ಯಾದಗಿರಿ: ಕೃಷ್ಣಾ ನದಿ ತೀರದ ಜನರಿಗೆ ಮತ್ತೆ ಪ್ರವಾಹ ಭೀತಿ..!
* ಬಸವಸಾಗರ ಡ್ಯಾಂನಿಂದ ಕೃಷ್ಣಾ ನದಿಗೆ 1 ಲಕ್ಷ 20 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
* ಕೃಷ್ಣಾ ನದಿಪಾತ್ರದ ಜನರಿಗೆ ಹೈ ಅಲರ್ಟ್ ಘೋಷಣೆ
* ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆ
ಯಾದಗಿರಿ(ಜು.22): ಜಿಲ್ಲೆಯ ಕೃಷ್ಣಾ ನದಿ ತೀರದ ಜನರಿಗೆ ಮತ್ತೆ ಪ್ರವಾಹದ ಭೀತಿ ಎದುರಾಗಿದೆ. ಹೌದು, ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನಲ್ಲಿರುವ ಆಲಮಟ್ಟಿ ಜಲಾಶಯದ ಮೂಲಕ ಜಿಲ್ಲೆಯ ನಾರಾಯಣಪುರದ ಬಸವಸಾಗರ ಜಲಾಶಯಕ್ಕೆ ನೀರು ಹರಿಬಿಡಲಾಗಿದೆ.
ಹೀಗಾಗಿ, ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 1 ಲಕ್ಷ 20 ಸಾವಿರ ಕ್ಯೂಸೆಕ್ ನೀರು ಹೊರಬಿಡಲಾಗಿದೆ.
ಬಸವಸಾಗರ ಜಲಾಶಯದಿಂದ 57 ಸಾವಿರ ಕ್ಯುಸೆಕ್ ನೀರು ಕೃಷ್ಣಾ ನದಿಗೆ ಬಿಡುಗಡೆ
ಕೃಷ್ಣಾ ನದಿಪಾತ್ರದ ಜನರಿಗೆ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ನದಿ ಪಾತ್ರದ ರೈತರಿಗೆ ಎಚ್ಚರಿಕೆಯಿಂದಿರಲು ಡ್ಯಾಂ ಅಧಿಕಾರಿಗಳಿಂದ ಸೂಚನೆ ನೀಡಲಾಗಿದೆ.