ಹುಬ್ಬಳ್ಳಿ(ಫೆ.24): ನಗರದ ಪ್ರೇರಣಾ ಕಾಲೇಜಿನಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಪಾಕಿಸ್ತಾನ ಜಿಂದಾಬಾದ್ ಕೂಗಿದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಅಂತಹದ್ದೇ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ. 

"

ಹೌದು, ಹುಬ್ಬಳ್ಳಿ ತಾಲೂಕಿನ ತಾಲೂಕಿನ ಬುಡ್ರಸಿಂಗಿ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಿಡಿಗೇಡಿಗಳು 'ಪಾಕಿಸ್ತಾನ ಜಿಂದಾಬಾದ್' ಹಾಗೂ 'ಟಿಪ್ಪು ಸುಲ್ತಾನ್ ಶಾಲೆ' ಎಂದು ಮೂರು ಕಡೆಗಳಲ್ಲಿ ಘೋಷಣೆಗಳನ್ನ ಬರೆದಿದ್ದಾರೆ.
ಶಾಲೆ ಗೋಡೆಯ ಮೇಲೆ ಕಿಡಿಗೇಡಿಗಳು ಪಾಕ್ ಪರ ಘೋಷಣೆ ಹಾಗೂ ಟಿಪ್ಪು ಸುಲ್ತಾನ್ ಶಾಲೆ ಎಂದು ಬರೆದಿದ್ದಕ್ಕೆ ಗ್ರಾಮದ ಜನತೆ ಸಾಕಷ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. 

'ಪಾಕಿಸ್ತಾನ್ ಜಿಂದಾಬಾದ್'ಎಂದ ಹುಬ್ಬಳ್ಳಿಯ KLE ವಿದ್ಯಾರ್ಥಿಗಳು ಅರೆಸ್ಟ್

ಘಟನೆಯ ಸುದ್ದಿ ತಿಳಿದು ಬುಡ್ರಸಿಂಗಿ ಗ್ರಾಮಕ್ಕೆ ದೌಡಾಯಿಸಿದ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಎಸ್‌ಡಿಎಂಸಿ ಸದಸ್ಯರ ಜತೆ ಡಿಎಸ್‌ಪಿ ರಾಮನಗೌಡ ಹಟ್ಟಿ, ರವಿಗೌಡ ಸಭೆ ನಡೆಸಿದ್ದಾರೆ. ಪ್ರಕರಣದ ಸಂಬಂಧ ಪೊಲೀಸರಿಗೆ ದೂರು ನೀಡಲು ಎಸ್‌ಡಿಎಂಸಿ ಸದಸ್ಯರು ಮುಂದಾಗಿದ್ದಾರೆ.

#NewsIn100Seconds ಈ ಕ್ಷಣದ ಪ್ರಮುಖ ಹೆಡ್‌ಲೈನ್ಸ್‌

"

ಫೆಬ್ರವರಿ 24ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ