ನೀರು ಸಮಸ್ಯೆ ನಿವಾರಣೆಗೆ ಮಹಾರಾಷ್ಟ್ರ ಜೊತೆ ಒಡಂಬಡಿಕೆ: ಕಾಗವಾಡ ಶಾಸಕ ರಾಜು ಕಾಗೆ

ಮಹಾರಾಷ್ಟ್ರದ ಸರ್ಕಾರದ ಜೊತೆಗೆ ಒಡಂಬಡಿಕೆ ಮಾಡಿಕೊಂಡು ಅಲ್ಲಿನ ವಾರಣಾ ಇಲ್ಲವೆ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುವುದು, ಮಳೆಗಾಲದಲ್ಲಿ ಆಲಮಟ್ಟಿ ಇಲ್ಲವೆ ನಾರಾಯಣಪುರ ಜಲಾಶಯದಿಂದ ಮಳೆಗಾಲದಲ್ಲಿ ಮಹಾರಾಷ್ಟ್ರದ ಭೀಮಾ ನದಿಗೆ ಕುಡಿಯುವ ನೀರು ಬಿಡುವ ಬಗ್ಗೆ ಸಮಗ್ರ ಚಿಂತನೆ ನಡೆದಿದೆ: ಕಾಗವಾಡ ಶಾಸಕ ರಾಜು ಕಾಗೆ 

Agreement with Maharashtra to Solve Water Problem Says Kagwad MLA Raju Kage grg

ಕಾಗವಾಡ(ಡಿ.24):  ಪ್ರಸಕ್ತ ವರ್ಷ ಬರಗಾಲ ಆವರಿಸಿದೆ. ಅಥಣಿ, ಕಾಗವಾಡ, ರಾಯಬಾಗ, ಚಿಕ್ಕೋಡಿ, ಜಮಖಂಡಿ ತಾಲೂಕುಗಳಲ್ಲಿ ಬೇಸಿಗೆಯಲ್ಲಿ ನೀರಿನ ಅಭಾವ ಕಾಣುವ ಲಕ್ಷಣಗಳಿವೆ. ಸಮಸ್ಯೆ ನಿವಾರಣೆಗೆ ಈ ವರ್ಷ ಮಹಾರಾಷ್ಟ್ರದ ಸರ್ಕಾರದ ಜೊತೆಗೆ ಒಡಂಬಡಿಕೆ ಮಾಡಿಕೊಳ್ಳುವ ಬಗ್ಗೆ ಚಿಂತನೆ ನಡೆದಿದೆ ಎಂದು ಕಾಗವಾಡ ಶಾಸಕ ರಾಜು ಕಾಗೆ ಹೇಳಿದರು.

ಶನಿವಾರ ಉಗಾರದಲ್ಲಿ ಪತ್ರಕರ್ತರೊಡನೆ ಮಾತನಾಡಿ ಅವರು, ಮಹಾರಾಷ್ಟ್ರದ ಸರ್ಕಾರದ ಜೊತೆಗೆ ಒಡಂಬಡಿಕೆ ಮಾಡಿಕೊಂಡು ಅಲ್ಲಿನ ವಾರಣಾ ಇಲ್ಲವೆ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುವುದು, ಮಳೆಗಾಲದಲ್ಲಿ ಆಲಮಟ್ಟಿ ಇಲ್ಲವೆ ನಾರಾಯಣಪುರ ಜಲಾಶಯದಿಂದ ಮಳೆಗಾಲದಲ್ಲಿ ಮಹಾರಾಷ್ಟ್ರದ ಭೀಮಾ ನದಿಗೆ ಕುಡಿಯುವ ನೀರು ಬಿಡುವ ಬಗ್ಗೆ ಸಮಗ್ರ ಚಿಂತನೆ ನಡೆದಿದೆ. ಈ ಕುರಿತು ಅಧಿವೇಶನದಲ್ಲಿ ಮುಖ್ಯಮಂತ್ರಿಗಳ ಹಾಗೂ ಉಪಮುಖ್ಯಮಮತ್ರಿಗಳ ಗಮನ ಸೆಳೆದಿದ್ದೇನೆ. ಅವರು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಅದು ಕಾರ್ಯರೂಪಕ್ಕೆ ಬಂದಲ್ಲಿ ಬೇಸಿಗೆಯಲ್ಲಿ ಯಾವುದೇ ನೀರಿನ ಸಮಸ್ಯೆಯಾಗದು ಎಂದರು.

ಕಾಂಗ್ರೆಸ್‌ ಮುಸ್ಲಿಂ ಪಾರ್ಟಿಯಾಗಿ ನಿರ್ಮಾಣಗೊಂಡಿದೆ : ಚಕ್ರವರ್ತಿ ಸೂಲಿಬೆಲೆ

ಬೆಳಗಾವಿಯಲ್ಲಿ ನಡೆದ ಅದಿವೇಶನದಲ್ಲಿ ಕಾಗವಾಡ ಮತಕ್ಷೇತ್ರ ಸೇರಿ ಸಮಗ್ರ ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ಎಲ್ಲ ಶಾಸಕರು ರಾಜ್ಯ ಸರ್ಕಾರದ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡ ಕಾಗವಾಡ ಮತಕ್ಷೇತ್ರದ ಅಭಿವೃದ್ಧಿ, ಬರ ನಿರ್ವಹಣೆ ಹಾಗೂ ಬಹುದಿನಗಳ ಬೇಡಿಕೆ ಖಿಳೇಗಂವ ಬಸವೇಶ್ವರ ಏತ ನೀರಾವರಿ ಯೋಜನೆಗೆ ಇನ್ನಷ್ಟು ಅನುದಾನ ನೀಡುವ ಬಗ್ಗೆ ಸರ್ಕಾರದ ಗಮನ ಸೆಳೆದಿದ್ದು, ಈಗಾಗಲೇ ₹15 ಕೋಟಿ ಅನುದಾ ಬಿಡುಗಡೆಯಾಗಿದೆ. ಶೀಘ್ರದಲ್ಲೇ ಬಾಕಿ ಕಾಮಗಾರಿ ಪೂರ್ಣಗೊಳಿಸಿ ರೈತಾಪಿ ಜನರ ಭೂಮಿಗೆ ನೀರು ನೀಡುವ ಕಾರ್ಯ ಪ್ರಾಮಾಣಿಕವಾಗಿ ಮಾಡುವ ಭರವಸೆ ನೀಡಿದರು.

ರಾಜ್ಯದ 4 ಲಕ್ಷ ರೈತರ ಕೃಷಿ ಪಂಪ್‌ ಸೆಟ್‌ಗಳಿಗೆ ಸರ್ಕಾರದಿಂದ ಮೂಲ ಸೌಕರ್ಯ ಕಲ್ಪಿಸುವಂತೆ ಅಧಿವೇಶನದ ಪ್ರಶ್ನೋತ್ತರ ವೇಳೆ ಉತ್ತರಿಸಿರುವ ಇಂಧನ ಸಚಿವ ಕೆ.ಜೆ ಜಾರ್ಜ್‌, ನೋಂದಾಯಿತ 500 ಮೀ. ವ್ಯಾಪ್ತಿಯಲ್ಲಿನ ಪಂಪಸೆಟ್‌ಗಳಿಗೆ ವಿದ್ಯುತ್ ಸರಬರಾಜು ಕಂಪನಿಗಳಿಂದ ಮೂಲ ಸೌಕರ್ಯ ಕಲ್ಪಿಸಲಾಗುವು ಎಂದಿದ್ದಾರೆ. ಆದರೆ, ನಾವು ಎಷ್ಟೇ ದೂರವಿದ್ದರೂ ಸಹ ಸರ್ಕಾರವೇ ಹಣ ಭರಿಸಿ ರೈತರಿಗೆ ಉಚಿತ ಸೌಲಭ್ಯ ನೀಡುವಂತೆ ಒತ್ತಾಯಿಸಿರುವುದಾಗಿ ರಾಜು ಕಾಗೆ ತಿಳಿಸಿದರು.

ಹಿಜಾಬ್‌ ನಿಷೇಧ ವಾಪಸ್‌: ಸಿಎಂ ಸಿದ್ದು ಹೇಳಿಕೆಗೆ ಪೇಜಾವರ ಶ್ರೀ ಆಕ್ರೋಶ

ಈಚೆಗೆ ಜೋರಾಗಿ ಸುರಿದ ಗಾಳಿ ಮಿಶ್ರಿತ ಆಲೆಕಲ್ಲು ಮಳೆಗೆ ಕಾಗವಾಡ ಮತಕ್ಷೇತ್ರದ ವ್ಯಾಪ್ತಿಯಲ್ಲಿನ ಕಾಗವಾಡ, ಮಂಗಸೂಳಿ, ಲೋಕುರ, ಸಂಬರಗಿ, ಆಜೂರ ಸೇರಿದಂತೆ ಹಲವು ಗ್ರಾಮಗಳಲ್ಲಿ ಕಟಾವಿಗೆ ಬಂದ ದ್ರಾಕ್ಷಿ ಬೆಳೆ ಹಾನಿಯಾಗಿ ಕೋಟ್ಯಂತರ ರು. ನಷ್ಟವಾಗಿದೆ. ಪ್ರತಿ ಎಕರೆಗೆ ಕನಿಷ್ಟ ₹5 ಲಕ್ಷ ಪರಿಹಾರ ನೀಡಲು ಮುಖ್ಯಮಂತ್ರಿಗಳಿಗೆ ಹಾಗೂ ತೋಟಗಾರಿಕೆ ಸಚಿವರಿಗೆ ಮನವಿ ಮಾಡಿದ್ದೇನೆ ಎಂದು ಶಾಸಕರು ತಿಳಿಸಿದರು.

ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡ ಕಾಗವಾಡ ಮತಕ್ಷೇತ್ರದ ಅಭಿವೃದ್ಧಿ, ಬರ ನಿರ್ವಹಣೆ ಹಾಗೂ ಬಹುದಿನಗಳ ಬೇಡಿಕೆ ಖಿಳೇಗಂವ ಬಸವೇಶ್ವರ ಏತ ನೀರಾವರಿ ಯೋಜನೆಗೆ ಇನ್ನಷ್ಟು ಅನುದಾನ ನೀಡುವ ಬಗ್ಗೆ ಸರ್ಕಾರದ ಗಮನ ಸೆಳೆದಿದ್ದು, ಈಗಾಗಲೇ ₹15 ಕೋಟಿ ಅನುದಾ ಬಿಡುಗಡೆಯಾಗಿದೆ. ಶೀಘ್ರದಲ್ಲೇ ಬಾಕಿ ಕಾಮಗಾರಿ ಪೂರ್ಣಗೊಳಿಸಿ ರೈತಾಪಿ ಜನರ ಭೂಮಿಗೆ ನೀರು ನೀಡುವ ಕಾರ್ಯ ಪ್ರಾಮಾಣಿಕವಾಗಿ ಮಾಡುವೆ ಎಂದು ಕಾಗವಾಡ ಶಾಸಕ ರಾಜು ಕಾಗೆ ತಿಳಿಸಿದ್ದಾರೆ.  

Latest Videos
Follow Us:
Download App:
  • android
  • ios