ವಿಜಯಪುರ, (ಜೂನ್.03):  ಕಾಂಗ್ರೆಸ್‌ ನಾಯಕಿ ರೇಷ್ಮಾ ಪಡೇಕನೂರ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಸೇರಿದಂತೆ ಇಬ್ಬರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಪ್ರಕರಣದ ಪ್ರಮುಖ ಆರೋಪಿ ಮಹಾರಾಷ್ಟ್ರದ ಎಂಐಎಂ ಮುಖಂಡ ಹಾಗೂ ಸೋಲ್ಲಾಪುರ ಮಹಾನಗರ ಪಾಲಿಕೆ ಕಾರ್ಪೊರೇಟರ್ ತೌಫಿಕ್ ಶೇಖ್ ಹಾಗೂ ಮತ್ತೋರ್ವ ಆರೋಪಿ ಆತನ ಕಾರು ಚಾಲಕ ಇಜಾಜ್ ಬಿರಾದಾರ ಎನ್ನುವರನ್ನು ಪೊಲೀಸರು ಬಂಧಿಸಿದ್ದಾರೆ.

"

ವಿಜಯಪುರ ಕೈ ನಾಯಕಿ ಶವ ಪತ್ತೆ: ಅನೈತಿಕ ಸಂಬಂಧದ ಶಂಕೆ

 ಈ ಬಗ್ಗೆ ಮಾಹಿತಿ ನೀಡಿರುವ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ ನಿಕ್ಕಂ, ಕಾಂಗ್ರೆಸ್ ನಾಯಕಿ ರೇಷ್ಮಾ ಪಡೇಕನೂರ ಕೊಲೆ ಪ್ರಕರಣದ ಇಬ್ಬರು ಆರೋಪಿಗಳನ್ನು ಭಾನುವಾರ ಬಂಧಿಸಿರುವ ಪೊಲೀಸರು, ತಲೆಮರೆಸಿಕೊಂಡಿರುವ ಇನ್ನೊಬ್ಬ ಆರೋಪಿ ಬಂಧನಕ್ಕೆ ಜಾಲ ಬೀಸಿದ್ದಾರೆ ಎಂದು ಹೇಳಿದರು.

ಎಂಐಎಂ ಮುಖಂಡ ತೌಫಿಕ್ ಗೆ ರೇಷ್ಮಾ ಪಡೇಕನೂರ ಪರಿಚಯ ಇದ್ದು,. ಹಣ ಹಾಗೂ ಆಸ್ತಿಗಾಗಿ ತೌಫಿಕ್ ನನ್ನು ಬ್ಲಾಕ್ ಮೇಲ್ ಮಾಡಿದ್ದರು. ಅಷ್ಟೇ ಅಲ್ಲದೇ 8 ಎಕರೆ ಆಸ್ತಿ ತನ್ನ ಹೆಸರಿಗೆ ಬರೆಯುವಂತೆ ರೇಷ್ಮಾ ಬ್ಲಾಕ್ ಮೇಲ್ ಮಾಡುತ್ತಿದ್ದರು.

ಇದ್ರಿಂದ ಬೇಸತ್ತು ಪ್ಲಾನ್ ಮಾಡಿ ರೇಷ್ಮಾಳನ್ನು ಕೊಲೆ ಮಾಡಿದ್ದಾಗಿ ಆರೋಪಿಗಳು‌ ಪೊಲೀಸರೆದುರು ಬಾಯ್ ಬಿಟ್ಟಿದ್ದಾರೆಂದು ಎಸ್ಪಿ ಪ್ರಕಾಶ ನಿಕ್ಕಂ ತಿಳಿಸಿದರು.

17 ಮೇ, 2019  ರಂದು ವಿಜಯಪುರದ ಕೋಲ್ಹಾರ ಸೇತುವೆ ಕೆಳಗೆ ರೇಷ್ಮಾ ಪಡೇಕನೂರ ಶವ ಪತ್ತೆಯಾಗಿತ್ತು.