ದಾವಣಗೆರೆ [ಜ.20] : ಪ್ರಿಯತಮನ ಮೇಲೆ ಯುವತೊಯೋರ್ವಳು ಸೀಮೆ ಎಣ್ಣೆ ಎರಚಿ ಬೆಂಕಿ ಇಟ್ಟ ಘಟನೆ ದಾವಣಗೆರೆಯಲ್ಲಿ ನಡೆದಿದೆ. 

ದಾವಣಗೆರೆ ಜಿಲ್ಲೆ ಹರಪನಹಳ್ಳಿ ತಾಲೂಕಿನ ವಡ್ಡನಹಳ್ಳಿಯಲ್ಲಿ ಘಟನೆ ನಡೆದಿದೆ. 

ಯುವತಿ ಹಾಗೂ ಯುವಕ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಯುವತಿಗೆ ಬೇರೊಬ್ಬ ಯುವಕನ ಜೊತೆ ನಿಶ್ಚಿತಾರ್ಥವಾಗಿತ್ತು. ಇದರಿಂದ ಕೋಪಗೊಂಡ ಯುವಕ ಯುವತಿಯೊಂದಿಗೆ ಜಗಳವಾಡಿದ್ದ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಜಗಳದಲ್ಲಿ ಮಾತಿಗೆ ಮಾತು ಬೆಳೆದು ಕೋಪಗೊಂಡ ಯುವತಿ ಪ್ರಿಯತಮನ ಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾಳೆ. 

ಇದರಿಂದ ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನಿಡಲಾಗಿದೆ. 

ಅರಸೀಕೆರೆ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ.