ಬೆಳಗಾವಿ ಜಿಲ್ಲೆಯ ಗೋಕಾಕ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ಏಕಕಾಲಕ್ಕೆ ಮೂರು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಮೂಡಲಗಿ ತಾಲೂಕಿನ ಸಂಗನಕೇರಿ ಗ್ರಾಮದ 20 ವರ್ಷದ ರೇಣುಕಾ ಗಣಾಚಾರಿ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ್ದು, ತಾಯಿ ಹಾಗೂ ಮೂವರು ಮಕ್ಕಳು ಆರೋಗ್ಯವಾಗಿದ್ದಾರೆ.

ಬೆಳಗಾವಿ (ಆ.12): ಮಹಿಳೆಯೊಬ್ಬರು ಏಕಕಾಲಕ್ಕೆ ಮೂರು ಮಕ್ಕಳಿಗೆ ಜನ್ಮ ನೀಡಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

ತಾಯಿ ಹಾಗೂ ಮೂವರು ಮಕ್ಕಳು ಆರೋಗ್ಯವಾಗಿದ್ದಾರೆ. ಮೂಡಲಗಿ ತಾಲೂಕಿನ ಸಂಗನಕೇರಿ ಗ್ರಾಮ(Sanganakeri village)ದ 20 ವರ್ಷದ ರೇಣುಕಾ ಗಣಾಚಾರಿ(Renuka ganachari) ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ. ಗೋಕಾಕ ಸರ್ಕಾರಿ ಆಸ್ಪತ್ರೆಯ ವೈದ್ಯೆ ಡಾ.ಶ್ವೇತಾ ನಾಯಿಕ ಹಾಗೂ ವೈದ್ಯಕೀಯ ಸಿಬ್ಬಂದಿ ಯಶಸ್ವಿಯಾಗಿ ಹೆರಿಗೆ ನಡೆಸಿದ್ದಾರೆ.

ಇದನ್ನೂ ಓದಿ: ತ್ರಿವಳಿಗೆ ಜನ್ಮ ನೀಡಿದ 5 ವರ್ಷದ ನಂತರ 4 ಮಕ್ಕಳಿಗೆ ಒಮ್ಮೆಗೆ ಜನ್ಮ ನೀಡಿದ ಗಾರೆ ಕೆಲಸ ಮಾಡ್ತಿದ್ದ ತಾಯಿ

ಹೆರಿಗೆಯ ಬಳಿಕ ತಾಯಿ ಹಾಗೂ ಮೂವರು ಮಕ್ಕಳು ಆರೋಗ್ಯವಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ವೈದ್ಯರ ನಿಗಾದಲ್ಲಿ ಇರಿಸಲಾಗಿದೆ. ತ್ರಿವಳಿ ಮಕ್ಕಳ ಜನನದಿಂದ ಕುಟುಂಬಸ್ಥರಲ್ಲಿ ಸಂತಸ ಮನೆ ಮಾಡಿದೆ.

ಇದನ್ನೂ ಓದಿ:62ರ ಪ್ರಾಯದಲ್ಲಿ ತ್ರಿಬಲ್ ಧಮಾಕ: ತ್ರಿವಳಿಗೆ ಜನ್ಮ ನೀಡಿದ 2ನೇ ಪತ್ನಿ!