ಮೈಸೂರು(ಮಾ.09): ಪೀಪಲ್‌ ಫಾರ್‌ ಅನಿಮಲ್ಸ್‌ ಸಂಸ್ಥೆ ವತಿಯಿಂದ ಮೈಸೂರಿನ ಬೀದಿ ಪ್ರಾಣಿಗಳಿಗೆ ಸ್ಥಳದಲ್ಲಿ ತುರ್ತು ಚಿಕಿತ್ಸೆ ಒದಗಿಸುವ ಸಲುವಾಗಿ ಆ್ಯಂಬ್ಯುಲೆನ್ಸ್‌ ಸೇವೆಯನ್ನು ಆರಂಭಿಸಿದೆ.

ಈ ಸೇವೆಗೆ ಆರಿಸ್‌ ಗ್ಲೋಬಲ್‌ ಪ್ರೈ.ಲಿ. ಆ್ಯಂಬ್ಯುಲೆನ್ಸ್‌ ಕೊಡುಗೆ ನೀಡಿದ್ದಾರೆ. ಈ ಆ್ಯಂಬ್ಯುಲೆನ್ಸ್‌ ಸೇವೆಯು ನುರಿತ ಪಶುವೈದ್ಯರು ಮತ್ತು ತಂಡ, ತುರ್ತು ಚಿಕಿತ್ಸೆಗೆ ಅಗತ್ಯವಾದ ಜೀವ ರಕ್ಷಕ ಔಷಧಿಗಳು ಮತ್ತು ಉಪಕರಣಗಳನ್ನು ಒಳಗೊಂಡಿದೆ.

ಕೊರೋನ ಶಂಕಿತ ವ್ಯಕ್ತಿ ಆಸ್ಪತ್ರೆಯಿಂದ ಎಸ್ಕೇಪ್

ರೇಬಿಸ್‌ ನಿರೋಧಕ ಲಸಿಕೆ ಹಾಕಿಸುವ ಶಿಬಿರಗಳನ್ನು ಏರ್ಪಡಿಸಿದ ಸಂದರ್ಭಗಳಲ್ಲಿ ಸಾರ್ವಜನಿಕರಿಗೆ ಈ ಬಗ್ಗೆ ಮಾಹಿತಿ ನೀಡಲು ಮೈಕ್‌ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಸಾರ್ವಜನಿಕರು ಈ ವ್ಯವಸ್ಥೆಯನ್ನು ಸದುಪಯೋಗ ಪಡಿಸಿಕೊಳ್ಳಲು ಸಂಸ್ಥೆಯವರು ಕೋರಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂ. 0821- 2598213 ಸಂಪರ್ಕಿಸಬಹುದು.