Asianet Suvarna News Asianet Suvarna News

ಚೀನಾದಲ್ಲಿ ಹೊಸ ವೈರಸ್ : ರೋಗ ನಿರೋಧಕ ಶಕ್ತಿ ಹಚ್ಚಳ ಕುರಿತು ಅರಿವು

ನಗರದ ಅಮೃತ ಕೃಪಾ ಚಾರಿಟಬಲ್ ಆಸ್ಪತ್ರೆಯಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಳ ಕುರಿತು ಅರಿವು ಕಾರ್ಯಕ್ರಮ ಆಯೋಜಿಸಲಾಗಿತ್ತು. ಇತ್ತೀಚೆಗೆ ಚೀನಾದಲ್ಲಿ ಹೆಚ್ಚುತ್ತಿರುವ ವೈರಸ್ ನಿಂದ ಮತ್ತಷ್ಟು ರೋಗಗಳು ಕಂಡುಬರುವ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮುಂಜಾಗ್ರತ ಕ್ರಮ ಕೈಗೊಳ್ಳುವಂತೆ ಡಿಎಚ್ಒಗಳಿಗೆ ಸೂಚಿಸಿದೆ.

A New Virus in China: Insights into Immunity Attacks snr
Author
First Published Dec 3, 2023, 10:03 AM IST

  ಮೈಸೂರು ;  ನಗರದ ಅಮೃತ ಕೃಪಾ ಚಾರಿಟಬಲ್ ಆಸ್ಪತ್ರೆಯಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಳ ಕುರಿತು ಅರಿವು ಕಾರ್ಯಕ್ರಮ ಆಯೋಜಿಸಲಾಗಿತ್ತು. ಇತ್ತೀಚೆಗೆ ಚೀನಾದಲ್ಲಿ ಹೆಚ್ಚುತ್ತಿರುವ ವೈರಸ್ ನಿಂದ ಮತ್ತಷ್ಟು ರೋಗಗಳು ಕಂಡುಬರುವ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮುಂಜಾಗ್ರತ ಕ್ರಮ ಕೈಗೊಳ್ಳುವಂತೆ ಡಿಎಚ್ಒಗಳಿಗೆ ಸೂಚಿಸಿದೆ.

ಈ ಕುರಿತು ಪ್ರೊ. ಸುನೀತಾ ಚಂದ್ರಶೇಖರ ಶ್ರೀನಿವಾಸಗಾವೆ ಮಾತನಾಡಿ, ಸಮುದಾಯ ಮತ್ತು ನಮ್ಮ ಕುಟುಂಬಗಳ ಆರೋಗ್ಯ ಕಾಪಾಡಿಕೊಳ್ಳಲು ಭಾರತೀಯರಿಗೆ ಇದೊಂದು ಒಳ್ಳೆಯ ಸಂದರ್ಭ. ಯಾವುದೇ ಮಾದರಿಯ ಕೆಮ್ಮು, ಜ್ವರ ಮುಂತಾದ ಕಾಯಿಲೆ ಕಂಡುಬಂದರೆ ಕೂಡಲೇ ಆಸ್ಪತ್ರೆಗೆ ತೆರಳಿ ವೈದ್ಯರ ಮಾರ್ಗದರ್ಶನದಲ್ಲಿ ಚಿಕಿತ್ಸೆ ಪಡೆಯಬೇಕೆ ಹೊರತು, ತಾವೇ ಔಷಧ ಖರೀದಿಸಿ ತೆಗೆದುಕೊಳ್ಳಬಾರದು ಎಂದರು.

ರೋಗ ನಿರೋಧಕ ಶಕ್ತಿ ಹೆಚ್ಚಿಸುವುದು ಇಂದ್ರಧನುಷ್

ಕೋಲಾರ : ಜಿಲ್ಲೆಯಲ್ಲಿ ಇಂದ್ರಧನುಷ್‌ ಮಿಷನ್ ಲಸಿಕಾ ಅಭಿಯಾನ ಮೂರನೇ ಸುತ್ತಿನ ಲಸಿಕೆ ನೀಡುವ ಕಾರ್ಯಕ್ರಮ ಅ. ೧೪ರವರೆಗೆ ಹಮ್ಮಿಕೊಳ್ಳಲಾಗಿದ್ದು, ಐದು ವರ್ಷದೊಳಗಿನ ಎಲ್ಲಾ ಮಕ್ಕಳು ಹಾಗೂ ಗರ್ಭಿಣಿಯರು ಪಾಲ್ಗೊಳ್ಳುವಂತೆ ತಹಸೀಲ್ದಾರ್ ಹರ್ಷವರ್ಧನ್ ಹೇಳಿದರು.

ತಹಸೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ತೀವ್ರವಾದ ಮಿಷನ್ ಇಂದ್ರಧನುಷ್‌ ೫.೦ ಕಾರ್ಯಕ್ರಮದ ತಾಲೂಕು ಮಟ್ಟದ ಚಾಲನಾ ಸಮಿತಿ ಸಭೆಯಲ್ಲಿ ಮಾತನಾಡಿದರು.

ರೋಗ ನಿರೋಧಕ ಶಕ್ತಿ ಹೆಚ್ಚಳ

ವಯಸ್ಸಿಗನುಗುಣವಾಗಿ ಲಸಿಕೆ ಪಡೆಯದೆ ಬಿಟ್ಟು ಹೋದ ಹಾಗೂ ಲಸಿಕೆ ವಂಚಿತರಾದ ಮತ್ತು ಲಸಿಕೆ ಕಾರಣಕ್ಕೆ ಬಾಕಿ ಇರುವ ಗರ್ಭಿಣಿಯರು ಹಾಗೂ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ತೀವ್ರತರವಾದ ಇಂದ್ರಧನುಷ್‌ ಕಾರ್ಯಕ್ರಮದಲ್ಲಿ ವಿಶೇಷವಾಗಿ ದಡಾರ ಮತ್ತು ರುಬೇಲ ರೋಗ ನಿರೋಧಕತೆಯ ಶಕ್ತಿ ಹೆಚ್ಚಿಸುವ ಉದ್ದೇಶ ಹೊಂದಿದೆ, ಈ ಮಹತ್ವದ ಆರೋಗ್ಯ ಕಾರ್ಯಕ್ರಮ ಸಮರ್ಪಕವಾಗಿ ಫಲಾನುಭವಿಗಳಿಗೆ ತಲುಪುವಂತೆ ನೋಡಿಕೊಳ್ಳಬೇಕು ಎಂದರು.

ಮೂರನೇ ಸುತ್ತಿನ ಲಸಿಕೆ ಕಾರ್ಯಕ್ರಮದಲ್ಲಿ ಯಾವುದೇ ಮಗು ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು, ಮಕ್ಕಳು ಈ ವಿಶೇಷ ಲಸಿಕೆಯ ಹಾಕಿಸಲು ಹಿಂದೇಟು ಹಾಕುವ ಫಲಾನುಭವಿಗಳ ಮನವೊಲಿಸಿ ತಪ್ಪದೇ ಲಸಿಕೆ ಹಾಕಿಸಬೇಕು, ಪಟ್ಟಣ ಪ್ರದೇಶದಲ್ಲಿ ವಾಸವಾಗಿರುವ ಐದು ವರ್ಷದೊಳಗಿ ಮಕ್ಕಳು ಹಾಗೂ ಗರ್ಭಿಣಿಯರಿಗೆ ಯೋಜನೆಯ ಬಗ್ಗೆ ಅರಿವು ಮೂಡಿಸಿ ಈ ಯೋಜನೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮಾಡಬೇಕು ಎಂದರು.

Latest Videos
Follow Us:
Download App:
  • android
  • ios