ವಿಜಯಪುರ(ಡಿ.07): ಆಕಸ್ಮಿಕ ವಿದ್ಯುತ್ ತಂತಿ ಹರಿದು ಬಿದ್ದ ಪರಿಣಾಮ ಕಬ್ಬಿನ ಗದ್ದೆಯಲ್ಲಿ ಬೆಂಕಿ ಹೊತ್ತಿಕೊಂಡ ಘಟನೆ ಚಡಚಣ ತಾಲೂಕಿನ ಉಮರಜ ಗ್ರಾಮದಲ್ಲಿ ಘಟನೆ ಇಂದು(ಶನಿವಾರ) ನಡೆದಿದೆ. 

ಬೆಂಕಿ ಹೊತ್ತಿಕೊಂಡ ಪರಿಣಾಮ ಮೂರು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಸಂಪೂರ್ಣವಾಗಿ ಸುಟ್ಟು‌ ಭಸ್ಮವಾಗಿದೆ. ರಾಜಕುಮಾರ ತುಕಾರಾಮ ಲೋಣಿ ಎಂಬುವವರಿಗೆ ಸೇರಿದ ಹೊಲದಲ್ಲಿ ಘಟನೆ ನಡೆದಿದೆ. ಇದರಿಂದ ರಾಜಕುಮಾರ ತುಕಾರಾಮ ಲೋಣಿ ಅವರಿಗೆ ಅಪಾರ ಪ್ರಮಾಣದಲ್ಲಿ ಹಾನಿ ಉಂಟಾಗಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಮೂರು ಎಕರೆಯಲ್ಲಿ ಬೆಳೆದಿದ್ದ ಬೆಂಕಿಗೆ ಆಹುತಿಯಾಗಿದ್ದರಿಂದ ರೈತ ರಾಜಕುಮಾರ ಅವರು ಕಂಗಾಲಾಗಿದ್ದಾರೆ. ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾನೆ. ಈ ಸಂಬಂಧ ಚಡಚಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.