ಜನರ ಶ್ರೇಯೋಭಿವೃದ್ಧಿಯೇ ಧಗ್ರಾ ಉದ್ಧೇಶ ಮದ್ಯವರ್ಜನ ಶಿಬಿರದಲ್ಲಿ ಮಾಜಿ ಶಾಸಕ ಬಚ್ಚೇಗೌಡ ಅಭಿಮತ 

ಚಿಕ್ಕಬಳ್ಳಾಪುರ (ಸೆ.15) : ಸಮಾಜದಲ್ಲಿನ ಆಶಕ್ತರ ಹಾಗೂ ಮಹಿಳೆಯರ ಸಬಲೀಕರಣಕ್ಕೆ ವಿಶೇಷ ಆಧ್ಯತೆ ನೀಡುವ ಮೂಲಕ ಶ್ರೀಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಿವಿಧ ಕಾರ್ಯಕ್ರಮಗಳು ಅನುಷ್ಟಾನಗೊಳಿಸುವ ಮೂಲಕ ಜನರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿದ್ದು ಡಾ.ವೀರೇಂದ್ರ ಹೆಗ್ಗಡೆ ಅವರ ಕಾರ್ಯ ಶ್ಲಾಘನೀಯ ಎಂದು ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ ತಿಳಿಸಿದರು.

India@75: ಶ್ರೀ ಧರ್ಮಸ್ಥಳ ಸಿರಿ ಗ್ರಾಮದ್ಯೋಗ ಸಂಸ್ಥೆಯ ಡಾ. ಎಲ್‌ ಎಚ್‌ ಮಂಜನಾಥ್‌ ವಿಶೇಷ ಸಂದರ್ಶನ

ತಾಲೂಕಿನ ಮಂಚನಬೆಲೆ ಗ್ರಾಮದ ವೀರಭದ್ರ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸೋಮವಾರ ನಡೆದ 1583 ನೇಯ ಮದ್ಯವರ್ಜನ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಘ ಜನರ ಕಲ್ಯಾಣಕ್ಕೆ ವಿಶೇಷ ಕಾಳಜಿ ವಹಿಸಿ ಕೆಲಸ ಮಾಡುತ್ತಿದೆ ಎಂದರು.

ಜೆಡಿಎಸ್‌ ಜಿಲ್ಲಾಧ್ಯಕ್ಷ ಕೆ.ಎಂ.ಮುನೇಗೌಡ ಮಾತನಾಡಿ, ದುಶ್ಚಟಗಳಿಂದ ದೂರವಿದ್ದರೆ ಮಾತ್ರ ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ಜೀವನ ನಡೆಸಲು ಸಾಧ್ಯ. ದುಷ್ಚಟಗಳಿಗೆ ಬಲಿಯಾದರೆ ಜೀವನ ಸರ್ವ ನಾಶವಾಗಲಿದ್ದು, ಉತ್ತಮ ಸಮಾಜ ನಿರ್ಮಾಣಕ್ಕಾಗಿ ಪ್ರತಿಯೊಬ್ಬರು ಕೈ ಜೋಡಿಸಬೇಕು ಎಂದು ಹೇಳಿದರು.

ದೇಶಾದ್ಯಂತ ಕಾಮನ್‌ ಸರ್ವಿಸ್‌ ಸೆಂಟರ್‌ ಸ್ಥಾಪನೆ ಚಿಂತನೆ: ಹೆಗ್ಗಡೆ

ಶಿಬಿರದಲ್ಲಿ ಮಂಚನಬಲೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗಾಯತ್ರಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಜಿಲ್ಲಾ ನಿರ್ದೇಶಕ ಸಿ.ಎಸ….ಪ್ರಶಾಂತ…, ಮದ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿಯ ಗೌರವ ಸಲಹೆಗಾರ ವೆಂಕಟನಾರಾಯಣಪ್ಪ, ಗ್ರಾಪಂ ಸದಸ್ಯರಾದ ಮಧು, ರಮೇಶ…, ಬೆಂಗಳೂರು ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿ ಗಣೇಶ್‌ ಆಚಾರ್ಯ, ತಾಲೂಕು ಯೋಜನಾಧಿಕಾರಿ ಧನಂಜಯ…, ಯೋಜನಾ ಕಾರ್ಯಕರ್ತರು ಇದ್ದರು.