ಮಂಗಳೂರಿನಲ್ಲಿ ಪೊಲೀಸ್ ಕಮಿಷನರ್ ಭೇಟಿಯಾದ ಆಫ್ಘನ್ ವಿದ್ಯಾರ್ಥಿಗಳು ಕಮಿಷನರ್ ಭೇಟಿಯಾಗಿ ತಮಗೆ ರಕ್ಷಣೆ ನೀಡುವಂತೆ ಮನವಿ 

ಮಂಗಳೂರು (ಆ.21): ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಅಟ್ಟಹಾಸ ಮೆರೆಯುತ್ತಿದ್ದು, ಅಪ್ಘಾನ್ ವಿದ್ಯಾರ್ಥಿಗಳು ಮಂಗಳೂರಿನಲ್ಲಿ ಪೊಲೀಸ್ ಕಮಿಷನರ್ ಭೇಟಿಯಾಗಿ ತಮಗೆ ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾರೆ. 

Add Asianetnews Kannada as a Preferred SourcegooglePreferred

ಮಂಗಳೂರು ವಿವಿ, ಸುರತ್ಕಲ್ ಎನ್ ಐಟಿಕೆ ಕಾಲೇಜು ಮತ್ತು ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿಗ ಸುಮಾರು 58 ವಿದ್ಯಾರ್ಥಿಗಳು ಮಂಗಳೂರು ಕಮಿಷನರ್ ಶಶಿಕುಮಾರ್ ಭೇಟಿ ಮಾಡಿದ್ದಾರೆ. 

ಅಷ್ಘಾನಿಸ್ತಾನ ಸರ್ಕಾರಕ್ಕೆ ನೀಡಿದ ಶಸ್ತ್ರಾಸ್ತ್ರಗಳೆಲ್ಲಾ ತಾಲಿಬಾನಿಗಳ ಪಾಲು!

22 ಜನ ಯುಜಿ ವಿದ್ಯಾರ್ಥಿಗಳು, 13 ಜನ ಪಿಜಿ ವಿದ್ಯಾರ್ಥಿಗಳು ಹಾಗೂ ರಿಸರ್ಚ್ ವಿದ್ಯಾರ್ಥಿಗಳು ತಮ್ಮ ಕುಟುಂಬದ ಜೊತೆ ಮಂಗಳೂರು ಕಮಿಷನರ್ ಭೇಟಿಯಾಗಿ ಮನವಿ ಮಾಡಿದ್ದಾರೆ.

ಆಫ್ಘನ್ ತಾಲಿಬಾನ್ ಆತಂಕದ ಬೆನ್ನಲ್ಲೇ ತಮಗೆ ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾರೆ. ಕೇಂದ್ರ ಸರ್ಕಾರಕ್ಕೆ ತಮ್ಮ ಬಗ್ಗೆ ಮಾಹಿತಿ ನೀಡುವಂತೆ ಮತ್ತು ಇಲ್ಲಿನ ವಾಸ್ತವ್ಯದ ಬಗ್ಗೆ ಮಾಹಿತಿ ನೀಡುವಂತೆ ಕಮಿಷನರ್ ಬಳಿ ಕೋರಿದ್ದಾರೆ.

ಮಂಗಳೂರು ಕಮಿಷನರ್ ಜೊತೆ ಕೆಲ ಕಾಲ ಮಾತುಕತೆ ನಡೆಸಿದ ವಿದ್ಯಾರ್ಥಿಗಳು ತಮ್ಮ ರಕ್ಷಣೆಗಾಗಿ ಕೋರಿದ್ದಾರೆ.