ವಕ್ಫ್ ಬೋರ್ಡ್ ಹೆಸರಲ್ಲಿ ಅಕ್ರಮ ತಡೆಗೆ ತಿದ್ದುಪಡಿ ಮಸೂದೆ: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ

ವಕ್ಫ್ ಬೋರ್ಡ್ ಹೆಸರಲ್ಲಿ ಭಾರೀ ಅವ್ಯವಹಾರಗಳು ನಡೆದಿರುವ ಕಾರಣ ಕೇಂದ್ರ ಸರ್ಕಾರ ವಕ್ಫ್ ಬೋರ್ಡ್ ತಿದ್ದುಪಡಿ ಮಸೂದೆ ಜಾರಿಗೆ ಮುಂದಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಹೇಳಿದರು.

Amendment bill to prevent illegality in the name of Waqf Board Says Union Minister Pralhad Joshi gvd

ಕಲಘಟಗಿ (ಸೆ.16): ವಕ್ಫ್ ಬೋರ್ಡ್ ಹೆಸರಲ್ಲಿ ಭಾರೀ ಅವ್ಯವಹಾರಗಳು ನಡೆದಿರುವ ಕಾರಣ ಕೇಂದ್ರ ಸರ್ಕಾರ ವಕ್ಫ್ ಬೋರ್ಡ್ ತಿದ್ದುಪಡಿ ಮಸೂದೆ ಜಾರಿಗೆ ಮುಂದಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಹೇಳಿದರು. ವಕ್ಫ್ ಬೋರ್ಡ್ 1995ರ ಕಾಯ್ದೆ ತಿದ್ದುಪಡಿಯಿಂದ ಯಾವುದೇ ಸಮಾಜಕ್ಕೆ ನೋವುಂಟು ಮಾಡುವ ಉದ್ದೇಶವಿಲ್ಲ. ವಕ್ಫ್ ಬೋರ್ಡ್ ಹೆಸರಲ್ಲಿ ನಡೆಯುತ್ತಿರುವ ಅವ್ಯವಹಾರಗಳಿಗೆ ಕಡಿವಾಣ ಹಾಕುವ ಉದ್ದೇಶ ಕೇಂದ್ರ ಸರ್ಕಾರದ್ದಾಗಿದೆ. ಈ ಬಗ್ಗೆ ಜಾಗೃತಿ ಕೂಡ ಮೂಡಿಸಲಾಗುತ್ತಿದೆ ಎಂದು ಹೇಳಿದರು.

ರಾಜ್ಯ ಸೇರಿ ದೇಶದ ವಿವಿಧೆಡೆ ವಕ್ಫ್ ಬೋರ್ಡ್ ಹೆಸರಲ್ಲಿ ದೊಡ್ಡಮಟ್ಟದ ಅವವ್ಯಹಾರಗಳು ನಡೆದಿವೆ. ಬೆಂಗಳೂರಿನ ವಿಲ್ಸನ್ ಮ್ಯಾನರ್ ಹೋಟೆಲ್, ಧಾರವಾಡ ಜಿಲ್ಲೆಯ ಅಳ್ನಾವರ ಪಟ್ಟಣದಲ್ಲಿ ಆಸ್ತಿಯೊಂದನ್ನು ವಕ್ಫ್ ಬೋರ್ಡ್‌ಗೆ ಸೇರಿಸಲಾಗಿದೆ. ಯಾವುದೇ ಒಂದು ಆಸ್ತಿ ಅವ್ಯವಹಾರದ ಮೂಲಕ ದುರುಪಯೋಗಕ್ಕೆ ಬಲಿಯಾಗಬಾರದು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ವಕ್ಫ್ ಬೋರ್ಡ್ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದೆ ಎಂದು ಹೇಳಿದರು.

ಮುನಿರತ್ನರನ್ನು ಶಾಸಕ ಸ್ಥಾನದಿಂದ ಅಮಾನತು ಮಾಡುತ್ತೇವೆ ಎಂದು ಬಿಜೆಪಿ ಹೇಳಬೇಕಿತ್ತು: ಸಚಿವ ಎಚ್.ಕೆ.ಪಾಟೀಲ

ಮಂಡ್ಯ ಜಿಲ್ಲೆ ಪಾಕಿಸ್ತಾನದಲ್ಲಿ ಇದೆಯೇ?: ಗಣಪತಿ ಮೆರವಣಿಗೆ ಹೋಗುವ ರಸ್ತೆ ಬದಿಯಲ್ಲಿ ಮಸೀದಿ ಇದ್ದರೆ ವಾದ್ಯ ಬಾರಿಸಬಾರದು ಎಂದರೆ ಏನರ್ಥ? ಮಂಡ್ಯ ಜಿಲ್ಲೆ ಪಾಕಿಸ್ತಾನದಲ್ಲಿದೆಯೇ ಅಥವಾ ರಾಜ್ಯ ಸರ್ಕಾರವೇ ಪಾಕಿಸ್ತಾನ ಮಾಡಲು ಹೊರಟಿದೆಯೇ? ಕಾಂಗ್ರೆಸ್‌ ಎಂದಿಗೂ ಹಿಂದೂ ವಿರೋಧಿಯಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ನಾಗಮಂಗಲದಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆಗೆ ಹಾಗೂ ವಿಸರ್ಜನಾ ಮೆರವಣಿಗೆಗೆ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆಯಲಾಗಿದೆ. ಆದರೂ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಪೊಲೀಸರು ಹಿಂದೂ ಯುವಕನನ್ನು ಮೊದಲ ಆರೋಪಿಯಾಗಿ ಬಂಧಿಸಿರುವುದು ಖಂಡನೀಯ. ಪಕ್ಷದ ರಾಜ್ಯಾಧ್ಯಕ್ಷರು, ವಿರೋಧ ಪಕ್ಷದ ನಾಯಕರು ಸ್ಥಳಕ್ಕೆ ಭೇಟಿ ನೀಡಿ ಬಂದಿದ್ದಾರೆ. ರಾಜಕೀಯ ಒತ್ತಡಕ್ಕೆ ಒಳಗಾಗಿ ಅಲ್ಲಿಯ ಪೊಲೀಸ್‌ ವರಿಷ್ಠಾಧಿಕಾರಿ ಹುಚ್ಚರಂತೆ ವರ್ತಿಸಬಾರದು. ಇದನ್ನು ನಾವು ಗಂಭೀರವಾಗಿ ತೆಗೆದುಕೊಂಡಿದ್ದು, ಮುಂದಿನ ದಿನಗಳಲ್ಲಿ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಪಿಲಿಕುಳದಲ್ಲಿ ಎಲ್ಲರ ಸಹಭಾಗಿತ್ವದಲ್ಲಿ ಕಂಬಳ, ತುಳುನಾಡ ಉತ್ಸವ: ಸ್ಪೀಕರ್ ಯು.ಟಿ.ಖಾದರ್

ಖರ್ಗೆ ಹೆಸರಿಗೆ ಮಾತ್ರ ಅಧ್ಯಕ್ಷ: ಮಲ್ಲಿಕಾರ್ಜುನ ಖರ್ಗೆ ಅವರು ಹೆಸರಿಗೆ ಮಾತ್ರ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷರಾಗಿದ್ದು, ರಾಹುಲ್‌ ಗಾಂಧಿ ಅವರ ಅಣತಿಯಂತೆ ನಡೆದುಕೊಳ್ಳುತ್ತಾರೆ. ಮುಂದಿನ ದಿನಗಳಲ್ಲಿ ದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಹುಲ್ ಗಾಂಧಿ ಬದಲಿಗೆ ಖರ್ಗೆ ಅವರನ್ನೇ ಪ್ರಧಾನಿಯನ್ನಾಗಿ ಮಾಡುತ್ತೇವೆಂದು ಕೈ ವರಿಷ್ಠರು ಘೋಷಿಸಲಿ ಎಂದು ಜೋಶಿ ಸವಾಲು ಹಾಕಿದರು.

Latest Videos
Follow Us:
Download App:
  • android
  • ios