Asianet Suvarna News Asianet Suvarna News

ಬೆಂಗ್ಳೂರಲ್ಲಿ ಮತ್ತೆ ಅಂಗನವಾಡಿ ಕಾರ್ಯಕರ್ತೆಯರ ಮುಷ್ಕರ: ಮೈ ಕೊರೆಯುವ ಚಳಿಯಲ್ಲಿ ಅಹೋರಾತ್ರಿ ಧರಣಿ

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣಕ್ಕೆ ಸೋಮವಾರ ಬೆಳಿಗ್ಗೆಯೇ ರಾಜ್ಯದ ಹಲವೆಡೆಯಿಂದ ಅಸಂಖ್ಯ ಸಂಖ್ಯೆಯಲ್ಲಿ ರೈಲುಗಳಲ್ಲಿ ಆಗಮಿಸಿದ ಕಾರ್ಯಕರ್ತೆಯರು, ಅಲ್ಲಿಂದ ಫ್ರೀಡಂ ಪಾರ್ಕ್‌ಗೆ ಆಗಮಿಸಿ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ್ದಾರೆ. ಎಲ್ಲ ಬೇಡಿಕೆಗಳನ್ನು ಈಡೇರಿಸುವವರೆಗೂ ಪ್ರತಿಭಟನೆ ವಾಪಸ್‌ ಪಡೆಯುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

Anganwadi Workers Held Protest in Bengaluru grg
Author
First Published Jan 24, 2023, 9:43 AM IST

ಬೆಂಗಳೂರು(ಜ.24): ರಾಜ್ಯದ ವಿವಿಧ ಜಿಲ್ಲೆಗಳಿಂದ ನಗರಕ್ಕೆ ಆಗಮಿಸಿರುವ ಸಾವಿರಾರು ಅಂಗನವಾಡಿ ಕಾರ್ಯಕರ್ತೆಯರು ಫ್ರೀಡಂ ಪಾರ್ಕ್‌ನಲ್ಲಿ ಸೋಮವಾರದಿಂದ ಬೃಹತ್‌ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಿದ್ದು, ಬೇಡಿಕೆಗಳನ್ನು ಈಡೇರಿಸುವವರೆಗೂ ಪ್ರತಿಭಟನೆ ವಾಪಸ್‌ ಪಡೆಯುವುದಿಲ್ಲ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ರಾತ್ರಿಯಿಡೀ ಮೈ ಕೊರೆಯುವ ಚಳಿಯಲ್ಲಿ ಪ್ರೀಡಂ ಪಾರ್ಕ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮಲಗಿದ್ದಾರೆ.  ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣಕ್ಕೆ ಸೋಮವಾರ ಬೆಳಿಗ್ಗೆಯೇ ರಾಜ್ಯದ ಹಲವೆಡೆಯಿಂದ ಅಸಂಖ್ಯ ಸಂಖ್ಯೆಯಲ್ಲಿ ರೈಲುಗಳಲ್ಲಿ ಆಗಮಿಸಿದ ಕಾರ್ಯಕರ್ತೆಯರು, ಅಲ್ಲಿಂದ ಫ್ರೀಡಂ ಪಾರ್ಕ್‌ಗೆ ಆಗಮಿಸಿ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ್ದಾರೆ. ಎಲ್ಲ ಬೇಡಿಕೆಗಳನ್ನು ಈಡೇರಿಸುವವರೆಗೂ ಪ್ರತಿಭಟನೆ ವಾಪಸ್‌ ಪಡೆಯುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ ಕಾರ್ಯಕರ್ತೆಯರು ಫ್ರೀಡಂ ಪಾರ್ಕ್ನಲ್ಲಿ ಜಮಾವಣೆಗೊಂಡಿದ್ದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್‌ ಬಂದೋಬಸ್‌್ತ ಏರ್ಪಡಿಸಲಾಗಿತ್ತು. ಕಾರ್ಯಕರ್ತೆಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರಿಂದ ಉನ್ನತ ಶಿಕ್ಷಣ ಪರಿಷತ್‌ ಮುಂಭಾಗದ ರಸ್ತೆಯನ್ನು ವಾಹನ ಸಂಚಾರಕ್ಕೆ ಬಂದ್‌ ಮಾಡಲಾಗಿತ್ತು. ಇದರಿಂದಾಗಿ ಶೇಷಾದ್ರಿ ರಸ್ತೆ, ಮೆಜೆಸ್ಟಿಕ್‌ ಸುತ್ತಮುತ್ತ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಸಂಚಾರ ಪೊಲೀಸರು ಹರಸಾಹ ಸಪಟ್ಟರು.

ಬೆಂಗಳೂರು: ಅಂಗನವಾಡಿ ನೌಕರರಿಂದ ಅನಿರ್ದಿಷ್ಟಾವಧಿ ಧರಣಿ

ಸಂಪುಟ ನಿರ್ಣಯದವರೆಗೂ ಹೋರಾಟ:

ಪ್ರತಿಭಟನೆಯ ನೇತೃತ್ವ ವಹಿಸಿರುವ ಸಿಐಟಿಯು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ರಾಜ್ಯಾಧ್ಯಕ್ಷೆ ಎಸ್‌.ವರಲಕ್ಷ್ಮೇ ‘ಕನ್ನಡಪ್ರಭ’ದೊಂದಿಗೆ ಮಾತನಾಡಿ, ಸುಪ್ರೀಂ ಕೋರ್ಚ್‌ ತೀರ್ಪಿನಂತೆ ಅಂಗನವಾಡಿ ನೌಕರರು ಗ್ರಾಚ್ಯುಟಿಗೆ ಅರ್ಹರಾಗಿದ್ದಾರೆ. ಆದರೆ ಕೆಲವೆಡೆ ಅಧಿಕಾರಿಗಳು ಅರ್ಜಿ ಸ್ವೀಕರಿಸಲು ನಿರಾಕರಿಸುತ್ತಿದ್ದಾರೆ. ಹಲವು ನೌಕರರಿಗೆ ನೇಮಕಾತಿ ಮತ್ತು ನಿವೃತ್ತಿಯ ಆದೇಶವನ್ನೇ ನೀಡಿಲ್ಲ. ಗ್ರಾಚ್ಯುಟಿ ನೀಡಬೇಕೆಂದರೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನವಾಗಬೇಕು. ಅಲ್ಲಿಯವರೆಗೂ ನಾವು ಹೋರಾಟ ಹಿಂಪಡೆಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಐಸಿಡಿಎಸ್‌ ಮಾರ್ಗದರ್ಶಿ ಸೂಚಿಗಳ ಪ್ರಕಾರ, ಪೂರಕ ಪೌಷ್ಟಿಕ ಆಹಾರ, ರೋಗ ನಿರೋಧಕ ಚುಚ್ಚುಮದ್ದು, ಆರೋಗ್ಯ ತಪಾಸಣೆ, ಮಾಹಿತಿ ಸೇವೆ, ಶಾಲಾ ಪೂರ್ವ ಶಿಕ್ಷಣ, ಮಹಿಳೆಯರಿಗೆ ಪೌಷ್ಟಿಕತೆ ಮತ್ತು ಆರೋಗ್ಯ ಶಿಕ್ಷಣವನ್ನಷ್ಟೇ ಅಂಗನವಾಡಿ ಕಾರ್ಯಕರ್ತೆಯರು ನೀಡಬೇಕು. ಆದರೆ ಸರ್ವೇ, ಸ್ತ್ರೀ ಶಕ್ತಿ, ಭಾಗ್ಯಲಕ್ಷ್ಮೇ, ಮಾತೃವಂದನಾ ಮತ್ತಿತರ ಕಾರ್ಯಗಳಿಗೆ ಕಾರ್ಯಕರ್ತೆಯರನ್ನು ಬಳಸಿಕೊಳ್ಳುತ್ತಿದ್ದು ಇದನ್ನು ತಪ್ಪಿಸಬೇಕು. ಅಂಗನವಾಡಿ ಕಾರ್ಯಕರ್ತೆಯರನ್ನು ಶಿಕ್ಷಕಿ ಎಂದು ಕರೆಯಬೇಕು ಎಂದು ಆಗ್ರಹಿಸಿದರು.

ಹೊಸ ಆದೇಶದಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ಅನ್ಯಾಯ

ಬೆಳಿಗ್ಗೆ 10 ರಿಂದ ಮಧ್ಯಾಹ್ನ 1ರವರೆಗೂ ಶಿಕ್ಷಣ ನೀಡಲು ಸಮಯ ನಿಗದಿ ಮಾಡಿ ಈ ಸಮಯದಲ್ಲಿ ಸಾರ್ವಜನಿಕರ ಭೇಟಿಗೆ ಅವಕಾಶ ನೀಡಬಾರದು. ಸಮಯಕ್ಕೆ ಸರಿಯಾಗಿ ವೇತನ ನೀಡಬೇಕು ಎಂಬುದು ಸೇರಿ ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. 2017-18 ರಲ್ಲಿ ನಡೆಸಿದ್ದಂತಹ ತೀವ್ರ ಹೋರಾಟಕ್ಕೂ ನಾವು ಸಜ್ಜಾಗಿದ್ದೇವೆ ಎಂದು ತಿಳಿಸಿದರು.

ಶನಿವಾರವಷ್ಟೇ ಪ್ರತಿಭಟನೆ ಹಿಂಪಡೆದಿದ್ದ ಇನ್ನೊಂದು ಅಂಗನವಾಡಿ ಸಂಘಟನೆ

ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಇದೇ ಫ್ರೀಡಂ ಪಾರ್ಕ್ನಲ್ಲಿ ಪ್ರೇಮ ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘವು ನಡೆಸುತ್ತಿದ್ದ ಅನಿರ್ಧಿಷ್ಟಾವಧಿ ಧರಣಿಯನ್ನು ಸರ್ಕಾರದ ಭರವಸೆಯ ಹಿನ್ನೆಲೆಯಲ್ಲಿ ನಾಲ್ಕನೇ ದಿನವಾದ ಶನಿವಾರವಷ್ಟೇ ವಾಪಸ್‌ ಪಡೆದಿತ್ತು. ಇದೀಗ ಅಂಗನವಾಡಿ ಕಾರ್ಯಕರ್ತೆಯರ ಮತ್ತೊಂದು ಸಂಘಟನೆಯು ಧರಣಿ ಆರಂಭಿಸಿದೆ. ಐದಾರು ಸಂಘಟನೆಗಳಿರುವುದರಿಂದ ಈ ರೀತಿ ಸರಣಿ ಧರಣಿ ನಡೆಯಲು ಕಾರಣವಾಗಿದೆ ಎಂದು ತಿಳಿದುಬಂದಿದೆ.

Follow Us:
Download App:
  • android
  • ios