ಬೆಂಗಳೂರು(ಮಾ.03): ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋಗುವ ರಸ್ತೆಯಲ್ಲಿ ಇತ್ತೀಚೆಗೆ ಹೆಚ್ಚು ಅಪಘಾತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಉತ್ತರ ವಿಭಾಗದ ಡಿಸಿಪಿ ಸಾರಾ ಫಾತೀಮಾ ರಸ್ತೆ ಪರಿಶೀಲನೆ ನಡೆಸಿದ್ದಾರೆ.

ಸೋಮವಾರ ಭಾರತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಿದ ಅಧಿಕಾರಿಗಳು ಮತ್ತು ಟೋಲ್‌ ಅಧಿಕಾರಿಗಳೊಂದಿಗೆ ವಿಮಾನ ನಿಲ್ದಾಣಕ್ಕೆ ರಸ್ತೆ ಬಳಿ ಭೇಟಿ ನೀಡಿದ್ದರು. ಈ ವೇಳೆ ಅಧಿಕಾರಿಗಳೊಂದಿಗೆ ಹೆದ್ದಾರಿಯ ಬಗ್ಗೆ ಮಾಹಿತಿ ಪಡೆದುಕೊಂಡು ಅಪಘಾತ ಪ್ರಕರಣ ತಡೆಗಟ್ಟಲು ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಿದರು.

ಗಾಯಾಳು ಸಾವು:

ಭಾನುವಾರ ರಾತ್ರಿ ಮೂರು ಕಾರುಗಳ ನಡುವೆ ರಾಷ್ಟ್ರೀಯ ಹೆದ್ದಾರಿಯ ವೆಂಕಟಾಲ ಮೇಲ್ಸೇತುವೆ ಬಳಿ ಸಂಭವಿಸಿದ್ದ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ರಾಮಚಂದ್ರ (23) ಮೃತಪಟ್ಟಿದ್ದಾರೆ.

ಕ್ಯಾಬ್‌ಗೆ ಗುದ್ದಿ ಮಗುಚಿ ಬಿದ್ದ ಪೊಲೀಸ್‌ ಜೀಪ್‌!

ಪೂಜಾ, ಸಾಯಿಕುಮಾರ್‌, ನವೀನ್‌ ಮುರಳೀಧರ ಹಾಗೂ ನಿರಂಜನ್‌ ಎಂಬುವರು ಗಾಯಗೊಂಡಿದ್ದು, ಈ ಪೈಕಿ ಪೂಜಾ ಸ್ಥಿತಿ ಗಂಭೀರವಾಗಿದೆ ಎಂದು ಯಲಹಂಕ ಸಂಚಾರ ಠಾಣೆ ಪೊಲೀಸರು ಹೇಳಿದ್ದಾರೆ.