2ಬಿ ಮೀಸಲಾತಿ ರದ್ದು : ಸ್ವಾಮೀಜಿಗಳ ಮದ್ಯ ಪ್ರವೇಶಕ್ಕೆ ಎಸ್‌ಡಿಪಿಐ ಆಗ್ರಹ

ರಾಜ್ಯದ ಬಡ ಮುಸ್ಲಿಂ ಸಮುದಾಯದ ಶೇ. 4 ಮೀಸಲಾತಿಯನ್ನು ರದ್ದುಪಡಿಸಿ ಲಿಂಗಾಯತರು ಮತ್ತು ಒಕ್ಕಲಿಗರಿಗೆ ಹಂಚಿರುವುದನ್ನು ಸುತ್ತೂರು ಶ್ರೀಗಳು ಹಾಗೂ ಆದಿ ಚುಂಚನಗಿರಿ ಶ್ರೀಗಳು ತಿರಸ್ಕರಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ತಿಳಿವಳಿಕೆ ನೀಡಬೇಕು ಎಂದು ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್‌ ಮಜೀದ್‌ ವಿನಂತಿಸಿದರು.

Abolition of 2B reservation : SDPI demands for Swamijis Interfere snr

 ಮೈಸೂರು :  ರಾಜ್ಯದ ಬಡ ಮುಸ್ಲಿಂ ಸಮುದಾಯದ ಶೇ. 4 ಮೀಸಲಾತಿಯನ್ನು ರದ್ದುಪಡಿಸಿ ಲಿಂಗಾಯತರು ಮತ್ತು ಒಕ್ಕಲಿಗರಿಗೆ ಹಂಚಿರುವುದನ್ನು ಸುತ್ತೂರು ಶ್ರೀಗಳು ಹಾಗೂ ಆದಿ ಚುಂಚನಗಿರಿ ಶ್ರೀಗಳು ತಿರಸ್ಕರಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ತಿಳಿವಳಿಕೆ ನೀಡಬೇಕು ಎಂದು ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್‌ ಮಜೀದ್‌ ವಿನಂತಿಸಿದರು.

ಮುಸ್ಲಿಂ ಸಮುದಾಯವನ್ನು ಶಿಕ್ಷಣ ಮತ್ತು ಉದ್ಯೋಗದಿಂದ ದೂರವಿಡಲು ಬಿಜೆಪಿ ಸರ್ಕಾರ ಶೇ. 4(2ಬಿ)ಮೀಸಲಾತಿ ರದ್ದು ಪಡಿಸಿರುವುದನ್ನು ಖಂಡಿಸಿ ನಗರದ ಸಂತ ಫಿಲೋಮಿನಾ ಚಚ್‌ರ್‍ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದ ನಂತರ ಮುಸ್ಲಿಂ ಸಮುದಾಯಕ್ಕೆ ನಿರಂತರವಾಗಿ ವಿವಿಧ ರೂಪದಲ್ಲಿ ಹಿಂಸೆ ನೀಡುತ್ತಾ ಬಂದಿದೆ. ಹಿಜಾಬ…, ಹಲಾಲ…, ಎನ್‌ಆರ್‌ಸಿ, ಬುರ್ಖಾ, ಭೀಫ್‌ ಬ್ಯಾನ್‌, ತ್ರಿಬಲ್‌ ತಲಾಖ್‌, ಕೊರೋನಾ ಮೂಲಕ ಅಸಂಬದ್ಧ ವಿಚಾರ ಮುಂದಿಟ್ಟು ಮುಸ್ಲಿಂ ಸಮುದಾಯವನ್ನು ಹಿಂಸಿಸುತ್ತಿದೆ ಎಂದು ದೂರಿದರು.

ಬಿಜೆಪಿ ಸಂಪೂರ್ಣ ಭ್ರಷ್ಟಾಚಾರ

ಎಸ್‌ಐ ನೇಮಕಾತಿಗೆ 80 ಲಕ್ಷ ಲಂಚ, ಪ್ರಾಧ್ಯಾಪಕರ ನೇಮಕಾತಿಯಲ್ಲಿ ಭಾರಿ ಭ್ರಷ್ಟಾಚಾರ, ಪ್ರಶ್ನೆಪತ್ರಿಕೆ ಸೋರಿಕೆ, ಗುತ್ತಿಗೆದಾರರಿಂದ ಶೇ. 40ರಷ್ಟುಲಂಚ, ಹೀಗೆ ಮುಂಬರುವ ಚುನಾವಣೆಯಲ್ಲಿ ಬಿಜೆಪಿಗೆ ಜನರ ಬಳಿಮತ ಯಾಚನೆ ಮಾಡಲು ಯಾವುದೇ ವಿಷಯವಿಲ್ಲ. ಆದ್ದರಿಂದ ಅದು ಮುಸ್ಲಿಂ ಸಮುದಾಯದ ಮೀಸಲಾತಿ ರದ್ದುಪಡಿಸಿ ಬಲಿಷ್ಠಕೋಮುಗಳಾದ ಒಕ್ಕಲಿಗರು ಮತ್ತು ಲಿಂಗಾಯರನ್ನು ಮೆಚ್ಚಿಸಲು ಹೊರಟಿದೆ ಎಂದು ಆರೋಪಿಸಿದರು.

ಧಮ್ ಇದ್ದರೆ ಮೀಶಲಾತಿ ತೆಗೆಯುತ್ತೇನೆನ್ನಲಿ

ಬೆಂಗಳೂರು (ಮಾ.31): ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಿಗೆ ತಾಕತ್‌ ಇದ್ದರೆ, ಧಮ್‌ ಇದ್ದರೆ ಈಗ ಲಿಂಗಾಯತರು ಮತ್ತು ಒಕ್ಕಲಿಗರಿಗೆ ನೀಡಿರುವ ಮೀಸಲಾತಿ ಕಿತ್ತು ಹಾಕುತ್ತೇವೆ ಎಂಬುದಾಗಿ ಮತ್ತೊಮ್ಮೆ ಹೇಳಲಿ ನೋಡೋಣ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಸವಾಲು ಹಾಕಿದ್ದಾರೆ. ಮುಖ್ಯಮಂತ್ರಿಗಳ ನಿವಾಸದ ಬಳಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮೀಸಲಾತಿ ಕಿತ್ತು ಹಾಕುವ ಡಿ.ಕೆ.ಶಿವಕುಮಾರ್‌ ಹೇಳಿಕೆಗೆ ಪ್ರತಿಕ್ರಿಯಿಸಿ, ಮೀಸಲಾತಿ ಕಿತ್ತುಹಾಕಿದರೆ ಕಾಂಗ್ರೆಸ್‌ ಅನ್ನು ಜನ ಮೂಲೆಗುಂಪು ಮಾಡಿ ಸರ್ವನಾಶ ಮಾಡುತ್ತಾರೆ. ಈ ರಾಜ್ಯದಲ್ಲಿ ಲಿಂಗಾಯತರು, ಒಕ್ಕಲಿಗರು ದೊಡ್ಡ ಶಕ್ತಿ. ಡಿ.ಕೆ.ಶಿವಕುಮಾರ್‌ ತಮ್ಮ ಬ್ರದ​ರ್‍ಸ್ಗಾಗಿ ಈ ಹೇಳಿಕೆ ನೀಡಿದ್ದಾರೆ. ಈ ರೀತಿ ಮಾಡಿದರೆ ಅವರ ಸಮುದಾಯವೇ ಅವರಿಗೆ ಮತ ಹಾಕುವುದಿಲ್ಲ. 

ಅವರು ಮೆಕ್ಕಾ-ಮದೀನಾಕ್ಕೆ ಹೋಗಬೇಕಾಗುತ್ತದೆ ಎಂದರು. ಮೀಸಲಾತಿ ವಿಚಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಐತಿಹಾಸಿಕ ನಿರ್ಧಾರ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ, ಶೋಭಾ ಕರಂದ್ಲಾಜೆ ಅವರಿಗೆ ಅಭಿನಂದಿಸುತ್ತೇವೆ. ಪ್ರವರ್ಗ 2ಎಗೆ ಹೋಗಿದ್ದರೆ ಉಳಿದ ಸಮುದಾಯಕ್ಕೆ ಅನ್ಯಾಯವಾಗುತ್ತಿತ್ತು. ಇಂದು ರಾಮಜನ್ಮ ದಿನ. ಇಂದು ನಮಗೆ ನ್ಯಾಯ ಸಿಕ್ಕಿದೆ ಎಂದು ಶಾಸಕ ಯತ್ನಾಳ್‌ ಸಂತಸ ವ್ಯಕ್ತಪಡಿಸಿದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

ಬೊಂಬ್ಡಾ ಬಡಿದರೂ ಜೆಡಿಎಸ್‌ ಅಧಿಕಾರಕ್ಕೆ ಬರಲ್ಲ: ಸಿದ್ದರಾಮಯ್ಯ ಭವಿಷ್ಯ

ಬಿಜೆಪಿ ಸರ್ಕಾರದ ನಿರ್ಧಾರದಿಂದ ಕಾಂಗ್ರೆಸ್‌ ಮುಖಂಡರು ಹತಾಶ: ನಿರ್ಮಲಾನಂದ ಸ್ವಾಮೀಜಿ ಹಾಗೂ ಪಂಚಮಸಾಲಿ ಪೀಠದ ಜಯಬಸವ ಮೃತ್ಯುಂಜಯ ಸ್ವಾಮೀಜಿಗೆ ಮೀಸಲಾತಿ ಒಪ್ಪಿಕೊಳ್ಳಿ ಎಂದು ಬಿಜೆಪಿ ನಾಯಕರು ಕರೆ ಮಾಡಿ ಒತ್ತಡ ಹಾಕಿದ್ದಾರೆ ಎಂಬ ಡಿ.ಕೆ.ಶಿವಕುಮಾರ ಮಾಡಿರುವ ಆರೋಪ ಆಧಾರ ರಹಿತವಾಗಿದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಕ್ಕಲಿಗ ಸಮುದಾಯ ಹಾಗೂ ವೀರೇಶ್ವ ಲಿಂಗಾಯತ ಸಮುದಾಯಕ್ಕೆ ಮೀಸಲಾತಿ ಘೋಷಣೆ ವಿಚಾರದಲ್ಲಿ ಸಮುದಾಯದ ಶ್ರೀಗಳಿಗೆ ಒತ್ತಡ-ಬೆದರಿಕೆ ಹಾಕಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಮಾಡಿರುವ ಆರೋಪ ಆಧಾರ ರಹಿತ. ಗೂಂಡಾಗಳ ಬಾಯಲ್ಲಿ ಅದೇ ರೀತಿಯ ಮಾತುಗಳು ಬರುತ್ತವೆ ಎಂದರು.

ಕಾಂಗ್ರೆಸ್‌ ಪಕ್ಷದಲ್ಲಿ ಇದ್ದಂತೆ ಬಿಜೆಪಿ ಪಕ್ಷದಲ್ಲಿ ಯಾರೂ ಗುಂಡಾ ನಾಯಕರಿಲ್ಲ. ಕಾಂಗ್ರೆಸ್‌ ಮುಖಂಡರಂತೆ ಉಪಾಧ್ಯಾಪಿತನ ಮಾಡುವ ಸಂಸ್ಕೃತಿ ಬಿಜೆಪಿ ಪಕ್ಷದಲ್ಲಿ ಇಲ್ಲ. ಬಿಜೆಪಿ ಸರ್ಕಾರ ಪರಿಶಿಷ್ಟ ಜಾತಿ, ಪಂಗಡದ ಜನರಿಗೆ ಮೀಸಲಾತಿ ಹೆಚ್ಚಿಸಿದ್ದನ್ನು ಕಾಂಗ್ರೆಸ್‌ ನಾಯಕರಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ. ಹೀಗಾಗಿ ವ್ಯರ್ಥ ಟೀಕೆಗಳನ್ನು ಮಾಡುತ್ತಾರೆ ಎಂದರು. ಎಲ್ಲಾ ಸಮುದಾಯಗಳ ಮೀಸಲಾತಿ ನೀಡುವ ಉದ್ದೇಶದಿಂದಲೇ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹಸಚಿವ ಅಮಿತ್‌ ಶಾ ಅವರು ನೇರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮೀಸಲಾತಿ ಕಲ್ಪಿಸಲು ಸೂಕ್ತ ನಿರ್ದೇಶನ ನೀಡಿದ್ದರು. 

Latest Videos
Follow Us:
Download App:
  • android
  • ios