ಬೆಂಗಳೂರು-ಮೈಸೂರು ಎಕ್ಸಪ್ರೆಸ್‌ವೇನಲ್ಲಿ ಭೀಕರ ಅಪಘಾತ: ಆಂಧ್ರ ಮೂಲದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ದುರ್ಮರಣ

ಡಿಕ್ಕಿ ಹೊಡೆದ‌ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಓವರ್ ಟೇಕ್ ಮಾಡಲು ಹೋಗಿ ಲಾರಿಗೆ ಕಾರು ಗುದ್ದಿದೆ. ಫಾರ್ಚೂನರ್ ಕಾರು ಮೈಸೂರಿನಿಂದ ಬೆಂಗಳೂರಿಗೆ ಹೋಗುತ್ತಿತ್ತು ಎಂದು ತಿಳಿದು ಬಂದಿದೆ. 

Andhra Pradesh Origin Two Engineering Students Killed in Bengaluru Mysuru Expressway at Ramanagara grg

ರಾಮನಗರ(ಜೂ.15):  ಫಾರ್ಚೂನರ್ ಕಾರು ಹಿಂಬದಿಯಿಂದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ವಿಧ್ಯಾರ್ಥಿಗಳು ಸಾವನ್ನಪ್ಪಿ, ಕಾರು ಚಾಲಕನಿಗೆ ಗಂಭೀರವಾದ ಗಾಯಗಳಾದ ಘಟನೆ ನಗರದ ಕಪನಯ್ಯನದೊಡ್ಡಿ ಗ್ರಾಮದ ಬಳಿ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಇಂದು(ಶನಿವಾರ) ನಡೆದಿದೆ. ವಿಶ್ವ (21), ಸೂರ್ಯ (21), ಮೃತ ವಿದ್ಯಾರ್ಥಿಗಳು. 

ತಡರಾತ್ರಿ 12 ಗಂಟೆ ಸುಮಾರಿಗೆ ಅಪಘಾತ ನಡೆದಿದೆ.  ಡಿಕ್ಕಿ ಹೊಡೆದ‌ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಓವರ್ ಟೇಕ್ ಮಾಡಲು ಹೋಗಿ ಲಾರಿಗೆ ಕಾರು ಗುದ್ದಿದೆ. ಫಾರ್ಚೂನರ್ ಕಾರು ಮೈಸೂರಿನಿಂದ ಬೆಂಗಳೂರಿಗೆ ಹೋಗುತ್ತಿತ್ತು ಎಂದು ತಿಳಿದು ಬಂದಿದೆ. 

ಪಲ್ಸರ್ ಬೈಕ್‌ಗೆ BMW ಕಾರು ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಮೃತ ವಿದ್ಯಾರ್ಥಿಗಳು ಆಂಧ್ರಪ್ರದೇಶ ಮೂಲದವರಾಗಿದ್ದು, ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ವ್ಯಾಸಾಂಗ ಮಾಡ್ತಿದ್ರು. ಗಂಭೀರವಾಗಿ ಗಾಯಗೊಂಡಿರೋ‌ ಚಾಲಕ ಸುಹಾಸ್ ಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ರಾಮನಗರ ಸಂಚಾರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Latest Videos
Follow Us:
Download App:
  • android
  • ios