ಬಂಟ್ವಾಳ(ನ.27):  ಆರ್‌​ಟಿಸಿ ತಿದ್ದುಪಡಿ ಮಾಡಲೆಂದು ಲಂಚದ ಹಣಕ್ಕೆ ಬೇಡಿಕೆ ಇಟ್ಟ ಆರೋಪದ ಹಿನ್ನೆಲೆಯಲ್ಲಿ ಬಂದ ದೂರಿನನ್ವಯ ದಕ್ಷಿಣ ಕನ್ನಡದ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್‌ ಅಧಿಕಾರಿಗಳು ಬಂಟ್ವಾಳ ತಾಲೂಕು ಕಚೇರಿಗೆ ದಾಳಿ ನಡೆಸಿದ ವೇಳೆ ಉಪತಹಸೀಲ್ದಾರ್‌ ರವಿಶಂಕರ್‌ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದು, ಅವರನ್ನು ಬಂಧಿ​ಸ​ಲಾ​ಗಿದೆ. ಗುರುವಾರ ಮಧ್ಯಾಹ್ನ ಬಿ.ಸಿ.ರೋಡಿನ ಮಿನಿ ವಿಧಾನಸೌಧದಲ್ಲಿ ಕಾರ್ಯಾ​ಚ​ರಣೆ ನಡೆದಿದೆ.

ದೂರುದಾರರು ತಾಯಿಯ ಹೆಸರಲ್ಲಿರುವ ಜಾಗಕ್ಕೆ ಸಂಬಂಧಿಸಿ ಆರ್‌ಟಿಸಿ ತಿದ್ದುಪಡಿ ಮಾಡಿಕೊಡಲು ಉಪತಹಸೀಲ್ದಾರ್‌ 1,500 ರೂ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅದರಂತೆ ಪ್ರಕರಣ ದಾಖಲಿಸಲಾಗಿದ್ದು, 1,000 ರು. ಲಂಚ ಸ್ವೀಕರಿಸುವ ಸಂದರ್ಭ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 

ನಿಖಾಹ್‌ ಆದ್ರೂ ಪತಿ ದೂರ: ನ್ಯಾಯಕ್ಕಾಗಿ ಮಸೀದಿ ಮೊರೆ ಹೋದ ಮತಾಂತರಿತ ಪತ್ನಿ

ಪೊಲೀಸ್‌ ಅಧೀಕ್ಷಕ ಬೋಪಯ್ಯ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಕೆ.ಸಿ.ಪ್ರಕಾಶ್‌ ನೇತೃತ್ವದಲ್ಲಿ ಪೊಲೀಸ್‌ ನಿರೀಕ್ಷಕರಾದ ಶ್ಯಾಂಸುಂದರ್‌, ಗುರುರಾಜ್‌ ಹಾಗೂ ಸಿಬ್ಬಂದಿ ಹರಿಪ್ರಸಾದ್‌, ರಾಧಾಕೃಷ್ಣ, ಉಮೇಶ್‌, ರಾಧಾಕೃಷ್ಣ ಡಿ.ಎ, ಪ್ರಶಾಂತ್‌ ಎಂ, ವೈಶಾಲಿ, ರಾಜೇಶ್‌ ಪಿ, ರಾಕೇಶ್‌ ವಾಗ್ಮೇನ್‌, ಸತೀಶ್‌ ಹಾಗೂ ಭರತ್‌ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.