ಕರ್ನಾಟಕದ 75 ಸ್ಥಳಗಳಲ್ಲಿ ‘ಅಮೃತ ಭಾರತಿಗೆ ಕನ್ನಡದಾರತಿ’

*  ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ 75 ಸ್ಥಳದಲ್ಲಿ ಕಾರ್ಯಕ್ರಮ
*  ರಾಜ್ಯದಲ್ಲಿ ಎಲ್ಲರ ಮನೆ ಮನೆಯಲ್ಲೂ ರಾಷ್ಟ್ರಧ್ವಜ ಹಾರಿಸುವ ಕಾರ್ಯಕ್ರಮ ಆಯೋಜನೆ
*  ಪ್ರತಿ ಜಿಲ್ಲೆಗೆ 1.80 ಲಕ್ಷ ಅನುದಾನ 

Amrita Bharathi Campaign Will Be Launch in Karnataka grg

ಬೆಂಗಳೂರು(ಮೇ.25):  ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಮೇ 28 ರಿಂದ ರಾಜ್ಯದ 75 ಸ್ಥಳಗಳಲ್ಲಿ ಏಕಕಾಲಕ್ಕೆ ‘ಅಮೃತ ಭಾರತಿಗೆ ಕನ್ನಡದಾರತಿ’ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನೀಲ್‌ ಕುಮಾರ್‌ ತಿಳಿಸಿದರು.

ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಇಲಾಖೆಯಿಂದ ಹೊರತಂದಿರುವ ಭಿತ್ತಿಪತ್ರ, ಕಿರುಚಿತ್ರ, ಲಾಂಛನ ಮತ್ತು ಅಭಿಯಾನದ ಗೀತೆಗಳನ್ನು ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

Davos 2022: ಕರ್ನಾಟಕದಲ್ಲಿ 50,000 ಕೋಟಿ ಹೂಡಿಕೆಗೆ ಸಿಎಂ ಒಪ್ಪಂದ

ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾಗಿರುವ ಹಿನ್ನೆಲೆಯಲ್ಲಿ ಅಮೃತ ಮಹೋತ್ಸವ ಆಚರಿಸಲಾಗುತ್ತಿದ್ದು ಮೇ 28 ಕ್ಕೆ ಸ್ವಾತಂತ್ರ್ಯ ಉದ್ಯಾನವನದಲ್ಲಿ ಅಮೃತ ಭಾರತಿಗೆ ಕನ್ನಡದಾರತಿ ಅಭಿಯಾನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಲಿದ್ದಾರೆ. ಒಟ್ಟಾರೆ ರಾಜ್ಯದ 75 ಸ್ಥಳಗಳಲ್ಲಿ ಅಭಿಯಾನ ನಡೆಯಲಿದ್ದು ಈ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು.

ಪ್ರತಿ ಜಿಲ್ಲೆಗೆ 1.80 ಲಕ್ಷ ಅನುದಾನ:

ಅಭಿಯಾನದ ವೆಚ್ಚ ಭರಿಸಲು ಪ್ರತಿ ಜಿಲ್ಲೆಗೆ 1.80 ಲಕ್ಷ ರು. ಅನುದಾನ ನೀಡಲಾಗಿದ್ದು ಜಿಲ್ಲಾಧಿಕಾರಿಗಳು ಮತ್ತು ಇಲಾಖೆಯ ಸಹಾಯಕ ನಿರ್ದೇಶಕರಿಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ. ಮೊದಲ ಹಂತದಲ್ಲಿ ಮೇ 28 ರಂದು 45 ಸ್ಥಳಗಳಲ್ಲಿ ಅಭಿಯಾನ ನಡೆಯಲಿದ್ದು ಜೂ.25 ಕ್ಕೆ ಉಳಿದ ಸ್ಥಳಗಳಲ್ಲಿ ನಡೆಯಲಿದೆ. ಇದಕ್ಕಾಗಿ ರಾಜ್ಯದ 75 ಸ್ಥಳಗಳನ್ನು ಗುರುತಿಸಲಾಗಿದ್ದು ದೇಶಭಕ್ತಿಯನ್ನು ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮ, ಸಭಾ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ವಿವರಿಸಿದರು.

ಜು.1 ರಿಂದ 15 ರವರೆಗೆ ‘ಹೋರಾಟದ ನೆಲದಲ್ಲಿ ಒಂದು ದಿನ’ ಎಂಬ ಪ್ರೇರಣಾದಾಯಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಸ್ವಾತಂತ್ರ್ಯ ಹೋರಾಟ ನಡೆದ ನಾಡಿನ ಪ್ರಮುಖ 15 ಸ್ಥಳಗಳಲ್ಲಿ ನಾಟಕ, ಮೆರವಣಿಗೆ. ಸ್ಥಬ್ಧಚಿತ್ರ ಮತ್ತು ಸಾಕ್ಷ್ಯಚಿತ್ರಗಳ ಮೆರವಣಿಗೆ ಮಾಡಲಾಗುವುದು. ಆ.1 ರಿಂದ 8 ರವರೆಗೆ ರಾಜ್ಯದ ನಾಲ್ಕು ಕಂದಾಯ ಜಿಲ್ಲೆಗಳಲ್ಲಿ ಅಮೃತ ಭಾರತಿಗೆ ಕನ್ನಡದಾರತಿ ರಥಯಾತ್ರೆ ನಡೆಸಲಾಗುವುದು. 31 ಜಿಲ್ಲೆಗಳಲ್ಲೂ ಸಂಚರಿಸುವ ರಥಯಾತ್ರೆ ಬೆಂಗಳೂರಿಗೆ ತಲುಪಲಿದೆ ಎಂದು ವಿವರಿಸಿದರು.

ಆ.9 ರಂದು ಜಿಲ್ಲೆಗಳಿಂದ ಹೊರಟ ರಥಯಾತ್ರೆ ನಗರವನ್ನು ತಲುಪಲಿದ್ದು ಆ.9 ರಿಂ 11 ರವರೆಗೆ ನಗರದಲ್ಲಿ ಮಹೋತ್ಸವದ ಸಮಾರೋಪ ಸಮಾರಂಭ ನಡೆಯಲಿದೆ. ರಾಜಧಾನಿಯಲ್ಲಿ ಭಾರೀ ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗುವುದು. ಇದಕ್ಕಾಗಿ ಹಲವು ಸಮಿತಿಗಳನ್ನೂ ರಚಿಸಲಾಗಿದೆ ಎಂದು ಹೇಳಿದರು.

ಜಿಪಂ, ತಾಪಂ ಚುನಾವಣೆಗೆ ಹೈಕೋರ್ಟ್‌ 3 ತಿಂಗಳ ಗಡುವು

ಪತ್ರಿಕಾಗೋಷ್ಠಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಪ್ರಕಾಶ್‌ ಜಿ.ಟಿ.ನಿಟ್ಟಾಳಿ, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷೆ ಮಂಜಮ್ಮ ಜೋಗತಿ ಮತ್ತಿತರರು ಹಾಜರಿದ್ದರು.

ಮನೆ ಮೇಲೆ ರಾಷ್ಟ್ರಧ್ವಜ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಆ.9 ರಂದು ರಾಜ್ಯದಲ್ಲಿ ಎಲ್ಲರ ಮನೆ ಮನೆಯಲ್ಲೂ ರಾಷ್ಟ್ರಧ್ವಜ ಹಾರಿಸುವ ಕಾರ್ಯಕ್ರಮ ಆಯೋಜಿಸಲಾಗುವುದು. ಇದಕ್ಕೆ ಸಾಕಷ್ಟುಪೂರ್ವ ತಯಾರಿ ಮಾಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನೀಲ್‌ ಕುಮಾರ್‌ ಸ್ಪಷ್ಪಪಡಿಸಿದರು.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿರುವ ‘ಅಮೃತ ಭಾರತಿಗೆ ಕನ್ನಡದಾರತಿ’ ಅಭಿಯಾನದ ಭಿತ್ತಿಚಿತ್ರಗಳನ್ನು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನೀಲ್‌ ಕುಮಾರ್‌ ಬಿಡುಗಡೆಗೊಳಿಸಿದರು. ಇಲಾಖೆ ನಿರ್ದೇಶಕ ಪ್ರಕಾಶ್‌ ಜಿ.ಟಿ.ನಿಟ್ಟಾಳಿ, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷೆ ಮಂಜಮ್ಮ ಜೋಗತಿ ಮತ್ತಿತರರು ಹಾಜರಿದ್ದರು.
 

Latest Videos
Follow Us:
Download App:
  • android
  • ios