ಚಾಮರಾಜನಗರ: ಜಮೀನಿಗೆ ಅಳವಡಿಸಿದ್ದ ಅಕ್ರಮ ವಿದ್ಯುತ್ ಸ್ಪರ್ಶದಿಂದ ಹುಲಿ ಸಾವು, ಆರೋಪಿ ಬಂಧನ
ಹುಲಿಯು ಜಮೀನಿನಲ್ಲಿ ಅಳವಡಿಸಿದ್ದ ವಿದ್ಯುತ್ ತಂತಿ ಬೇಲಿ ಸ್ಪರ್ಶಿಸಿ ಮೃತಪಟ್ಟಿರುವುದು ಖಚಿತವಾಗಿದ್ದು, ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಹರಿಸಿರುವುದು ತನಿಖೆಯಿಂದ ಗೊತ್ತಾಗಿದೆ. ವಿದ್ಯುತ್ ತಂತಿ ಸ್ಪರ್ಶಿಸಿ ಹುಲಿ ಸತ್ತಿರುವ ಸಂಗತಿಯನ್ನು ಮುಚ್ಚಿ ಹಾಕುವುದಕ್ಕಾಗಿ ಆರು ಮಂದಿ ಒಟ್ಟಾಗಿ ಹುಲಿಯ ಮೃತದೇಹವನ್ನು ಕೆರೆಗೆ ಎಸೆದಿರುವುದು ತನಿಖೆಯಿಂದ ಗೊತ್ತಾಗಿದೆ.
ವರದಿ- ಪುಟ್ಟರಾಜು ಆರ್.ಸಿ, ಏಷಿಯಾನೆಟ್ ಸುವರ್ಣ ನ್ಯೂಸ್, ಚಾಮರಾಜನಗರ
ಚಾಮರಾಜನಗರ(ಫೆ.25): ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯ ವ್ಯಾಪ್ತಿಯ ಕೆಬ್ಬೇಪುರ ಗ್ರಾಮದ ಮಲ್ಲಯ್ಯನಕಟ್ಟೆ ಕೆರೆಯಲ್ಲಿ ಹುಲಿಯ ಮೃತದೇಹ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಅಧಿಕಾರಿಗಳು ವ್ಯಕ್ತಿಯೊಬ್ಬರನ್ನು ಬಂಧಿಸಿದ್ದಾರೆ.
ಹುಲಿಯು ಜಮೀನಿನಲ್ಲಿ ಅಳವಡಿಸಿದ್ದ ವಿದ್ಯುತ್ ತಂತಿ ಬೇಲಿ ಸ್ಪರ್ಶಿಸಿ ಮೃತಪಟ್ಟಿರುವುದು ಖಚಿತವಾಗಿದ್ದು, ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಹರಿಸಿರುವುದು ತನಿಖೆಯಿಂದ ಗೊತ್ತಾಗಿದೆ. ವಿದ್ಯುತ್ ತಂತಿ ಸ್ಪರ್ಶಿಸಿ ಹುಲಿ ಸತ್ತಿರುವ ಸಂಗತಿಯನ್ನು ಮುಚ್ಚಿ ಹಾಕುವುದಕ್ಕಾಗಿ ಆರು ಮಂದಿ ಒಟ್ಟಾಗಿ ಹುಲಿಯ ಮೃತದೇಹವನ್ನು ಕೆರೆಗೆ ಎಸೆದಿರುವುದು ತನಿಖೆಯಿಂದ ಗೊತ್ತಾಗಿದೆ. ಕೆಬ್ಬೇಪುರ ಗ್ರಾಮದ ರೇಚಪ್ಪ (34) ಬಂಧಿತ ಆರೋಪಿ. ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇನ್ನು ಐದು ಮಂದಿ ತಲೆ ಮರೆಸಿಕೊಂಡಿದ್ದು, ಅವರ ಬಂಧನಕ್ಕೆ ಅರಣ್ಯ ಇಲಾಖೆಯು ಎರಡು ವಿಶೇಷ ತಂಡಗಳನ್ನು ರಚಿಸಿದೆ.
ತಮಿಳುನಾಡು ರೋಡ್ ಸೂಪರ್ ಆದ್ರೆ ಕರ್ನಾಟಕ ರಸ್ತೆಯಲ್ಲಿ ಗುಂಡಿಯದ್ದೆ ದರ್ಬಾರ್, ಅಣಕಿಸ್ತಾರಂತೆ ತಮಿಳಿಗರು!
ಹುಲಿಯ ಕಾಲುಗಳು ಹಾಗೂ ಕುತ್ತಿಗೆಗೆ ತಂತಿಯಿಂದ ಕಟ್ಟಿ, ಅದಕ್ಕೆ ಭಾರವಾದ ಕಲ್ಲು ಕಟ್ಟಿ ಕೆರೆಗೆ ಹಾಕಲಾಗಿತ್ತು. ಹಾಗಾಗಿ ಹುಲಿಯ ಸಾವಿನ ಬಗ್ಗೆ ಅನುಮಾನಗಳು ಹುಟ್ಟಿಕೊಂಡಿದ್ದವು. ಆದರೆ, ತನಿಖೆ ವೇಳೆ ಹುಲಿಯ ಸಾವಿಗೆ ವಿದ್ಯುತ್ ಸ್ಪರ್ಶವೇ ಕಾರಣ ಎಂದು ಗೊತ್ತಾಗಿದೆ.