪ್ರಸಂಗಗಳ ಯಕ್ಷಗಾನ ಪ್ರದರ್ಶನ ನಡೆಯಲಿದೆ.

Latest Videos
Follow Us:
Download App:
  • android
  • ios