ಬೆಂಗಳೂರು, [ಮೇ.12]: ಆನೇಕಲ್ ಪುರಸಭೆ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಅವರು ಆಪರೇಷನ್ ಹಸ್ತ ಮಾಡಿದ್ದಾರೆ.

ಆನೇಕಲ್ ಪುರಸಭೆ ಸದಸ್ಯ, ಜೆಡಿಎಸ್ ಮುಖಂಡ ಪದ್ಮನಾಭ್  ಹಾಗೂ ಆನೇಕಲ್ ಬಿಜೆಪಿ ಘಟಕದ ಉಪಾಧ್ಯಕ್ಷ ಶಿವರಾಂ ಅವರನ್ನು ಆಪರೇಷನ್ ಹಸ್ತದ ಮೂಲಕ ಕಾಂಗ್ರೆಸ್ ಗೆ ಸೇರಿಸಿಕೊಂಡರು. 

ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಡಿ.ಕೆ. ಸುರೇಶ್, ಬಾಯಿಚಪಲಕ್ಕೆ ಮಾತನಾಡುವುದೆಲ್ಲ ನಿಜವಾಗುವುದಿಲ್ಲ. 20 ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂದು ಬಿ.ಎಸ್.ಯಡಿಯೂರಪ್ಪನರು ಹೇಳುತ್ತಾರೆ. ಆದರೆ ನಮ್ಮ ಬಳಿ ಬಿಜೆಪಿಯ 40 ಶಾಸಕರು ಸಂಪರ್ಕದಲ್ಲಿದ್ದಾರೆ ಎಂದು ತಿರುಗೇಟು ನೀಡಿದರು.

ಲೋಕಸಭಾ ಚುನಾವಣೆ ಫಲಿತಾಂಶ ಮೇ 23ರಂದು ಹೊರಬೀಳಲಿದೆ. ಫಲಿತಾಂಶದ ನಂತರ ರಾಜ್ಯ ಬಿಜೆಪಿಯಲ್ಲಿ ಬದಲಾವಣೆ ಆಗಲಿದೆಯೇ ಹೊರತು ಮೈತ್ರಿ ಸರ್ಕಾರದಲ್ಲಿ ಆಗುವುದಿಲ್ಲ ಎಂದು ಹೇಳಿದರು.