ಯಾದಗಿರಿ(ಡಿ.27): ಬ್ಯಾನರ್ ಹಾಗೂ ಕಟೌಟ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಧ್ಯೆ ಜಗಳವಾದ ಘಟನೆ ಜಿಲ್ಲೆಯ ಸುರಪುರ ಪಟ್ಟಣದಲ್ಲಿ ಬುಧವಾರ ತಡರಾತ್ರಿ ನಡೆದಿದೆ. 

ಸುರಪುರ ಕ್ಷೇತ್ರದ ಬಿಜೆಪಿ ಶಾಸಕ ರಾಜುಗೌಡ ಅವರ ಹುಟ್ಟುಹಬ್ಬದ ನಿಮಿತ್ತ ಬಿಜೆಪಿ ಕಾರ್ಯಕರ್ತರು ಬ್ಯಾನರ್ ಹಾಗೂ ಕಟೌಟ್‌ಗಳನ್ನು ಕಟ್ಟಲು ನಗರಕ್ಕೆ ಆಗಮಿಸಿದ್ದರು. ಈ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ.

ಜಗಳ ತಾರಕಕ್ಕೇರಿದ್ದರಿಂದ ಒಬ್ಬರಿಗೊಬ್ಬರು ಕೈ ಕೈ ಮಿಲಾಯಿಸಿದ್ದಾರೆ ಎನ್ನಲಾಗಿದೆ. ಬಿಜೆಪಿ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಬ್ಯಾನರ್ ಕಟ್ಟಲು ತಂದಿದ್ದ ಟಾಟಾ ಏಸ್ ವಾಹನದ ಗ್ಲಾಸ್ ಧ್ವಂಸಗೊಳಿಸಲಾಗಿದೆ. ಈ ಮಧ್ಯೆ ಕಾಂಗ್ರೆಸ್ ಕಾರ್ಯಕರ್ತರು ಬರ್ತ್ ಡೇ ಬ್ಯಾನರ್ ಹರಿದು ಹಾಕಿದ್ದಾರೆ.