ಬೆಳಗಾವಿ [ಜು. 29]   ಇದನ್ನು ಯಾವ ಅರ್ಥದಲ್ಲಿ ಹೇಳಬೇಕೋ ಗೊತ್ತಾಗುತ್ತಿಲ್ಲ. ಆಸ್ಪತ್ರೆ ಆವರಣದಲ್ಲೇ ನವಜಾತ ಶಿಶುವನ್ನು ಪೋಷಕರು ಬಿಟ್ಟು ಹೋಗಿದ್ದಾರೆ. ಬೆಳಗಾವಿ ಜಿಲ್ಲಾ ಆಸ್ಪತ್ರೆ ಮುಂಭಾಗದಲ್ಲಿ ಚೀಲದಲ್ಲಿ ಶಿಶುವೊಂದು ಪತ್ತೆಯಾಗಿದೆ.

ಹೆಣ್ಣು ಹುಟ್ಟಿದೆ ಎಂಬ ಕಾರಣಕ್ಕೆ ಚೀಲದಲ್ಲಿ ಹಾಕಿ ಕಟ್ಟಿ ಆಸ್ಪತ್ರೆ ಹೊರ ಭಾಗದ ಕಟ್ಟೆ ಮೇಲೆ ಬಿಟ್ಟು ಹೋಗಲಾಗಿದೆ ಎಂದು ಹೇಳಲಾಗುತ್ತಿದೆ. ಮಗು ಅಳುತ್ತಿರುವುದನ್ನ ಕಂಡ ಸ್ಥಳೀಯರು ಶಿಶು ರಕ್ಷಣೆ ಮಾಡಿದ್ದಾರೆ.

ಜಿಲ್ಲಾಸ್ಪತ್ರೆಯಲ್ಲಿ ಹೆಣ್ಣು ಹಸುಗೂಸಿಗೆ ಚಿಕಿತ್ಸೆ ನೀಡಲಾಗಿದ್ದು ಸ್ಥಳಕ್ಕೆ ಎಪಿಎಂಸಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.