Asianet Suvarna News Asianet Suvarna News

Vijayapura: ನಾಳೆ ಅಕ್ಕಮಹಾದೇವಿ ಮಹಿಳಾ ವಿವಿ ಘಟಿಕೋತ್ಸವ: ಮೂವರಿಗೆ ಗೌರವ ಡಾಕ್ಟರೇಟ್‌ ಪ್ರದಾನ

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ 13 ಮತ್ತು 14ನೇ ವಾರ್ಷಿಕ ಘಟಿಕೋತ್ಸವವನ್ನು ಡಿ.19ರಂದು ವಿಶ್ವವಿದ್ಯಾನಿಲಯದ ಜ್ಞಾನಶಕ್ತಿ ಕ್ಯಾಂಪಸ್‍ನಲ್ಲಿ ಆಯೋಜಿಸಲಾಗಿದೆ. ಸಮಾಜ ಸೇವಕಿ ಡಾ.ಎಸ್.ಜಿ. ಸುಶೀಲಮ್ಮ, ಇಂದುಮತಿ ಕಾಟಾರೆ ಹಾಗೂ ರೇಷ್ಮಾಕೌರ್ ಅವರಿಗೆ ಗೌರವ ಡಾಕ್ಟರೇಟ್‌ ಪದವಿ ಪ್ರದಾನ ಮಾಡಲಾಗುತ್ತದೆ.

Akkamahadevi Womens University convocation tomorrow Honorary doctorates awarded to three sat
Author
First Published Dec 18, 2022, 5:51 PM IST

ವರದಿ- ಷಡಕ್ಷರಿ‌ ಕಂಪೂನವರ್ ಏಷ್ಯಾನೆಟ್ ಸುವರ್ಣ ನ್ಯೂಸ್ 

ವಿಜಯಪುರ (ಡಿ.18) :  ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ 13 ಮತ್ತು 14ನೇ ವಾರ್ಷಿಕ ಘಟಿಕೋತ್ಸವವನ್ನು ಡಿ.19ರಂದು  ವಿಶ್ವವಿದ್ಯಾನಿಲಯದ ಜ್ಞಾನಶಕ್ತಿ ಕ್ಯಾಂಪಸ್‍ನಲ್ಲಿ ಆಯೋಜಿಸಲಾಗಿದೆ ಎಂದು ಕುಲಪತಿ .ಬಿ.ಕೆ.ತುಳಸಿಮಾಲ ತಿಳಿಸಿದರು. 

ವಿಜಯಪುರದ ಮಹಿಳಾ ವಿಶ್ವವಿದ್ಯಾಲಯ ಆವರಣದಲ್ಲಿ ಮಾದ್ಯಮ ಗೋಷ್ಠಿಯಲ್ಲಿ ಮಾತನಾಡಿ,  ನಾಳೆ ಮಧ್ಯಾಹ್ನ 12 ಗಂಟೆಗೆ ನಡೆಯುವ ಘಟಿಕೋತ್ಸವ ಕಾರ್ಯಕ್ರಮದಲ್ಲಿ ವಿಶ್ವ ವಿದ್ಯಾನಿಲಯದ ಕುಲಾಧಿಪತಿ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಉನ್ನತ ಶಿಕ್ಷಣ, ಐಟಿ ಮತ್ತು ಬಿಟಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಅಶ್ವತ್ಥ ನಾರಾಯಣ ಸಿ.ಎನ್. ನವದೆಹಲಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಕುಲಪತ ಶಾಂತಿಶ್ರೀ ಧೂಳಿಪುಡಿ ಪಂಡಿತ್  ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. 

ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್: ಈಬಾರಿಯ ವಿಶ್ವವಿದ್ಯಾಳಯದ ವಿಶ್ಘಟಿಕೋತ್ಸವದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ  ಮೂವರು ಸಾಧಕಿಯರಿಗೆ ಈ ಬಾರಿಯ ಗೌರವ ಡಾಕ್ಟರೇಟ್ ನೀಡಲು ನಿರ್ಧರಿಸಲಾಗಿದೆ. ಬೆಂಗಳೂರಿನ ಸುಮಂಗಲಿ ಸೇವಾಶ್ರಮದ ಸಮಾಜ ಸೇವಕಿ ಡಾ.ಎಸ್.ಜಿ. ಸುಶೀಲಮ್ಮ, ಗುಜರಾತಿನ ಪುನರುತ್ಥಾನ ವಿದ್ಯಾಪೀಠದ ಕುಲಪತಿ ಇಂದುಮತಿ ಕಾಟಾರೆ ಹಾಗೂ ಬೀದರಿನ ಗುರುನಾನಕ ಸಮೂಹ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷೆ ರೇಷ್ಮಾಕೌರ್ ಅವರಿಗೆ ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್‌ ಪದವಿ ಪ್ರದಾನ ಮಾಡಲಾಗುತ್ತದೆ. ಇನ್ನು ವಿಶ್ವವಿದ್ಯಾಲಯದ ಕುಲಾಧಿಪತಿ ಥಾವರಚಂದ್‌ ಗೆಹ್ಲೋಟ್‌ ಅವರಿಗೆ ಈ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಿದ್ದಾರೆ ಎಂದರು.

ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ 10 ನೇ ಘಟಿಕೋತ್ಸವ, ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ

167 ವಿದ್ಯಾರ್ಥಿನಿಯರಿಗೆ 202 ಚಿನ್ನದ ಪದಕ: ಕುಲಸಚಿವ ಪ್ರೊ.ಬಿ.ಎಸ್.ನಾವಿ ಮಾತನಾಡಿ, ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಿಂದ ವಿವಿಧ ಸ್ನಾತಕ ಮತ್ತು ಸ್ನಾತಕೋತ್ತರ ಕೋರ್ಸ್‌ಗಳಲ್ಲಿ ಗರಿಷ್ಠ ಅಂಕಗಳನ್ನು ಗಳಿಸಿ ತೇರ್ಗಡೆಯಾದ ಒಟ್ಟು 167 ವಿದ್ಯಾರ್ಥಿನಿಯರಿಗೆ 202 ಚಿನ್ನದ ಪದಕಗಳನ್ನು ಪ್ರದಾನ ಮಾಡಲಾಗುತ್ತಿದೆ. ಈ ಪೈಕಿ 81 ವಿದ್ಯಾರ್ಥಿನಿಯರು 13ನೇ ಘಟಿಕೋತ್ಸವ ಮತ್ತು 37 ವಿದ್ಯಾರ್ಥಿನಿಯರು 14ನೆಯ ಘಟಿಕೋತ್ಸವದ ಚಿನ್ನದ ಪದಕಗಳನ್ನು ಪಡೆಯಲಿದ್ದಾರೆ ಎಂದು ಮಾಹಿತಿ ನೀಡಿದರು. 

Kannada University ಘಟಿಕೋತ್ಸವ: ಭಾರತ ಜ್ಞಾನದ ವಿಶ್ವಗುರು ಆಗಲಿ: ರಾಜ್ಯಪಾಲ

23,911 ವಿದ್ಯಾರ್ಥಿನಿಯರಿಗೆ ಪದವಿ: ಈ ಘಟಿಕೋತ್ಸವದಲ್ಲಿ ಸ್ನಾತಕ, ಸ್ನಾತಕೋತ್ತರ ಮತ್ತು ಪಿಜಿ ಡಿಪ್ಲೋಮಾ ಸೇರಿ ಒಟ್ಟು 23,911 ವಿದ್ಯಾರ್ಥಿನಿಯರು ಪದವಿ ಪಡೆಯಲು ಅರ್ಹರಾಗಿದ್ದಾರೆ ಎಂದು ತಿಳಿಸಿದರು. ಇನ್ನೂ ಘಟಿಕೋತ್ಸವದಲ್ಲಿ ಒಟ್ಟು 55 ವಿದ್ಯಾರ್ಥಿನಿಯರಿಗೆ ಪಿಎಚ್‌.ಡಿ ಪದವಿ ಪ್ರಧಾನ ಮಾಡಲಾಗುವುದು. ಒಟ್ಟು 2,169 ವಿದ್ಯಾರ್ಥಿನಿಯರಿಗೆ ವಿವಿಧ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ನೀಡಲಾಗುವುದು. 13ನೇ ಘಟಿಕೋತ್ಸವದಲ್ಲಿ ಒಟ್ಟು 1,033 ವಿದ್ಯಾರ್ಥಿನಿಯರಿಗೆ ಸ್ನಾತಕೋತ್ತರ ಪದವಿ ನೀಡಲಾಗುವುದು. ಈ ಪೈಕಿ ಎಂ.ಎ. 342, ಎಂ.ಕಾಂ. 250, ಎಂ.ಬಿ.ಎ. 42, ಎಂ.ಎಸ್.ಸಿ. 302, ಎಂ.ಇಡಿ 11, ಎಂ.ಪಿ.ಇಡಿ- 16, ಎಂ.ಎಲ್.ಆಯ್.ಎಸ್‌. 10, ಎಂ.ಎಸ್.ಡಬ್ಲ್ಯೂ 28, ಮತ್ತು ಎಂ.ಸಿ.ಎ. 16 ವಿದ್ಯಾರ್ಥಿನಿಯರಿಗೆ ಪದವಿಗೆ ಅರ್ಹರಾಗಿದ್ದಾರೆ ಎಂದು ತಿಳಿಸಿದರು.

Follow Us:
Download App:
  • android
  • ios