ಚಿಕ್ಕಮಗಳೂರಿನಲ್ಲಿ ಎಬಿವಿಪಿ ಪ್ರತಿಭಟನೆ: ಗೃಹ ಇಲಾಖೆ ವಿರುದ್ದ ವಿದ್ಯಾರ್ಥಿ ಸಂಘಟನೆ ಆಕ್ರೋಶ

ರಾಜ್ಯದ ಕರಾವಳಿ ಭಾಗದಲ್ಲಿ ನಡೆದ ಹತ್ಯೆಯನ್ನು ಖಂಡಿಸಿ ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ ಮುಂದುವರಿದೆ. ಇಂದು ಕೂಡ ಪ್ರವೀಣ್ ಹತ್ಯೆ ಖಂಡಿಸಿ ಭಜರಂಗಳ ದಳ, ವಿಶ್ವಹಿಂದೂ ಪರಿಷತ್ ಪ್ರತಿಭಟನೆ ನಡೆಸಿದರೆ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಸಂಘಟನೆ ಪಿಎಫ್ಐ, ಎಸ್‌ಡಿಪಿಐ ನಿಷೇಧಕ್ಕೆ ಒತ್ತಾಯ ಮಾಡಿದೆ.

abvp protest demanding ban of pfi sdpi organizations at chikkamagaluru gvd

ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು 

ಚಿಕ್ಕಮಗಳೂರು (ಆ.01): ರಾಜ್ಯದ ಕರಾವಳಿ ಭಾಗದಲ್ಲಿ ನಡೆದ ಹತ್ಯೆಯನ್ನು ಖಂಡಿಸಿ ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ ಮುಂದುವರಿದೆ. ಇಂದು ಕೂಡ ಪ್ರವೀಣ್ ಹತ್ಯೆ ಖಂಡಿಸಿ ಭಜರಂಗಳ ದಳ, ವಿಶ್ವಹಿಂದೂ ಪರಿಷತ್ ಪ್ರತಿಭಟನೆ ನಡೆಸಿದರೆ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಸಂಘಟನೆ ಪಿಎಫ್ಐ, ಎಸ್‌ಡಿಪಿಐ ನಿಷೇಧಕ್ಕೆ ಒತ್ತಾಯ ಮಾಡಿದೆ.

ಸಂಘಟನೆಗಳ ನಿಷೇಧಕ್ಕೆ ಒತ್ತಾಯಿಸಿ ಎಬಿವಿಪಿ ಪ್ರತಿಭಟನೆ: ರಾಜ್ಯದಲ್ಲಿ ಕೊಲೆ, ಕೋಮುಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದರ ಹಿಂದಿರುವ ಪಿಎಫ್ಐ, ಸಿಎಫ್ಐ, ಎಸ್ಡಿಪಿಐ ಸಂಘಟನೆಗಳನ್ನು ನಿಷೇಧಿಸಬೇಕೆಂದು ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವತಿಯಿಂದ ಚಿಕ್ಕಮಗಳೂರು ನಗರದಲ್ಲಿ ಪ್ರತಿಭಟನೆ ನಡೆಯಿತು. ಆಜಾದ್‌ ಪಾರ್ಕ್‌ನಲ್ಲಿ ಸಮಾವೇಶಗೊಂಡ ಎಬಿವಿಪಿ ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕರಾವಳಿಯಲ್ಲಿ ಪ್ರವೀಣ್ ನೆಟ್ಯಾರು ಹತ್ಯೆ ನಡೆದಿದ್ದು, ರಾಜ್ಯದ ಜನತೆಗೆ ಅಭದ್ರತೆಯಲ್ಲಿ ಜೀವನ ನಡೆಸುತ್ತಿದ್ದಾರೆ ಎನ್ನುವುದಕ್ಕೆ ಸ್ಪಷ್ಟ ನಿದರ್ಶನವಾಗಿದೆ. ರಾಜ್ಯದಲ್ಲಿ ಹಿಂದೂ ಸಂಘಟನೆ ಮತ್ತು ಸಿದ್ಧಾಂತದ ಪರವಾಗಿ ಹೋರಾಟ ಮಾಡುವವರನ್ನು ಗುರಿಯಾಗಿಸಿಕೊಂಡು ಕೊಲೆ ನಡೆಸುತ್ತಿರುವುದು ಖಂಡನೀಯವೆಂದರು.

ಕರಾವಳಿಯಲ್ಲಿ ಸರಣಿ ಹತ್ಯೆಗಳ ಬೆನ್ನಲ್ಲೇ ಗನ್ ಮ್ಯಾನ್ ಕೇಳಿದ ಜೆಡಿಎಸ್ ಮುಖಂಡ

ಗೃಹ ಇಲಾಖೆ ವಿರುದ್ದ ವಿದ್ಯಾರ್ಥಿ ಸಂಘಟನೆ ಆಕ್ರೋಶ: ರಾಜ್ಯದಲ್ಲಿ ಪದೇ ಪದೇ ಕೊಲೆಗಳು ನಡೆಯುತ್ತಿರುವುದನ್ನು ಗಮನಿಸಿದರೆ, ಗೃಹ ಇಲಾಖೆ ವೈಫಲ್ಯತೆ ಎದ್ದು ಕಾಣುತ್ತಿದೆ. ಹತ್ಯೆ ಕೃತ್ಯದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಶೀಘ್ರವೇ ಬಂಧಿಸಬೇಕು. ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದು  ಎಬಿವಿಪಿ ಜಿಲ್ಲಾ ಸಂಚಾಲಕ ಶಶಾಂಕ್ ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ಒಂದು ಸಿದ್ಧಾಂತ ಮತ್ತು ರಾಷ್ಟ್ರೀಯತೆ ವಿಚಾರಧಾರೆಗಳ ಪರವಾಗಿ ಕೆಲಸ ಮಾಡುತ್ತಿರುವ ಕಾರ್ಯಕರ್ತರ ಹತ್ಯೆ ಹಿಂದಿರುವ ಪಿಎಫ್ಐ, ಸಿಎಫ್ಐ, ಎಸ್‌ಡಿಪಿಐ ಸಂಘ ಟನೆಗಳ ಹೆಸರು ತಳಕು ಹಾಕಿಕೊಳ್ಳುತ್ತಿದ್ದು, ಸರ್ಕಾರ ಕೂಡಲೇ ಈ ಸಂಘಟನೆಗಳನ್ನು ನಿಷೇಧಿಸಬೇಕೆಂದು ಒತ್ತಾಯಿಸಿ ಅಪರ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. 

Chikkamagaluru: ಕರಾವಳಿಯಲ್ಲಿ ಪ್ರವೀಣ್ ಹತ್ಯೆ ಪ್ರಕರಣ: ಇಸ್ಲಾಮಿಕ್ ರಾಷ್ಟ್ರ ಮಾಡಲು ಸಂಚು

ಕಪ್ಪು ಬಟ್ಟೆ ಕಟ್ಟಿಕೊಂಡು ಪ್ರತಿಭಟನೆ: ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ಭಜರಂಗಳದ ಕಾರ್ಯಕರ್ತರು ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ ನಡೆಸಿದರು. ನಗರದ ಅಜಾದ್ ಪಾರ್ಕ್ ವೃತ್ತದಲ್ಲಿ  ಸಂಘಟನೆ ಕಾರ್ಯಕತರು ಕಣ್ಣಿಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ದ  ಆಕ್ರೋಶವನ್ನು ಹೊರಹಾಕಿದರು. ದುಷ್ಕರ್ಮಿಗಳಿಂದ ಕೊಲೆಯಾದ ಪ್ರವೀಣ್ ನೆಟ್ಟಾರು ಆತ್ಮಕ್ಕೆ ಶ್ರದ್ಧಾಂಜಲಿ ಕೋರಲಾಯಿತು. ತದ ನಂತರ ಮಾತಾಡಿದ ಭಜರಂಗದಳದ ಮುಖಂಡ ರಂಗನಾಥ್ ಪ್ರವೀಣ್ ಹತ್ಯೆಯನ್ನು ತೀವ್ರವಾಗಿ ಖಂಡಿಸಿದರು. ಬಿಜೆಪಿ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಕಾರ್ಯಕರ್ತರೇ ಕಾರಣ. ಹಿಂದುತ್ವದ ಸರ್ಕಾರ ರಾಜ್ಯದಲ್ಲಿ ಇದ್ದರೂ ಹಿಂದೂಗಳ ಹತ್ಯೆ ನಡೆಯುತ್ತಿರುವುದಕ್ಕೆ ಕಿಡಿಕಾರಿದರು.

Latest Videos
Follow Us:
Download App:
  • android
  • ios