ರಾಷ್ಟ್ರಧ್ವಜಕ್ಕಿಂತಲೂ ಎತ್ತರದಲ್ಲಿ ಎಬಿವಿಪಿ ಧ್ವಜ ಹಾರಾಟ, ಶಿಕ್ಷಣ ಸಚಿವರ ವಿರುದ್ಧ ದೂರು
ರಾಷ್ಟ್ರಧ್ವಜಕ್ಕಿಂತಲೂ ಎತ್ತರದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಕೇಸರಿ ಧ್ವಜ ಹಾರಾಡಿದ ವಿಚಾರವಾಗಿ ಇದೀಗ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಿರುದ್ಧ ಕಾಂಗ್ರೆಸ್ ದೂರು ನೀಡಿದೆ.
ತುಮಕೂರು (ಅ.11): ರಾಷ್ಟ್ರಧ್ವಜಕ್ಕಿಂತಲೂ ಎತ್ತರದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಕೇಸರಿ ಧ್ವಜ ಹಾರಾಡಿದ ವಿಚಾರವಾಗಿ ಇದೀಗ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಿರುದ್ಧ ಕಾಂಗ್ರೆಸ್ ದೂರು ನೀಡಿದೆ. ತಿಪಟೂರು ಡಿವೈಎಸ್ಪಿ ಕಚೇರಿಗೆ ತುಮಕೂರು ಜಿಲ್ಲಾ ಕಾಂಗ್ರೆಸ್ ನ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಹರಿಪ್ರಸಾದ್ ದೂರು ನೀಡಿದ್ದಾರೆ. ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿರುವ ಶಿಕ್ಷಣ ಸಚಿವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರಿನಲ್ಲಿ ಕೊರಲಾಗಿದೆ. ಆಗಸ್ಟ್ 10ರಂದು ತಿಪಟೂರು ನಗರದಲ್ಲಿ ಎಬಿವಿಪಿ ಮತ್ತು ಬಾಲಕರ ಹಾಗೂ ಬಾಲಕಿಯರ ಪದವಿ ಪೂರ್ವ ಕಾಲೇಜುಗಳ ಸಂಯುಕ್ತಾಶ್ರಯದಲ್ಲಿ ಮೆರವಣಿಗೆ ಮೂಲಕ ರಾಷ್ಟ್ರಧ್ವಜದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಆದರೆ ಈ ವೇಳೆ ತ್ರಿವರ್ಣ ಧ್ವಜಕ್ಕಿಂತಲೂ ಮೇಲೆ ಎಬಿವಿಪಿಯ ಧ್ವಜವನ್ನು ಹಾರಿಸಲಾಗಿತ್ತು, ಸಚಿವರ ಪಕ್ಕದಲ್ಲೇ ಈ ಘಟನೆ ನಡೆದಿದ್ದರೂ ಕೂಡ ಸಚಿವ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಧ್ವಜವನ್ನು ಕೆಳಗಿಸಲು ಸೂಚಿಸಿಲ್ಲ ಹಾಗೇ ಪೋಟೋಗೆ ಪೋಸು ನೀಡಿದ್ದಾರೆ. ಈ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಲಾಗಿದೆ.
ತಿಪಟೂರಲ್ಲಿ ತ್ರಿವರ್ಣ ಧ್ವಜದ ಮೆರವಣಿಗೆ:
ತಿಪಟೂರಿನಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ತಿಪಟೂರು ಘಟಕ, ಬಾಲಕರ ಮತ್ತು ಬಾಲಕಿಯರ ಪದವಿ ಪೂರ್ವ ಕಾಲೇಜುಗಳ ಸಂಯುಕ್ತಾಶ್ರಯದಲ್ಲಿ ಅಜಾದಿ ಕಾ ಅಮೃತ ಮಹೋತ್ಸವ ಆಚರಣೆ ಅಂಗವಾಗಿ ತಿರಂಗಾ ಯಾತ್ರೆ ಅಭಿಯಾನವನ್ನು ತಿಪಟೂರು ಗ್ರಾಮದೇವತೆ ಕೆಂಪಮ್ಮದೇವಿ ದೇವಸ್ಥಾನದಿಂದ ಐಬಿ ಸರ್ಕಲ್‌ವರೆಗೆ 180 ಅಡಿ ಉದ್ದದ ತ್ರಿವಣ ಧ್ವಜ ಹಾಗೂ ರಾಷ್ಟ್ರಧ್ವಜದ ಬಾವುಟಗಳ ಮೆರವಣಿಗೆ ಬುಧವಾರ ನಡೆಯಿತು.
ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಜೊತೆ ಸಾವಿರಾರು ವಿದ್ಯಾರ್ಥಿಗಳು ತ್ರಿವರ್ಣ ಧ್ವಜ ಹಿಡಿದು ಭಾರತ್ ಮಾತಾಕಿ ಜೈ ಹಾಗೂ ವಂದೇ ಮಾತರಂ ಘೋಷಣೆ ಕೂಗಿದರು. ನಂತರ ಬಯಲು ರಂಗಮಂದಿರದಲ್ಲಿ ಬೃಹತ್ ಬಹಿರಂಗ ಸಮಾವೇಶ ನಡೆಯಿತು.
ಈ ವೇಳೆ ಪ್ರಾಂಶುಪಾಲ ಎಂ.ಡಿ. ಶಿವಕುಮಾರ್ ಮಾತನಾಡಿ, ವಿದ್ಯಾರ್ಥಿ ಶಕ್ತಿ ದೇಶ ಶಕ್ತಿಯಾಗಿರುವುದರಿಂದ ಇಂದಿನ ಯುವಪೀಳಿಗೆ ರಾಷ್ಟ್ರಧ್ವಜ, ರಾಷ್ಟ್ರಗೀತೆ ಹಾಗೂ ರಾಷ್ಟ್ರ ಲಾಂಭನವನ್ನು ಗೌರವಿಸುತ್ತಾ ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯಬೇಕೆಂದರು.
ಸಾಮಾಜಿಕ ಕಾರ್ಯಕರ್ತ ಹರ್ಷ ಮಾತನಾಡಿ, ಭಾರತದ ಸ್ವಾತಂತ್ರ್ಯ ಇತಿಹಾಸದ ವಿವಿಧ ಮಜಲುಗಳನ್ನು ತಿಳಿಸುತ್ತಾ ವಿದ್ಯಾರ್ಥಿಗಳು ದೇಶಪ್ರೇಮವನ್ನು ಬೆಳೆಸಿಕೊಳ್ಳಬೇಕೆಂದರು. ವಿದ್ಯಾರ್ಥಿಗಳಿಂದ ದೇಶಭಕ್ತಿಯ ಘೋಷಣೆಗಳು ಮೊಳಗಿದವು, ಸಮಾವೇಶದಲ್ಲಿ ವಿದ್ಯಾರ್ಥಿಗಳನ್ನು ಭಾರತದ ಭೂಪಟದಂತೆ ಕುಳ್ಳರಿಸಿದ್ದು ವಿಶೇಷವಾಗಿತ್ತು.
ತಿಪಟೂರಿನ ಪ್ರಮುಖ ರಸ್ತೆಯಲ್ಲಿ ನಡೆದ 180 ಅಡಿಗಳ ತ್ರಿವರ್ಣ ಧ್ವಜದ ಮೆರವಣಿಗೆ ನಡೆಯಿತು. ಈ ಸಂದರ್ಭದಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಪ್ರಾಂಶುಪಾಲ ಪರಶಿವಮೂರ್ತಿ, ಉಪನ್ಯಾಸಕರಾದ ಸಚ್ಚಿದಾನಂದಮೂರ್ತಿ, ಭೈರೇಶ್, ಪ್ರದೀಪ್, ಅಭಿಷೇಕ್, ಜ್ಞಾಪಕ್, ಜಿಲ್ಲಾ ಎಬಿವಿಪಿಯ ಗಣೇಶ್, ಅಪ್ಪುಪಾಟೀಲ್, ತಾಲೂಕು ಅಧ್ಯಕ್ಷ ಭೈರೇಶ್ ಹಾಗೂ ವಿದ್ಯಾರ್ಥಿಗಳಿದ್ದರು.
ಪಾಲಿಸ್ಟರ್ ಧ್ವಜ: ಕೇಂದ್ರದಿಂದ ಸ್ವಾತಂತ್ರ್ಯ ಆಂದೋಲನಕ್ಕೆ ಮಾಡಿದ ಅವಮಾನ, ಖಾದರ್
ಖಾದಿ ಧ್ವಜ ಬಳಕೆಗೆ ಒತ್ತಾಯಿಸಿ ಸತ್ಯಾಗ್ರಹ: ಗ್ರಾಮ ಸೇವಾ ಸಂಘ, ಜನ ಸಂಗ್ರಾಮ ಪರಿಷತ್, ಸರ್ವೋದಯ ಮಂಡಳಿ, ತುಮಕೂರು ಸಂಯುಕ್ತ ಆಶ್ರಯದಲ್ಲಿ ಖಾದಿ ಬಾವುಟ ಬಳಸಲು ಒತ್ತಾಯಿಸಿ ಧ್ವಜ ಸತ್ಯಾಗ್ರಹ ಶುಕ್ರವಾರದಂದು ಬೆಳಗ್ಗೆ 10 ಗಂಟೆಗೆ ತುಮಕೂರಿನ ಮಂಡಿಪೇಟೆ ಸಮೀಪದ ಸ್ವಾತಂತ್ರ್ಯ ಚೌಕದಲ್ಲಿ ಧ್ವಜ ಸತ್ಯಾಗ್ರಹವನ್ನು ಆಯೋಜಿಸಲಾಗಿದೆ. ಈ ಬಗ್ಗೆ ಸಹಮತ ಉಳ್ಳ ಆಸಕ್ತರು , ಸಾಹಿತಿ ಕಲಾವಿದರು, ಸಂಗೀತಗಾರರು, ಹಾಡುಗಾರರು, ರೈತ ಕಾರ್ಮಿಕ ವಿದ್ಯಾರ್ಥಿ ಯುವ ಜನ ಗುಂಪುಗಳು, ನಗರದ ನಾಗರಿಕ ಬಂಧುಗಳು, ಇವರೆಲ್ಲರನ್ನು ಈ ಸತ್ಯಾಗ್ರಕ್ಕೆ ಆಹ್ವಾನಿಸಲಾಗುತ್ತಿದೆ.
ಚಿತ್ರದುರ್ಗ: ಕೋಟೆನಾಡಲ್ಲಿ ಗಮನ ಸೆಳೆಯುತ್ತಿರುವ ತ್ರಿವರ್ಣ ಧ್ವಜದ ಲೈಟಿಂಗ್ಸ್
ಸ್ವತಂತ್ರ ಚೌಕದಿಂದ ಸತ್ಯಾಗ್ರಹಿಗಳು ಕೋತಿ ತೋಪಿನಲ್ಲಿರುವ ಬಾಪೂಜಿ ವಿದ್ಯಾಸಂಸ್ಥೆಯ ರವೀಂದ್ರ ಕಲಾನಿಕೇತನದವರೆಗೆ ಪಾದಯಾತ್ರೆ ನಡೆಸಿ ಅಲ್ಲಿ ಸತ್ಯಾಗ್ರವನ್ನ ಅಂತಿಮಗೊಳಿಸಲಿದ್ದಾರೆ. ಹಿರಿಯ ರಂಗಕರ್ಮಿ ಚರಕ ಖ್ಯಾತಿಯ ಪ್ರಸನ್ನ ಹೆಗ್ಗೋಡು ಮತ್ತು ಅನೇಕ ಗಾಂಧಿಗಾದಿಗಳು, ಸಹಜ ಬೇಸಾಯಗಾರರು, ಪ್ರಗತಿಪರರು, ಪರಿಸರ ಪ್ರೇಮಿಗಳು ಹಾಗೂ ಅನೇಕ ಆಸಕ್ತ ಸಂಸ್ಥೆಗಳ ಮುಖಂಡರು ಈ ಸತ್ಯಾಗ್ರದಲ್ಲಿ ಪೂರ್ಣವಾಗಿ ಭಾಗವಹಿಸುತ್ತಿದ್ದು, ಆಸಕ್ತರು ಪಾಲ್ಗೊಳ್ಳಬಹುದಾಗಿದೆ ಎಂದು ಸಿ.ಯತಿರಾಜು, ಎನ್.ಎಸ್. ಪಂಡಿತ್ ಜವಹರ್, ಆರ್.ವಿ. ಪುಟ್ಟಕಾಮಣ್ಣ ತಿಳಿಸಿದ್ದಾರೆ.