Asianet Suvarna News Asianet Suvarna News

ನನ್ನ ತಾಲೂಕು ಕನಕಪುರದಿಂದ ಚಾಮರಾಜನಗರಕ್ಕೆ ಹೊಸ ರೈಲ್ವೆ ಯೋಜನೆಗೆ ಕ್ರಮ: ಕೇಂದ್ರ ಸಚಿವ ಸೋಮಣ್ಣ

ನನ್ನ ತಾಲೂಕು ಕನಕಪುರ ಆಗಿರುವುದರಿಂದ ಹೆಜ್ಜಾಲ, ಹಾರುವಳ್ಳಿ, ಕಗ್ಗಲಿಪುರ, ಕನಕಪುರ, ಸಾತನೂರು, ಹಲಗೂರು, ಮಳವಳ್ಳಿ, ಕೊಳ್ಳೇಗಾಲ, ಯಳಂದೂರು, ಸಂತೆಮರಹಳ್ಳಿ, ಚಾಮರಾಜನಗರಕ್ಕೆ ಸಂಪರ್ಕ ಕಲ್ಪಿಸುವ 142 ಕೋಟಿ ರು. ವೆಚ್ಚದಲ್ಲಿ ಹೊಸ ರೈಲ್ವೆ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ಶ್ರಮಿಸಲಾಗುವುದು ಎಂದ ಕೇಂದ್ರದ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ 

Action for new railway project from Kanakapur to Chamarajanagar says Union Minister V Somanna grg
Author
First Published Sep 9, 2024, 9:18 AM IST | Last Updated Sep 9, 2024, 9:23 AM IST

ನಾಗಮಂಗಲಸೆ.09): ಕನಕಪುರದಿಂದ ಚಾಮರಾಜನಗರಕ್ಕೆ ಸಂಪರ್ಕ ಕಲ್ಪಿಸುವ ಹೊಸ ರೈಲ್ವೆ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ಅಗತ್ಯ ಕ್ರಮ ವಹಿಸುವುದಾಗಿ ಕೇಂದ್ರದ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.

ತಾಲೂಕಿನ ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ, ಶ್ರೀಗಳಿಂದ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿ ಚಿಂತನೆಯಿಂದಾಗಿ ರಾಜ್ಯಕ್ಕೆ ಬಹುದೊಡ್ಡ ಅಭಿವೃದ್ಧಿ ಸಂದೇಶ ನೀಡಲಾಗುತ್ತಿದೆ ಎಂದರು.

ಜಲಜೀವನ ಮಿಷನ್, ಜಲಧಾರೆ ಪರಿಣಾಮಕಾರಿ ಅನುಷ್ಠಾನಗೊಳಿಸಿ: ಕೇಂದ್ರ ಸಚಿವ ಸೋಮಣ್ಣ

ಕಳೆದ 50 ವರ್ಷದಲ್ಲಿ ರಾಜ್ಯಕ್ಕೆ ರೈಲ್ವೆ ಇಲಾಖೆಯಿಂದ ಆಗದಿರುವ ಆ ಕೆಲಸಗಳನ್ನು ಕೈಗೆತ್ತಿಕೊಂಡು ಕೇವಲ ಎರಡು ವರ್ಷದಲ್ಲಿ ಇಡೀ ರಾಜ್ಯದಲ್ಲಿ ಏನೆಲ್ಲಾ ಆಗುತ್ತಿದೆ ಎಂಬುದನ್ನು ತೋರಿಸಲಾಗುವುದು ಎಂದು ಹೇಳಿದರು. ನನ್ನ ತಾಲೂಕು ಕನಕಪುರ ಆಗಿರುವುದರಿಂದ ಹೆಜ್ಜಾಲ, ಹಾರುವಳ್ಳಿ, ಕಗ್ಗಲಿಪುರ, ಕನಕಪುರ, ಸಾತನೂರು, ಹಲಗೂರು, ಮಳವಳ್ಳಿ, ಕೊಳ್ಳೇಗಾಲ, ಯಳಂದೂರು, ಸಂತೆಮರಹಳ್ಳಿ, ಚಾಮರಾಜನಗರಕ್ಕೆ ಸಂಪರ್ಕ ಕಲ್ಪಿಸುವ 142 ಕೋಟಿ ರು. ವೆಚ್ಚದಲ್ಲಿ ಹೊಸ ರೈಲ್ವೆ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ಶ್ರಮಿಸಲಾಗುವುದು ಎಂದರು.

ಕಳೆದ 1996ರಲ್ಲಿ ಜಾರಿಗೊಂಡಿದ್ದ 6 ಸಾವಿರ ಕೋಟಿ ರು. ವೆಚ್ಚದ ಆಂಧ್ರಪ್ರದೇಶದ ರಾಯದುರ್ಗ ಮಡಕಸಿರ, ಮಧುಗಿರಿ - ಪಾವಗಡ, ತುಮಕೂರು ಮತ್ತು ಊರುಕೇರಿ ನಡುವಿನ 206 ಕಿ.ಮೀ. ದೂರದ ರೈಲ್ವೆ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ನಾಲ್ಕು ಹಂತದಲ್ಲಿ ಕಾಮಗಾರಿ ನಡೆಯುತ್ತಿದೆ ಎಂದರು.

ಯಾದಗಿರಿ ಸಮಗ್ರ ಅಭಿವೃದ್ಧಿ ಸೂಚ್ಯಂಕದಲ್ಲಿ ಮುಂಚೂಣಿಯಲ್ಲಿ ಬರುವಂತೆ ನೋಡಿಕೊಳ್ಳಿ: ಸಚಿವ ಸೋಮಣ್ಣ

ಕಡತದಲ್ಲಿದ್ದ ತುಮಕೂರು, ಚಿತ್ರದುರ್ಗ, ದಾವಣಗೆರೆಯ 192ಕಿ.ಮೀ.ದೂರದ ರೈಲ್ವೆ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಯೋಜನೆಗೆ 2300 ಎಕರೆ ಜಾಗದಲ್ಲಿ ರಾಜ್ಯ ಸರ್ಕಾರ 1900 ಎಕರೆಗೂ ಹೆಚ್ಚು ಭೂಮಿಯನ್ನು ನೀಡಿದೆ. ಅದೂ ಕೂಡ ಈಗ ಟೆಂಡರ್ ಪ್ರಕ್ರಿಯೆ ಮುಗಿದಿದೆ ಎಂದು ಹೇಳಿದರು.

ಈ ಎರಡೂ ಯೋಜನೆಗಳನ್ನು ಕೇಂದ್ರ ಸರ್ಕಾರದ ಅನುದಾನದಲ್ಲಿ ಪೂರ್ಣಗೊಳಿಸಲಾಗುವುದು. ಇದರ ಜೊತೆಗೆ ನನ್ನ ಸ್ವಕ್ಷೇತ್ರ ತುಮಕೂರಿನಲ್ಲಿ 8 ಆರ್‌ಒಬಿಗಳಿಗೆ ಮಂಜೂರು ಮಾಡಿಸಲಾಗಿದೆ ಎಂದರು.

Latest Videos
Follow Us:
Download App:
  • android
  • ios