ಕೇಜ್ರಿವಾಲ್‌ ಆಡಳಿತ ದೇಶಕ್ಕೆ ಮಾದರಿ : ಹಿರೇಮಠ

ದೆಹಲಿ ಮುಖ್ಯಮಂತ್ರಿ ಅರವಿಂದ ಕ್ರೇಜಿವಾಲ್‌ಆಡಳಿತ ಇಡೀ ದೇಶಕ್ಕೆ ಮಾದರಿಯಾಗಿದೆ ಎಂದು ಆಮ್‌ ಆದ್ಮಿ ಪಕ್ಷದ ರಾಜ್ಯಉಪಾಧ್ಯಕ್ಷ ರುದ್ರಯ್ಯ ನವಲಿಹಿರೇಮಠ ಹೇಳಿದರು.

A model for a crazy ruled country  Hiremath snr

  ಯಲಬುರ್ಗಾ :  ದೆಹಲಿ ಮುಖ್ಯಮಂತ್ರಿ ಅರವಿಂದ ಕ್ರೇಜಿವಾಲ್‌ ಆಡಳಿತ ಇಡೀ ದೇಶಕ್ಕೆ ಮಾದರಿಯಾಗಿದೆ ಎಂದು ಆಮ್‌ ಆದ್ಮಿ ಪಕ್ಷದ ರಾಜ್ಯಉಪಾಧ್ಯಕ್ಷ ರುದ್ರಯ್ಯ ನವಲಿ ಹಿರೇಮಠ ಹೇಳಿದರು.

ಶುಕ್ರವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್‌ ಮತ್ತು ಬಿಜೆಪಿ ಪಕ್ಷಗಳು ಭ್ರಷ್ಟಾಚಾರದಿಂದ ಕೂಡಿವೆ. ಇನ್ನೂ ಜೆಡಿಎಸ್‌ ಕುಟುಂಬ ರಾಜಕಾರಣಕ್ಕೆ ಸೀಮಿತವಾಗಿವೆ. ಇಂತಹ ಪಕ್ಷಗಳಿಂದ ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ ಎಂದರು.

ರಾಜ್ಯದಲ್ಲಿ ಈ ಬಾರಿ ಆಮ್‌ ಆದ್ಮಿ ಪಕ್ಷ ಎಲ್ಲ ಕ್ಷೇತ್ರಗಳಲ್ಲೂ ಒಳ್ಳೆಯ ಗೆಲ್ಲುವ ಪ್ರಮಾಣಿಕ ಅಭ್ಯರ್ಥಿಗಳನ್ನು ಸ್ಪರ್ಧೆಗೆ ನಿಲ್ಲಸಲಾಗುವುದು. ಈಗಾಗಲೇ ರಾಜ್ಯದ ಎಲ್ಲ ಪಕ್ಷಗಳ ಅಧಿಕಾರವನ್ನು ನೋಡಿದ್ದಾರೆ. ನಮ್ಮ ಆಮ್‌ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದರೆ ಜನಪರ ಆಡಳಿತ ನೀಡಲಿದೆ ಎಂದು ಹೇಳಿದರು.

ತಾಲೂಕಿನಲ್ಲಿ ಬಿಜೆಪಿ, ಕಾಂಗ್ರೆಸ್‌ ಪಕ್ಷ ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದಾರೆ, ಇದರಿಂದ ಕ್ಷೇತ್ರದ ಜನರು ಬೇಸತ್ತಿದ್ದಾರೆ. ಇಬ್ಬರು ಜನರಿಗೆ ಬೇಡವಾಗಿದ್ದರೆ ಹೀಗಾಗಿ ಜನರು ಬದಲಾವಣೆ ಬಯಸಿದ್ದಾರೆ. ನಮ್ಮ ಪಕ್ಷದ ವಿಧಾನಸಭಾ ಕ್ಷೇತ್ರದ ನಿಯೋಜಿತ ಅಭ್ಯರ್ಥಿಗಳಾದ ಹನುಮಂತಪ್ಪ ಕುರಿ ಹಾಗೂ ಲೋಹಿತ್‌ಕುಮಾರ ರಾಮಶೆಟ್ಟಿಇವರಿಬ್ಬರು ಒಳ್ಳೆಯ ಪ್ರಮಾಣಿಕ ವ್ಯಕ್ತಿಯಾಗಿದ್ದಾರೆ ಇವರಲ್ಲಿ ಒಬ್ಬರನ್ನು ಸ್ಪರ್ಧೆಗಿಳಿಸಲಾಗುವುದು ಎಂದು ಹೇಳಿದರು.

ಪಕ್ಷದ ನಿಯೋಜಿತ ಅಭ್ಯರ್ಥಿ ಹನುಮಂತಪ್ಪ ಕುರಿ ಮಾತನಾಡಿ, ನನಗೆ ಪಕ್ಷ ಸ್ಪರ್ಧಿಸಲು ಅವಕಾಶ ಕಲ್ಪಿಸಿದೆ ಹೀಗಾಗಿ ತಾಲೂಕಿನಲ್ಲಿ ಪಕ್ಷ ಸಂಘಟನೆ ಮಾಡುವತ್ತ ಹೆಚ್ಚು ಗಮನಹರಿಸುತ್ತೇನೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಲೋಹಿತ್‌ಕುಮಾರ ರಾಮಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಶರಣು ಶೆಟ್ಟರ್‌, ಫಕೀರಪ್ಪ ಲಿಂಗದಹಳ್ಳಿ,ಗುರುಮೂರ್ತಿ ಆಡೂರ, ಆಮನ್‌ ಖಾಜಿ ಮತ್ತಿತರರು ಇದ್ದರು. 

ಜಾಹಿರಾತು ಶಾಕ್

ನವದೆಹಲಿ: ಸರ್ಕಾರಿ ಜಾಹೀರಾತುಗಳ ಸೋಗಿನಲ್ಲಿ ರಾಜಕೀಯ ಜಾಹೀರಾತು ನೀಡಿದ ಆರೋಪ ಸಂಬಂಧ 163.62 ಕೋಟಿ ರು. ಪಾವತಿಸುವಂತೆ ದೆಹಲಿಯ ಆಡಳಿತಾರೂಢ ಆಮ್‌ ಆದ್ಮಿ ಪಕ್ಷ (ಆಪ್‌)ಕ್ಕೆ ನೋಟಿಸ್‌ ಜಾರಿಯಾಗಿದೆ. ಇದು ಭರ್ಜರಿ ವಾಕ್ಸಮರಕ್ಕೆ ಕಾರಣವಾಗಿದೆ. ಸರ್ಕಾರಿ ಜಾಹೀರಾತಿನ ಹೆಸರಿನಲ್ಲಿ ಆಪ್‌ ರಾಜಕೀಯ ಪ್ರಚಾರ ಮಾಡಿಕೊಂಡಿದ್ದು, ಈ ಸಂಬಂಧ 97 ಕೋಟಿ ರೂ. ವಸೂಲಿ ಮಾಡುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಉಪರಾಜ್ಯಪಾಲ ವಿ.ಕೆ. ಸಕ್ಸೇನಾ ಒಂದು ತಿಂಗಳ ಹಿಂದೆ ಸೂಚಿಸಿದ್ದರು. ಅದಾದ ಬೆನ್ನಲ್ಲೇ ವಾರ್ತಾ ಮತ್ತು ಪ್ರಚಾರ ನಿರ್ದೇಶನಾಲಯ ನೋಟಿಸ್‌ ಜಾರಿಗೊಳಿಸಿ, 163.62 ಕೋಟಿ ರೂ. ಗಳನ್ನು 10 ದಿನದಲ್ಲಿ ಪಾವತಿಸುವಂತೆ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ. ಒಂದು ವೇಳೆ ಆಪ್‌ ಈ ಹಣ ಕಟ್ಟಲು ವಿಫಲವಾದರೆ ಪಕ್ಷದ ಆಸ್ತಿ ಮುಟ್ಟುಗೋಲು ಸೇರಿದಂತೆ ಕಾಲಮಿತಿಯಲ್ಲಿ ಎಲ್ಲ ಗಂಭೀರ ಕಾನೂನು ಕ್ರಮಗಳನ್ನು ಸರ್ಕಾರ ತೆಗೆದುಕೊಳ್ಳಲಿದೆ ಎಂದು ಹೇಳಲಾಗಿದೆ.

ನೋಟಿಸ್‌ ಜಾರಿಯಾಗಿರುವುದಕ್ಕೆ ತೀವ್ರ ಕೆಂಡಾಮಂಡಲಗೊಂಡಿರುವ ಆಪ್‌, ದೆಹಲಿ ಸರ್ಕಾರ ಹಾಗೂ ಸಚಿವರನ್ನು ಟಾರ್ಗೆಟ್‌ ಮಾಡಲು ಅಧಿಕಾರಿಗಳ ಮೇಲೆ ಬಿಜೆಪಿ ಅಸಾಂವಿಧಾನಿಕ ಅಧಿಕಾರ ಪ್ರಯೋಗಿಸುತ್ತಿದೆ. 163.62 ಕೋಟಿ ರೂ. ಪಾವತಿಸುವಂತೆ ನೋಟಿಸ್‌ ನೀಡಿರುವುದು ನಿರಂಕುಶ ಹಾಗೂ ಮೊಂಡುತನದ್ದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಬಿಜೆಪಿ ಮುಖ್ಯಮಂತ್ರಿಗಳು ದೆಹಲಿಯ ದಿನಪತ್ರಿಕೆಗಳಲ್ಲಿ ಜಾಹೀರಾತು ನೀಡಿದ್ದಾರೆ. ಅವರಿಂದಲೂ ಹಣ ವಸೂಲಿ ಮಾಡಲಾಗುತ್ತದೆಯೇ ಎಂದು ಉಪ ಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಪ್ರಶ್ನಿಸಿದ್ದಾರೆ.

ಇದನ್ನು ಓದಿ: Assembly election: ಬಿಜೆಪಿಗೆ ಅನುಕೂಲ ಆಗುವಂತೆ ಎಎಪಿ ಪ್ರಚಾರ: ದಿನೇಶ್‌ ಗುಂಡೂರಾವ್

ಈ ಮಧ್ಯೆ, ಸರ್ಕಾರಿ ಹಣವನ್ನು ತಮ್ಮ ಪ್ರಚಾರಕ್ಕೆ ಬಳಸಿಕೊಂಡಿರುವ ಹಿನ್ನೆಲೆಯಲ್ಲಿ ಆಪ್‌ನ ಬ್ಯಾಂಕ್‌ ಖಾತೆ ಹಾಗೂ ಆ ಪಕ್ಷದ ನಾಯಕರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಬಿಜೆಪಿ ಸಂಸದ ಮನೋಜ್‌ ತಿವಾರಿ ಆಗ್ರಹಿಸಿದ್ದಾರೆ.

ಏನಿದು ಪ್ರಕರಣ?:
ದೆಹಲಿ ಸರ್ಕಾರ ರಾಜಕೀಯ ಪ್ರಚಾರಕ್ಕೆ ಭಾರಿ ಪ್ರಮಾಣದ ಜಾಹೀರಾತುಗಳನ್ನು ನೀಡುತ್ತಿದೆ ಎಂದು ದೆಹಲಿ ಹೈಕೋರ್ಟಿಗೆ 2016ರಲ್ಲಿ ಅರ್ಜಿಯೊಂದು ಸಲ್ಲಿಕೆಯಾಗಿತ್ತು. ಈ ಬಗ್ಗೆ ಪರಿಶೀಲಿಸಲು ಸರ್ಕಾರಿ ಜಾಹೀರಾತಿನಲ್ಲಿನ ಮಾಹಿತಿ ನಿಯಂತ್ರಣ ಸಮಿತಿಗೆ ಹೈಕೋರ್ಚ್‌ ಸೂಚಿಸಿತ್ತು. ಒಂದು ರಾಜಕೀಯ ಪಕ್ಷ ಅಥವಾ ರಾಜಕಾರಣಿಯ ಇಮೇಜ್‌ ವೃದ್ಧಿಗೆ ಸರ್ಕಾರಿ ಹಣ ಬಳಕೆಯಾಗುವುದನ್ನು ತಡೆಯಲು ಸುಪ್ರೀಂಕೋರ್ಟ್‌ ಮಾರ್ಗಸೂಚಿ ರೂಪಿಸಿದೆ. ಅದಾದ ತರುವಾಯವೂ ಇಮೇಜ್‌ ವೃದ್ಧಿ ಕೆಲಸ ಆಗಿದೆ. ಹೀಗಾಗಿ ಆಪ್‌ನಿಂದ ಹಣ ವಸೂಲಿ ಮಾಡಬೇಕು ಎಂದು ಸಮಿತಿ ಹೇಳಿತ್ತು. ಆ ಪ್ರಕಾರ ಈಗ ನೋಟಿಸ್‌ ಜಾರಿಗೊಳಿಸಲಾಗಿದೆ.

ಇದನ್ನು ಓದಿ: ಎಲ್ಲರೂ ಹಸುವಿನ ಹಾಲು ಕರೆದರೆ ನಾವು ___ ಹಾಲು ಕರೆದೆವು ಎಂದ ಕೇಜ್ರಿವಾಲ್

ಇದೀಗ ಆಪ್‌ಗೆ ನೀಡಲಾಗಿರುವ 163.62 ಕೋಟಿ ರೂ. ವಸೂಲಾತಿ ನೋಟಿಸ್‌ 2017ರ ಮಾರ್ಚ್‌ 31ರವರೆಗಿನ ಜಾಹೀರಾತುಗಳದ್ದು ಮಾತ್ರ. ನಂತರದ ಅವಧಿಯದ್ದರ ಲೆಕ್ಕಾಚಾರ ನಡೆಯುತ್ತಿದೆ. 163.62 ಕೋಟಿ ರೂ. ಗಳಲ್ಲಿ 99.31 ಕೋಟಿ ರೂ. ಅಸಲು ಆಗಿದ್ದರೆ, 64.31 ಕೋಟಿ ರೂ. ಬಡ್ಡಿಯಾಗಿದೆ.

Latest Videos
Follow Us:
Download App:
  • android
  • ios