ಸಿಎಂ ಸಿದ್ದರಾಮಯ್ಯ ವಿರುದ್ದ ಕೊಲೆ ಆರೋಪ, ಶಾಸಕ ಹರೀಶ್ ಪೂಂಜಾ ವಿರುದ್ದ ಎಫ್ಐಆರ್!
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಕೊಲೆ ಆರೋಪ ಮಾಡಿದ ಹಿನ್ನೆಲೆಯಲ್ಲಿ ದಾಖಲಾದ ದೂರಿನ ಆಧಾರದಲ್ಲಿ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ದ ಎಫ್ಐಆರ್ ದಾಖಲಾಗಿದೆ
ವರದಿ: ಭರತ್ ರಾಜ್ ಏಷ್ಯಾನೆಟ್ ಸುವರ್ಣ ನ್ಯೂಸ್
ಮಂಗಳೂರು (ಮೇ.24): ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಕೊಲೆ ಆರೋಪ ಮಾಡಿದ ಹಿನ್ನೆಲೆಯಲ್ಲಿ ದಾಖಲಾದ ದೂರಿನ ಆಧಾರದಲ್ಲಿ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ದ ಎಫ್ಐಆರ್ ದಾಖಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಕಲಂ 153, 153A, 505 ipcಯಂತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರ ತನಿಖೆ ಆರಂಭಿಸಿದ್ದಾರೆ. ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನಮಿತಾ ಕೆ.ಪೂಜಾರಿ ದೂರಿನಡಿ ಎಫ್ಐಆರ್ ದಾಖಲಾಗಿದೆ. ಕೋಮು ಪ್ರಚೋದಕ ಹಾಗೂ ದ್ವೇಷ ಉಂಟಾಗುವ ಭಾಷಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬೆಳ್ತಂಗಡಿ ಕಿನ್ಯಮ್ಮ ಸಭಾಭವನದಲ್ಲಿ ಬಿಜೆಪಿಯ ಅಭಿನಂದನಾ ಕಾರ್ಯಕ್ರಮದಲ್ಲಿ ಹರೀಶ್ ಪೂಂಜಾ ಹೇಳಿಕೆ ನೀಡಿದ್ದು, ಸಿಎಂ ವಿರುದ್ಧ ಶಾಸಕ ಹರೀಶ್ ಪೂಂಜಾ ಕೊಲೆ ಆರೋಪ ಮಾಡಿದ್ದರು. 24 ಹಿಂದೂ ಕಾರ್ಯಕರ್ತರನ್ನ ಸಿದ್ದರಾಮಯ್ಯ ಹತ್ಯೆ ಮಾಡಿದ್ದಾರೆ ಎಂದಿದ್ದರು.
ತುಳುವಿನಲ್ಲಿ ಮಾಡಿದ ಭಾಷಣದ ವೇಳೆ ಪೂಂಜಾ ಯಡವಟ್ಟು ಮಾಡಿದ್ದರು. ಕಾಂಗ್ರೆಸ್ ಪರ ಪ್ರಚಾರ ನಡೆಸಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದ ಶಾಸಕ, ಹಿಂದೂ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದ ನಾಯಕರ ಬಗ್ಗೆ ಗರಂ ಆಗಿದ್ದರು. ಸತ್ಯಜಿತ್ ಸುರತ್ಕಲ್ ಎಂಬ ಹಿಂದೂ ನಾಯಕ ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಾರೆ. 24 ಹಿಂದೂ ಕಾರ್ಯಕರ್ತರನ್ನ ಹತ್ಯೆ ಮಾಡಿದ ಸಿದ್ದರಾಮಯ್ಯಗೆ ನೀವು ವೋಟ್ ಕೇಳಿದ್ದೀರ. ಬಜರಂಗದಳ ಬ್ಯಾನ್ ಮಾಡುತ್ತೇವೆ ಎಂದ ಕಾಂಗ್ರೆಸ್ ಪರ ವೋಟ್ ಕೇಳಿದ್ದೀರ. ನಿಮ್ಮದು ಯಾವ ರೀತಿಯ ಹಿಂದುತ್ವ ಎಂದು ಜನ ಕೇಳುತ್ತಿದ್ದಾರೆ ಎಂದು ಶಾಸಕ ಹರೀಶ್ ಪೂಂಜಾ ಹೇಳಿದ್ದರು.
ಸಿದ್ದರಾಮಯ್ಯ ಸಸ್ಯಹಾರ ರಹಸ್ಯ, ಮತ್ತೆ ಪಟ್ಟಕ್ಕೇರಲು ಕಾರಣವಾಯ್ತಾ ಧರ್ಮಸ್ಥಳದ
ಹೀಗಾಗಿ ಸಿದ್ದರಾಮಯ್ಯ ವಿರುದ್ದ ಕೊಲೆ ಆರೋಪ ಮಾಡಿದ ಹಿನ್ನೆಲೆಯಲ್ಲಿ ಹರೀಶ್ ಪೂಂಜಾ ವಿರುದ್ದ ಪುತ್ತೂರು, ಮಂಗಳೂರು ಹಾಗೂ ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ನಾಯಕರು ದೂರು ನೀಡಿದ್ದರು. ಇದೀಗ ಕೊನೆಗೆ ಬೆಳ್ತಂಗಡಿ ಠಾಣೆಯಲ್ಲಿ ದಾಖಲಾದ ದೂರಿನ ಆಧಾರದಲ್ಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಪೊಲೀಸ್ ಇಲಾಖೆಯನ್ನೇ ಕೇಸರಿಕರಣ ಮಾಡಲು ಹೊರಟಿದ್ದೀರಾ... ಅಧಿಕಾರಿಗಳ