Asianet Suvarna News Asianet Suvarna News

ರಾಜ್ಯದಲ್ಲಿ ಪಶು ವೈದ್ಯರ ಕೊರತೆ ನೀಗಿಸಲು ಕ್ರಮ: ಸಚಿವ ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ಪಶು ವೈದ್ಯರ ಕೊರತೆ ನೀಗಿಸಲು ಸೂಕ್ತ ಪ್ರಯತ್ನ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. 

Action to overcome the shortage of veterinary doctors in the state Says Dinesh Gundu Rao gvd
Author
First Published Jan 24, 2024, 11:59 PM IST

ಮಂಗಳೂರು (ಜ.24): ರಾಜ್ಯದಲ್ಲಿ ಪಶು ವೈದ್ಯರ ಕೊರತೆ ನೀಗಿಸಲು ಸೂಕ್ತ ಪ್ರಯತ್ನ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ದ.ಕ. ಜಿಲ್ಲಾ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಮಂಗಳೂರು ಕಾರ್ಯಾಲಯದ ನೂತನ ಕಟ್ಟಡ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು. ಪ್ರಾಣಿಗಳ ರಕ್ಷಣೆಯ ನಿಟ್ಟಿನಲ್ಲಿ ಪಶುಪಾಲನಾ ಇಲಾಖೆ ಪ್ರಮುಖ ಪಾತ್ರ ವಹಿಸುತ್ತಿದೆ. ಆದರೆ ಪಶು ವೈದ್ಯರ ಕೊರತೆ ರಾಜ್ಯದಲ್ಲಿ ಬಹಳಷ್ಟಿದೆ. ಈ ಸಮಸ್ಯೆ ನೀಗಿಸಲು ಸರ್ಕಾರದ ಮಟ್ಟದಲ್ಲಿ ಸೂಕ್ತ ಕ್ರಮ ವಹಿಸಲಾಗುವುದು ಎಂದರು.

ಪ್ರಪಂಚದಲ್ಲಿ ಇರುವ ಎಲ್ಲ ಪ್ರಾಣಿಗಳ ಪೈಕಿ ಮನುಷ್ಯರು ಶೇ.34ರಷ್ಟಿದ್ದರೆ, ಹಸು, ಕುರಿ ಇತ್ಯಾದಿ ಜಾನುವಾರುಗಳು ಶೇ.62ರಷ್ಟಿವೆ. ಉಳಿದ ಅಷ್ಟೂ ಪ್ರಾಣಿಗಳು ಇರೋದು ಕೇವಲ ಶೇ.4 ಮಾತ್ರ. ಪ್ರಸ್ತುತ ಕಾಲಘಟ್ಟದಲ್ಲಿ ಮನುಷ್ಯನು ಎಲ್ಲವನ್ನೂ ಹಿಡಿತಕ್ಕೆ ತೆಗೆದುಕೊಂಡಿರುವುದರಿಂದ ಪ್ರಾಣಿಗಳ ರಕ್ಷಣೆಯ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಗುಂಡೂರಾವ್ ಹೇಳಿದರು. ನೂತನ ಕಟ್ಟಡವನ್ನು ಇನ್ನೊಂದು ವರ್ಷದೊಳಗೆ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಅವರು ಸೂಚಿಸಿದರು.

ರಜೆ ಹೆಸರಲ್ಲಿ ರಾಜಕಾರಣದ ದಾರಿದ್ರ್ಯ ಕಾಂಗ್ರೆಸ್‌ಗೆ ಬಂದಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಮಾತನಾಡಿ, ಪ್ರಸ್ತುತ ಪಶು ವೈದ್ಯಕೀಯ ಕಾಲೇಜುಗಳ ಕೊರತೆಯಿದೆ. ಹಾಗಾಗಿ ವೈದ್ಯರ ಕೊರತೆಯೂ ಕಾಡುತ್ತಿದೆ. ಈ ಬಗ್ಗೆ ಸರ್ಕಾರ ಆಲೋಚನೆ ಮಾಡುವ ಸಮಯ ಸನ್ನಿಹಿತವಾಗಿದೆ ಎಂದು ಹೇಳಿದರು. ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಪಾಲಿಕೆ ಪ್ರತಿಪಕ್ಷ ನಾಯಕ ಪ್ರವೀಣ್‌ಚಂದ್ರ ಆಳ್ವ, ಕಾರ್ಪೊರೇಟರ್‌ಗಳಾದ ಎ.ಸಿ. ವಿನಯರಾಜ್‌, ಅನಿಲ್‌ ಕುಮಾರ್‌, ಭಾಸ್ಕರ ಮೊಯ್ಲಿ, ಪ್ರಮುಖರಾದ ಪ್ರೊ. ರಾಧಾಕೃಷ್ಣ, ಮೀನುಗಾರಿಕಾ ವಿವಿ ಡೀನ್‌ ಆಂಜನಪ್ಪ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌, ಜಿಪಂ ಸಿಇಒ ಡಾ.ಆನಂದ್‌, ಇಲಾಖೆಯ ಆಡಳಿತ ಉಪನಿರ್ದೇಶಕ ಡಾ.ಅರುಣ್‌ ಕುಮಾರ್‌ ಶೆಟ್ಟಿ, ಇಲಾಖೆಯ ಇತರ ಅಧಿಕಾರಿಗಳು ಇದ್ದರು.

ವಿದ್ಯಾರ್ಥಿಗಳಿಗೆ ಪಠ್ಯ ಜತೆ ನೈತಿಕ ಶಿಕ್ಷಣ ಬೇಕು: ದೇಶದ ಮಾನವ ಶಕ್ತಿ ಸಂಪೂರ್ಣವಾಗಿ ಬಳಕೆಯಾಗಲು ಮಕ್ಕಳಿಗೆ ಪಠ್ಯ ಶಿಕ್ಷಣದ ಜೊತೆಗೆ ನೈತಿಕತೆ, ಮನುಷ್ಯತ್ವ, ಅಧ್ಯಾತ್ಮದ ಶಿಕ್ಷಣ ಒದಗಿಸಬೇಕು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು. ಮಂಗಳೂರಿನ ರಾಮಕೃಷ್ಣ ಮಠದಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ಅಂಗವಾಗಿ ಶುಕ್ರವಾರ ಆಯೋಜಿಸಿದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ವಿವೇಕಾನಂದರ ಚಿಂತನೆಗಳು ಸಾಮಾಜಕ್ಕೆ ದಾರಿದೀಪವಾಗಿವೆ. ವಿಶ್ವದಾದ್ಯಂತ ಸುತ್ತಾಡಿ ಅಗಾಧ ಜ್ಞಾನ ಸಂಪಾದಿಸಿದ್ದ ಅವರು ಹಿಂದೂ ಧರ್ಮಕ್ಕೆ ಹೊಸ ಚೈತನ್ಯ ತುಂಬಿದವರು. ಮೂಢನಂಬಿಕೆಗಳು, ಅನಿಷ್ಠ ಪದ್ಧತಿಗಳಿಂದ ವ್ಯಥೆಪಟ್ಟಿದ್ದ ಅವರು ಸುಧಾರಣೆಗೆ ಶ್ರಮಿಸಿದವರು ಎಂದರು.

ಬಿಜೆಪಿ ಪಕ್ಷದ ವಿರುದ್ಧ ಮಾತಾಡದಂತೆ ಬಿಎಸ್‌ವೈ ಹೇಳಿದ್ದು ನಿಜ: ಎಂ.ಪಿ.ರೇಣುಕಾಚಾರ್ಯ

ವಿವೇಕಾನಂದ ಜೀವನಗಾಥೆ ಅನೇಕ ಸದ್ವಿಚಾರಗಳನ್ನು ತಿಳಿಸಿಕೊಡುತ್ತದೆ. ಯಾವುದೇ ಧರ್ಮವಾಗಲಿ, ವ್ಯಕ್ತಿಯಾಗಲಿ ಹೇಳುವ ಸದ್ವಿಚಾರಗಳು ಸಮಾಜಕ್ಕೆ ಪ್ರೇರಕವಾದರೆ ಅದನ್ನು ಸ್ವೀಕರಿಸುವ ಮನಃಸ್ಥಿತಿ ಬೆಳೆಸಿಕೊಳ್ಳಬೇಕು ಎಂದು ಸ್ವಾಮಿ ವಿವೇಕಾನಂದರು ಹೇಳಿದ್ದರು. ಆಧ್ಯಾತ್ಮಿಕ ಚಿಂತನೆ, ವಿವೇಚನೆ, ವೈಜ್ಞಾನಿಕ ಮನೋಭಾವ ಈ ಮೂರು ಅಂಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಪರಿಪೂರ್ಣ ವ್ಯಕ್ತಿತ್ವ ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ. ಸ್ವಾಮಿ ವಿವೇಕಾನಂದರು ತಮ್ಮ ಜೀವನದಲ್ಲಿ ಇದನ್ನೇ ಅಳವಡಿಸಿಕೊಂಡಿದ್ದರು ಎಂದು ಗುಂಡೂರಾವ್‌ ಹೇಳಿದರು.

Follow Us:
Download App:
  • android
  • ios