Asianet Suvarna News Asianet Suvarna News

ಅಹಿಂದ ಹಿಂದುಳಿದ ದಲಿತ ಸಮುದಾಯದ ಅಭಿವೃದ್ಧಿಗೆ ಶ್ರಮಿಸುವೆ: ಮಂಜುನಾಥ್

ಅಹಿಂದ ಹಿಂದುಳಿದ ದಲಿತ ಸಮಾಜದ ಅಭಿವೃದ್ಧಿಗಾಗಿ ಸಂಘಟನೆ ಅವಶ್ಯಕವಾಗಿದ್ದು, ಈ ನಿಟ್ಟಿನಲ್ಲಿ ರಾಜ್ಯಾಧ್ಯಕ್ಷರ ಆದೇಶದ ಮೇರೆಗೆ ತಾಲೂಕಿನಲ್ಲಿ ನೂತನವಾಗಿ ಅಹಿಂದ ಕರ್ನಾಟಕ ಅಲ್ಪಸಂಖ್ಯಾತರ ಹಿಂದುಳಿದವರ ದಲಿತರ ಒಕ್ಕೂಟ ತಾಲೂಕು ಶಾಖೆಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ತಾಲೂಕು ಅಧ್ಯಕ್ಷ ಎಚ್.ಎನ್. ಮಂಜುನಾಥ್ ತಿಳಿಸಿದರು.

Ahinda will strive for the development of backward Dalit community: Manjunath snr
Author
First Published Jan 20, 2024, 11:31 AM IST

 ತಿಪಟೂರು ;  ಅಹಿಂದ ಹಿಂದುಳಿದ ದಲಿತ ಸಮಾಜದ ಅಭಿವೃದ್ಧಿಗಾಗಿ ಸಂಘಟನೆ ಅವಶ್ಯಕವಾಗಿದ್ದು, ಈ ನಿಟ್ಟಿನಲ್ಲಿ ರಾಜ್ಯಾಧ್ಯಕ್ಷರ ಆದೇಶದ ಮೇರೆಗೆ ತಾಲೂಕಿನಲ್ಲಿ ನೂತನವಾಗಿ ಅಹಿಂದ ಕರ್ನಾಟಕ ಅಲ್ಪಸಂಖ್ಯಾತರ ಹಿಂದುಳಿದವರ ದಲಿತರ ಒಕ್ಕೂಟ ತಾಲೂಕು ಶಾಖೆಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ತಾಲೂಕು ಅಧ್ಯಕ್ಷ ಎಚ್.ಎನ್. ಮಂಜುನಾಥ್ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಒಕ್ಕೂಟದ ರಾಜ್ಯಾಧ್ಯಕ್ಷರಾದ ಪ್ರಭುಲಿಂಗ ದೊಡ್ಡಮನಿ ಅವರು ನನ್ನನ್ನು ತಾಲೂಕು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದು, ತತ್ವ ಸಿದ್ಧಾಂತದಂತೆ ಪ್ರಾಮಾಣಿಕವಾಗಿ ಕೆಲಸ ಮಾಡಿಕೊಂಡು ಹೋಗುತ್ತೇನೆ. ಮುಂದಿನ ದಿನಗಳಲ್ಲಿ ಅಹಿಂದ ದಲಿತ ಸಮುದಾಯದ ಆರ್ಥಿಕ ಸದೃಢತೆಗಾಗಿ ನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರಿನಲ್ಲಿ ಸಹಕಾರ ಸಂಘವನ್ನು ಪ್ರಾರಂಭಿಸಲಾಗುವುದು. ಈಗಾಗಲೆ ಅದಕ್ಕಾಗಿ ರೂಪುರೇಷೆಗಳನ್ನು ಸಿದ್ಧಪಡಿಸಲಾಗಿದೆ. ಒಕ್ಕೂಟದ ಸಂಘಟನೆಗಾಗಿ ಹೋಬಳಿ, ಗ್ರಾಮ ಮಟ್ಟದಲ್ಲಿ ಶಾಖೆಗಳನ್ನು ತೆರೆದು ಸಮುದಾಯದ ಧ್ವನಿಯಾಗಿ ಕೆಲಸ ಮಾಡುತ್ತೇನೆ ಎಂದರು.

ಈ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ವೆಂಕಟೇಶ್‌ಮೂರ್ತಿ, ಡಿ.ಎನ್. ಶಿವಯ್ಯ, ಪ್ರಧಾನ ಕಾರ್ಯದರ್ಶಿಗಳನ್ನಾಗಿ ಹರೀಶ್, ಶಿವಣ್ಣ, ಸಂಘಟನಾ ಕಾರ್ಯದರ್ಶಿಯಾಗಿ ಲಿಂಗರಾಜು, ಕಾರ್ಯಾಧ್ಯಕ್ಷರಾಗಿ ದಯಾನಂದ್ ಕಾ. ಬೋರಪ್ಪ, ಕಾರ್ಯದರ್ಶಿಗಳಾಗಿ ಮಾಲ್ತೇಶ್, ಮೋಹನ್‌ಬಾನು, ಸಹ ಕಾರ್ಯದರ್ಶಿ ರಂಗಸ್ವಾಮಿ, ಖಜಾಂಚಿ ಮಂಜುನಾಥ್, ಸಂಚಾಲಕರಾಗಿ ಜಗದೀಶ್, ವೆಂಕಟೇಶ್, ಜಗದೀಶ್, ಸಾಮಾಜಿಕ ಜಾಲತಾಣಕ್ಕೆ ಫೈರೋಜ್, ಕಲೀದ್, ವಕ್ತಾರರಾಗಿ ಧರಣೇಶ್, ಸದಸ್ಯರಾದ ಬಸವರಾಜು, ನವೀನ್, ಮೋಹನ್‌ರಾಜ್, ಪ್ರಸನ್ನಕುಮಾರ್ ಇವರುಗಳನ್ನು ಆಯ್ಕೆ ಮಾಡಲಾಯಿತು.

ಸುದ್ದಿಗೋಷ್ಠಿಯಲ್ಲಿ ಆಯ್ಕೆಯಾದ ನೂತನ ಪದಾಧಿಕಾರಿಗಳು ಹಾಗೂ ಮುಖಂಡರುಗಳಿದ್ದರು.

Latest Videos
Follow Us:
Download App:
  • android
  • ios