ವಿಜಯಪುರ(ಫೆ.23): ಬೆಂಕಿ ಪೊಟ್ಟಣ ಸಾಗಿಸುತ್ತಿದ್ದ ಲಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಕ್ಷಣಾರ್ಧದಲ್ಲಿಯೇ ಹೊತ್ತಿ ಉರಿದ ಘಟನೆ ವಿಜಯಪುರ ತಾಲೂಕಿನ ಅರಕೇರಿ ತಾಂಡಾ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಶನಿ​ವಾರ ಬೆಳಗಿನ ಜಾವ ಸಂಭ​ವಿ​ಸಿದೆ.

ತಮಿಳುನಾಡಿನಿಂದ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ಬೆಂಕಿ ಪೊಟ್ಟಣ ತುಂಬಿಕೊಂಡು ಹೊರಟಿದ್ದ ಲಾರಿಗೆ ಬೆಂಕಿ ತಗುಲಿದೆ. ತಕ್ಷಣವೇ ಚಾಲಕ ಲಾರಿಯಿಂದ ಇಳಿದು ಪ್ರಾಣ ಉಳಿಸಿಕೊಂಡಿದ್ದಾನೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಸುಮಾರು 2 ಲಕ್ಷಕ್ಕೂ ಅಧಿಕ ಮೌಲ್ಯದ ಬೆಂಕಿ ಪೊಟ್ಟಣ ಹಾಗೂ ಸುಮಾರು 15 ಲಕ್ಷ ಮೌಲ್ಯದ ಲಾರಿ ಸಂಪೂರ್ಣ ಸುಟ್ಟು ಹಾಳಾಗಿದೆ. ಈ ಕುರಿತು ವಿಜಯಪುರ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.