'ಪಾಕಿಸ್ತಾನ್ ಜಿಂದಾಬಾದ್' ಎಂಬ ಘೋಷಣೆಗಳನ್ನು ಕೂಗಿದ ವಿದ್ಯಾರ್ಥಿಗಳ ಪರ ಮಾತನಾಡುವ ಮೂಲಕ ವಿವಾದಾವನ್ನ ಮೈಮೇಲೆ ಎಳೆದುಕೊಂಡ ನಟ ಚೇತನ್‌ ಕುಮಾರ್ 

ಬೆಂಗಳೂರು(ನ.19): ಸದಾ ವಿವಾದಗಳ ಮೂಲಕ ಸುದ್ದಿಯಲ್ಲಿರುವ ನಟ ಚೇತನ್‌ ಕುಮಾರ್ ಇದೀಗ ಮತ್ತೊಂದು ವಿವಾದಾತ್ಮಕ ಹೇಳಿಕೆ ಮೂಲಕ ಮತ್ತೆ ಸುದ್ದಿಯಾಗಿದ್ದಾರೆ. ಹೌದು, ಈ ಬಾರಿ 'ಪಾಕಿಸ್ತಾನ್ ಜಿಂದಾಬಾದ್' ಎಂಬ ಘೋಷಣೆಗಳನ್ನು ಕೂಗಿದ ವಿದ್ಯಾರ್ಥಿಗಳ ಪರ ಮಾತನಾಡುವ ಮೂಲಕ ವಿವಾದಾವನ್ನ ಮೈಮೇಲೆ ಎಳೆದುಕೊಂಡಿದ್ದಾರೆ. 

ನಿನ್ನೆ ನಡೆದ ಕಾಲೇಜು ಫೆಸ್ಟ್‌ನಲ್ಲಿ ಬೆಂಗಳೂರಿನ 3 ವಿದ್ಯಾರ್ಥಿಗಳು 'ಪಾಕಿಸ್ತಾನ್ ಜಿಂದಾಬಾದ್' ಎಂಬ ಘೋಷಣೆಗಳನ್ನು ಕೂಗಿದ್ದರು. ಈ ಕಾರಣಕ್ಕಾಗಿ ಆರ್ಯನ್, ರಿಯಾ ಮತ್ತು ದಿನಕರ್ ಎಂಬ ವಿದ್ಯಾರ್ಥಿಗಳಿಗೆ ಥಳಿಸಿ ಬೆದರಿಸಿ ಮತ್ತು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. 

ಐಷಾರಾಮಿ ಬಂಗಲೆಯಲ್ಲಿ ಜೀವನ ನಡೆಸುವವರು ನೆಗ್ಲೆಟ್ ಮಾಡ್ಲಿ: ಉಪೇಂದ್ರಗೆ ಟಾಂಗ್ ಕೊಟ್ಟ ಚೇತನ್

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಚೇತನ್‌ ಕುಮಾರ್‌ ಅವರು ತಮ್ಮ ಅಧಿಕೃತ ಫೇಸ್‌ಬುಕ್‌ ಖಾತೆಯಲ್ಲಿ ಬರೆದುಕೊಂಡಿರುವ ಅವರು, ನಿನ್ನೆ ನಡೆದ ಕಾಲೇಜು ಫೆಸ್ಟ್‌ನಲ್ಲಿ ಬೆಂಗಳೂರಿನ 3 ವಿದ್ಯಾರ್ಥಿಗಳು 'ಪಾಕಿಸ್ತಾನ್ ಜಿಂದಾಬಾದ್' ಎಂಬ ಘೋಷಣೆಗಳನ್ನು ಕೂಗಿದ್ದಾರೆ. ಇದನ್ನು ವಿನೋದಕ್ಕಾಗಿ ಮಾಡಲಾಗಿದೆ. ಈ ಕಾರಣಕ್ಕಾಗಿ ಆರ್ಯನ್, ರಿಯಾ ಮತ್ತು ದಿನಕರ್ ಅವರನ್ನು ಥಳಿಸಿ ಬೆದರಿಸಿ ಮತ್ತು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.ಇದು ಅಸಂಬದ್ಧ ಮತ್ತು ಅಪಾಯಕಾರಿ. ಪಾಕಿಸ್ತಾನದ ಜನರು ನಮ್ಮ ಸಹೋದರಿಯರು ಮತ್ತು ಸಹೋದರರು - ನಮ್ಮ ಶತ್ರುಗಳಲ್ಲ. ವಾಕ್ ಸ್ವಾತಂತ್ರ್ಯವನ್ನು ನಾವು ಎತ್ತಿ ಹಿಡಿಯಬೇಕು ಅಂತ ಬರೆದುಕೊಂಡಿದ್ದಾರೆ. ಇವರ ಪೋಸ್ಟ್‌ಗೆ ಫೇಸ್‌ಬುಕ್‌ನಲ್ಲಿ ಜನರು ಕೆಂಡಕಾರಿದ್ದಾರೆ.