ಮಂಗಳೂರು(ಆ.08): ದ.ಕ. ಜಿಲ್ಲೆಯಲ್ಲಿ ನಡೆಯಲಿರುವ ಬಕ್ರೀದ್‌ ಹಾಗೂ ಇತರ ಹಬ್ಬ ಹರಿದಿನಗಳಲ್ಲಿ ಪೂಜಾ ಸ್ಥಳ, ಮಂದಿರಗಳಲ್ಲಿ ಸಾಮೂಹಿಕ ಪ್ರಾಣಿ ಹತ್ಯೆಯನ್ನು ಕರ್ನಾಟಕ ಪ್ರಾಣಿ ಬಲಿ ಪ್ರತಿಬಂಧಕ ಅಧಿನಿಯಮದಂತೆ ನಿಷೇಧಿಸಲಾಗಿದೆ ಹಾಗೂ ಪ್ರಾಣಿಗಳನ್ನು ಬಲಿ ಕೊಡುವುದು ಶಿಕ್ಷಾರ್ಹ ಅಪರಾಧವಾಗಿದೆ.

ಕರ್ನಾಟಕದಲ್ಲಿ ಚಾಲ್ತಿಯಲ್ಲಿರುವ ಕರ್ನಾಟಕ ಗೋವಧೆ ಪ್ರತಿಬಂಧಕ ಕಾಯ್ದೆ ಹಾಗೂ ಜಾನುವಾರು ಪರಿರಕ್ಷಣಾ ಅಧಿನಿಯಮ 64ರ ಸೆಕ್ಷನ್‌-4ರ ಪ್ರಕಾರ ಗೋವು ಅಥವಾ ಎಮ್ಮೆಯ ಕರುವಿನ ವಧೆಯನ್ನು ನಿಷೇಧಿಸಲಾಗಿದೆ.

ಈ ಎಲ್ಲ ಆದೇಶಗಳು ಮತ್ತು ನಿರ್ದೇಶನಗಳ ಹಿನ್ನೆಲೆಯಲ್ಲಿ ದ.ಕ ಜಿಲ್ಲೆಯಲ್ಲಿ ಹಬ್ಬ ಹರಿದಿನಗಳ ಸಂದರ್ಭದಲ್ಲಿ ಯಾವುದೇ ರೀತಿಯ ಪ್ರಾಣಿ, ಪಕ್ಷಿಗಳನ್ನು ಸಾರ್ವಜನಿಕವಾಗಿ ಪೂಜಾ ಸ್ಥಳಗಳಲ್ಲಿ, ಮಂದಿರಗಳಲ್ಲಿ ಬಲಿ ಕೊಡಬಾರದು ಮತ್ತು ಅದನ್ನು ಬೆಂಬಲಿಸಬಾರದಾಗಿ ಎಲ್ಲ ಪ್ರಾರ್ಥನಾ ಮಂದಿರಗಳ ಕಾರ್ಯ ನಿರ್ವಾಹಕರು, ಸಂಚಾಲಕರು ಹಾಗೂ ಸಾರ್ವಜನಿಕರಿಗೆ ಸೂಚಿಸಲಾಗಿದೆ.

ಶಿವಮೊಗ್ಗ: ಮಳೆಯಬ್ಬರಕ್ಕೆ 20ಕ್ಕೂ ಹೆಚ್ಚು ಕಟ್ಟಡಳಿಗೆ ಹಾನಿ

ಒಂದು ವೇಳೆ ಕಾನೂನು ಉಲ್ಲಂಘಿಸಿ ಪ್ರಾಣಿ ಬಲಿ ಅಥವಾ ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ ಮಾಡಿದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪಶುಪಾಲನಾ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.