ರೋಹಿಣಿ ಸಿಂಧೂರಿ ವರ್ಗಾವಣೆಯಾದರೂ ನಿಲ್ಲದ ವಾಕ್ಸಮರ ರೋಹಿಣಿ ವಿರುದ್ಧ ಮತ್ತೆ ಗಂಭೀರ ಆರೋಪ ಮಾಡಿದ ಪ್ರತಾಪ್ ಸಿಂಹ್ ಅನೇಕ ಜನರಿಗೆ ಅನ್ಯಾಯವಾಗಿದೆ ಎಂದು ಸಂಸದರ ಅಸಮಾಧಾನ

ಮೈಸೂರು (ಜು.09): ಜಿಲ್ಲೆಯಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆಯಲ್ಲಿ ಭಾರಿ ವ್ಯತ್ಯಾಸವಿದ್ದು, ಇದರಿಂದ ಅನೇಕರಿಗೆ ಅನ್ಯಾಯವಾಗಿದೆ ಎಂದು ಸಂಸದ ಪ್ರತಾಪ ಸಿಂಹ ಆರೋಪಿಸುವ ಮೂಲಕ ಪರೋಕ್ಷವಾಗಿ ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. 

ಎಚ್.ಡಿ.ಕುಮಾರಸ್ವಾಮಿ ಬೆಂಬಲಕ್ಕೆ ನಿಂತ ಸಂಸದ ಪ್ರತಾಪ್ ಸಿಂಹ .

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಅಧಿಕಾರಿಗಳು ಯಾವ ಕಾರಣಕ್ಕೆ ಸಾವಿನ ವರದಿ ಮುಚ್ಚಿಟ್ಟಿದ್ದಾರೋ ಗೊತ್ತಿಲ್ಲ. ಮೇ ತಿಂಗಳಲ್ಲಿ 1003 ಸಾವಿನ ಪ್ರಕರಣ ಕಂಡುಬಂದಿದೆ.

 ಆದರೆ ಅಂದಿನ ಅಧಿಕಾರಿಗಳು ಕೇವಲ 250 ಮಂದಿ ಮಾತ್ರ ಮೃತಪಟ್ಟಿರುವುದಾಗಿ ವರದಿ ಮಾಡಿದ್ದಾರೆ. ಈಗ ಸರ್ಕಾರ ಸತ್ತವರ ಕುಟುಂಬಕ್ಕೆ ಪರಿಹಾರ ನೀಡುತ್ತಿರುವುದರಿಂದ ಅನೇಕರಿಗೆ ಅನ್ಯಾಯವಾಗುತ್ತಿದೆ ಎಂದು ಹೇಳಿದರು.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona