Asianet Suvarna News Asianet Suvarna News

ಕೊಲೆ ಅರೋಪಿ ದರ್ಶನ್‌ ಆಪ್ತ, ರೌಡಿ ನಾಗ ಬೇರೆ ಜೈಲಿಗೆ: ಕೋರ್ಟ್ ಅಸ್ತು

ಕೊಲೆ ಆರೋಪಿ ನಟ ದರ್ಶನ್‌, ರೌಡಿ ವಿಲ್ಸನ್‌ ಗಾರ್ಡನ್‌ ನಾಗ ಹಾಗೂ ಆತನ ಗ್ಯಾಂಗ್‌ಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ರಾಜಾತಿಥ್ಯ ನೀಡುವ ಫೋಟೋ ಹಾಗೂ ವಿಡಿಯೋಗಳು ಲೀಕ್‌ ಆಗಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇದರ ಬೆನ್ನಲ್ಲೇ ನಗರ ಪೊಲೀಸರು ನ್ಯಾಯಾಲಯದ ಅನುಮತಿ ಪಡೆದು ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್‌ ಸೇರಿದಂತೆ 10 ಮಂದಿ ಆರೋಪಿಗಳನ್ನು ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಿಂದ ರಾಜ್ಯದ ಬೇರೆ ಬೇರೆ ಜೈಲುಗಳಿಗೆ ಸ್ಥಳಾಂತರಿಸಿದ್ದರು.
 
Actor Darshan Close Rowdy Naga Will be Shift to Likely Kalaburagi Jail grg
Author
First Published Sep 18, 2024, 5:00 AM IST | Last Updated Sep 18, 2024, 5:00 AM IST

ಬೆಂಗಳೂರು(ಸೆ.18): ನಗರದ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿರುವ ಕುಖ್ಯಾತ ರೌಡಿ ನಾಗರಾಜ್‌ ಅಲಿಯಾಸ್‌ ವಿಲ್ಸನ್‌ ಗಾರ್ಡನ್‌ ನಾಗ ಸೇರಿದಂತೆ 20 ಮಂದಿ ವಿಚಾರಣಾಧೀನ ಕೈದಿಗಳನ್ನು ರಾಜ್ಯದ ಬೇರೆ ಜೈಲುಗಳಿಗೆ ಸ್ಥಳಾಂತರಿಸಲು ಸೆಷನ್ಸ್‌ ನ್ಯಾಯಾಲಯವು ಮಂಗಳವಾರ ಅನುಮತಿ ನೀಡಿದೆ.

ನ್ಯಾಯಾಲಯದ ಆದೇಶ ಪ್ರತಿ ಬುಧವಾರ ಪೊಲೀಸರ ಕೈ ಸೇರಲಿದ್ದು, ಬಳಿಕ ರೌಡಿ ನಾಗ ಸೇರಿದಂತೆ 20 ಮಂದಿ ವಿಚಾರಣಾಧೀನ ಕೈದಿಗಳನ್ನು ರಾಜ್ಯದ ಬೇರೆ ಜೈಲುಗಳಿಗೆ ಪೊಲೀಸರು ಸ್ಥಳಾಂತರಿಸಲಿದ್ದಾರೆ. ನಾಗನನ್ನು ಕಲಬುರಗಿ ಜೈಲಿಗೆ ಸ್ಥಳಾಂತರಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಬಳ್ಳಾರಿ ಜೈಲಲ್ಲಿರೋ ಗಂಡನ ನೋಡಿ ಕಣ್ಣೀರಿಟ್ಟ ವಿಜಯಲಕ್ಷ್ಮಿ: ದರ್ಶನ್‌ಗೆ ಧನ್ವೀರ್ ಕೊಟ್ಟ ಬ್ಯಾಗ್‌ನಲ್ಲೇನಿತ್ತು?

ಕೊಲೆ ಆರೋಪಿ ನಟ ದರ್ಶನ್‌, ರೌಡಿ ವಿಲ್ಸನ್‌ ಗಾರ್ಡನ್‌ ನಾಗ ಹಾಗೂ ಆತನ ಗ್ಯಾಂಗ್‌ಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ರಾಜಾತಿಥ್ಯ ನೀಡುವ ಫೋಟೋ ಹಾಗೂ ವಿಡಿಯೋಗಳು ಲೀಕ್‌ ಆಗಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇದರ ಬೆನ್ನಲ್ಲೇ ನಗರ ಪೊಲೀಸರು ನ್ಯಾಯಾಲಯದ ಅನುಮತಿ ಪಡೆದು ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್‌ ಸೇರಿದಂತೆ 10 ಮಂದಿ ಆರೋಪಿಗಳನ್ನು ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಿಂದ ರಾಜ್ಯದ ಬೇರೆ ಬೇರೆ ಜೈಲುಗಳಿಗೆ ಸ್ಥಳಾಂತರಿಸಿದ್ದರು.

ಈ ನಡುವೆ ರೌಡಿ ನಾಗ ಸೇರಿದಂತೆ 20 ಮಂದಿ ಆರೋಪಿಗಳನ್ನು ಬೇರೆ ಜೈಲುಗಳಿಗೆ ಸ್ಥಳಾಂತರಿಸಲು ಅನುಮತಿ ಕೋರಿ ನಗರ ಪೊಲೀಸರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ಮಾಡಿದ ನ್ಯಾಯಾಲಯವು ಅನುಮತಿ ನೀಡಿ ಆದೇಶಿಸಿದೆ. 

Latest Videos
Follow Us:
Download App:
  • android
  • ios