Asianet Suvarna News Asianet Suvarna News

ಪೋಕ್ಸೋ ಪ್ರಕರಣದ ಆರೋಪ: ಮುರುಘಾ ಶ್ರೀಗಳ ಜಾಮೀನು ಅರ್ಜಿ ತಿರಸ್ಕೃತ

ಪೋಕ್ಸೋ ಪ್ರಕರಣದಲ್ಲಿ ಕಳೆದ ಐದು ತಿಂಗಳಿಂದ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಪೀಠಾಧಿಪತಿ ಶ್ರೀ ಶಿವಮೂರ್ತಿ ಮುರುಘಾ ಶರಣರ ಜಾಮೀನು ಅರ್ಜಿಯನ್ನು ಜಿಲ್ಲಾ ಸತ್ರ ನ್ಯಾಯಾಲಯ ತಿರಸ್ಕರಿಸಿದೆ.

Allegation in POCSO case Muruga Sree bail application rejected sat
Author
First Published Jan 31, 2023, 6:15 PM IST

ಚಿತ್ರದುರ್ಗ (ಜ.31):  ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಪೀಠಾಧಿಪತಿ ಮತ್ತು ಎಸ್.ಜೆ.ಎಂ. ವಿದ್ಯಾಪೀಠದ ಅಧ್ಯಕ್ಷರು ಆಗಿರುವ ಶ್ರೀ ಶಿವಮೂರ್ತಿ ಮುರುಘಾ ಶರಣರು  ಸೆ.1 ರಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇತ್ತೀಚೆಗೆ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಎರಡನೇ ಜಿಲ್ಲಾ ಸತ್ರ ನ್ಯಾಯಾಲಯವು ತಿರಸ್ಕರಿಸಿದೆ.

ಚಿತ್ರದುರ್ಗದ ಮುರುಘಾಶ್ರೀ ವಿರುದ್ಧ ಫೋಕ್ಸೊ ಪ್ರಕರಣ ದಾಖಲಾಗಿದ್ದು, ಕಳೆದ ಐದು ತಿಂಗಳಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಪರಕರಣದ ವಿಚಾರವಾಗಿ ಹಲವುಬಾರಿ ವಿಚಾರಣೆ ನಡೆಸಿರುವ ನ್ಯಾಯಾಲಯ ಪೊಲೀಸರ ತನಿಖೆಗೆ ಅನುಕೂಲ ಮಾಡಿಕೊಟ್ಟಿದೆ. ಈ ವೇಳೆ ಜೈಲಿನಿಂದ ಹೊರಬರಲು ಮುರುಘಾ ಶ್ರೀಗಳು ಹಿಂದೊಮ್ಮೆ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದರು. ಆದರೆ, ಸಾಕ್ಷ್ಯನಾಶ, ಆಸ್ತಿಯ ದುರುಪಯೋಗ ಸೇರಿ ಇತರೆ ಕಾರಣದಿಂದ ಅವರಿಗೆ ಜಾಮೀನು ನೀಡುವುದನ್ನು ನ್ಯಾಯಾಲಯ ತಿರಸ್ಕಾರ ಮಾಡಿತ್ತು. ಈಗ ಮತ್ತೊಮ್ಮೆ ಜಾಮೀನು ಅರ್ಜಿ ತಿರಸ್ಕೃತ ಆಗಿದೆ.

ಮುರುಘಾಮಠಕ್ಕೆ ಸರ್ಕಾರ ನೀಡಿದ ಹಣದ ವಿವರ ಕೇಳಿದ ಹೈಕೋರ್ಟ್

ಇನ್ನೂ ಹಲವು ದಿನ ಜೈಲೇ ಗತಿ: ಒಂದನೇ ಫೋಕ್ಸೋ ಪ್ರಕರಣದ ಜಾಮೀನು ಅರ್ಜಿ ವಜಾಗೊಳಿಸಿತ್ತು. ಈಗ ಚಾರ್ಜ್ ಶೀಟ್ ಬಳಿಕ ಜಾಮೀನಿಗೆ ಸಲ್ಲಿಸಿದ್ದ ಅರ್ಜಿಯೂ ವಜಾ ಆಗಿದೆ. ಈ ಬಗ್ಗೆ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ. ಆದ್ದರಿಂದ ಮುರುಘಾಮಠದ ಶಿವಮೂರ್ತಿ ಮುರುಘಾ ಶ್ರೀಗಳಿಗೆ ಇನ್ನೂ ಕೆಲವು ದಿನಗಳು ಜೈಲೇ ಗತಿ ಆಗಲಿದೆ. ಇನ್ನು ಮುರುಘಾಶ್ರೀ ಪರ ವಕೀಲರಿಂದ ಹೈಕೋರ್ಟ್ ಗೆ ಜಾಮೀನು ಅರ್ಜಿ ಸಲ್ಲಿಕೆ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಷಡ್ಯಂತ ಆರೋಪ ರದ್ದತಿಗೆ ಅರ್ಜಿ ಮುಂದೂಡಿಕೆ:  ಇನ್ನು ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಪೀಠಾಧಿಪತಿ ಶ್ರೀ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣದ ಕುರಿತಂತೆ ಷಡ್ಯಂತ್ರ ಮಾಡಲಾಗಿದೆ ಎಂದು ದಾಖಲಿಸಿರುವ ಎಫ್‌ಐಆರ್ ದಾಖಲಿಸಲಾಗಿದೆ. ಈ ಎಫ್‌ಐಆರ್‌ನಲ್ಲಿ ಪೋಕ್ಸೋ ಪ್ರಕರಣ ದಾಖಲಿಸಲು ಸಂತ್ರಸ್ತರಿಗೆ ಪ್ರಚೋದನೆ ನೀಡಿದ ಆರೋಪ ಮಾಡಲಾಗಿತ್ತು. ಈ ಪ್ರಕರಣದ ಅಡಿಯಲ್ಲಿ ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ ಬಸವರಾಜನ್ ಹಾಗೂ ಅವರ ಪತ್ನಿ ಸೌಭಾಗ್ಯ ಬಸವರಾಜನ್‌ ಜೈಲಿಗೆ ಹೋಗಿ ಜಾಮೀನಿನ ಮೇಲೆ ಹೊರಗೆ ಬಂದಿದ್ದಾರೆ. ಆದರೆ, ಈಗ ಮುರುಘಾ ಶರಣರ ವಿರುದ್ಧ ಷಡ್ಯಂತ್ರ ಪ್ರಕರಣದ ಎಫ್‌ಐಆರ್‌ ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. 

ಹಸುಗಳೊಂದಿಗೆ ಮಠ ಖಾಲಿ ಮಾಡಿದ ಮುರುಘಾ ಶರಣರ ಆಪ್ತೆ: ಇದರ ಹಿಂದಿನ 'ನಿಗೂಢ' ಏನು?

ಫೆ.7ಕ್ಕೆ ವಿಚಾರಣೆ ಮುಂದೂಡಿಕೆ : ಈ ಕುರಿತು ಇಂದು ಹೈಕೋರ್ಟ್‌ನಲ್ಲಿ ಪ್ರಕರಣ ಇದ್ದು, ಇದಕ್ಕೆ ಹಾಜರಾದ ಅಜಿದಾರರ ಪರ (ಮಾಜಿ ಆಡಳಿತಾಧಿಕಾರಿ ಎಸ್.ಕೆ ಬಸವರಾಜನ್, ಸೌಭಾಗ್ಯ) ವಾದ ಮಂಡಿಸಲಿರುವ ವಕೀಲರು ವಾದ ಮಂಡನೆಗೆ ಕಾಲಾವಕಾಶ ನೀಡುವಂತೆ ಕೋರಿದ್ದರು. ಈ ಹಿನ್ನೆಲೆಯಲ್ಲಿ ಮುರುಘಾ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಲು ಸಂತ್ರಸ್ಥರಿಗೆ ಪ್ರೋತ್ಸಾಹ ನೀಡುವ ಮೂಲಕ ಷಡ್ಯಂತ್ರ ಮಾಡಿದ್ದಾರೆ ಎನ್ನಲಾದ ಎಫ್‌ಐಆರ್‌ ರದ್ದುಗೊಳಿಸುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ ಏಕಸದಸ್ಯ ಪೀಠವು ಫೆ.7ಕ್ಕೆ ವಿಚಾರಣೆ ಮುಂದೂಡಿಕೆ ಮಾಡಿದೆ.

Follow Us:
Download App:
  • android
  • ios