Asianet Suvarna News Asianet Suvarna News

ಕೊಬ್ಬರಿಗೆ 20ಸಾವಿರ ಬೆಂಬಲ ಬೆಲೆ ಘೋಷಿಸಿ : ಸರ್ಕಾರಕ್ಕೆ ಎಚ್ಚರಿಕೆ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಹಿತವನ್ನು ಕಡೆಗಣಿಸಿರುವ ಹಿನ್ನೆಲೆಯಲ್ಲಿ ಈ ಕೂಡಲೇ ಕೊಬ್ಬರಿಗೆ 20 ಸಾವಿರ ರು. ಬೆಂಬಲ ಬೆಲೆ ಘೋಷಿಸಬೇಕು. ಇಲ್ಲದಿದ್ದರೆ ರೈತ ವಿರೋಧಿ ಸರ್ಕಾರದ ವಿರುದ್ಧ ಅನಿರ್ದಿಷ್ಠಾವಧಿ ಧರಣಿ ನಡೆಸುವುದಾಗಿ ಜಿಲ್ಲಾ ಕಾಂಗ್ರೆಸ್‌ ಪ್ರಚಾರ ಸಮಿತಿ ಅಧ್ಯಕ್ಷ ರಾಯಸಂದ್ರ ರವಿಕುಮಾರ್‌ ಎಚ್ಚರಿಕೆ ನೀಡಿದರು.

Announce support price of 20 thousand for fat: warning to the government snr
Author
First Published Mar 12, 2023, 5:15 AM IST | Last Updated Mar 12, 2023, 5:15 AM IST

  ತುಮಕೂರು :  ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಹಿತವನ್ನು ಕಡೆಗಣಿಸಿರುವ ಹಿನ್ನೆಲೆಯಲ್ಲಿ ಈ ಕೂಡಲೇ ಕೊಬ್ಬರಿಗೆ 20 ಸಾವಿರ ರು. ಬೆಂಬಲ ಬೆಲೆ ಘೋಷಿಸಬೇಕು. ಇಲ್ಲದಿದ್ದರೆ ರೈತ ವಿರೋಧಿ ಸರ್ಕಾರದ ವಿರುದ್ಧ ಅನಿರ್ದಿಷ್ಠಾವಧಿ ಧರಣಿ ನಡೆಸುವುದಾಗಿ ಜಿಲ್ಲಾ ಕಾಂಗ್ರೆಸ್‌ ಪ್ರಚಾರ ಸಮಿತಿ ಅಧ್ಯಕ್ಷ ರಾಯಸಂದ್ರ ರವಿಕುಮಾರ್‌ ಎಚ್ಚರಿಕೆ ನೀಡಿದರು.

ಕೊಬ್ಬರಿ ಬೆಲೆ ನೆಲ ಕಚ್ಚಿದೆ. ಡಬಲ್‌ ಎಂಜಿನ್‌ ಸರ್ಕಾರಗಳು ಮೌನ ವಹಿಸಿವೆ. ನಮ್ಮನ್ನು ಆಳುತ್ತಿರುವ ಸರ್ಕಾರಗಳು ರೈತರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿವೆ. ಕೇಂದ್ರದ ಬೆಲೆ ಏರಿಕೆ ನೀತಿಯಿಂದಾಗಿ ರೈತರ ಖರ್ಚು ವೆಚ್ಚ ಜಾಸ್ತಿಯಾಗಿದ್ದರೂ ಸಹ ಈ ಬಗ್ಗೆ ಡಬಲ್‌ ಎಂಜಿನ್‌ ಸರ್ಕಾರಗಳು ಗಮನ ಹರಿಸುತ್ತಿಲ್ಲ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಶನಿವಶಾರ ಆಕ್ರೋಶ ವ್ಯಕ್ತಪಡಿಸಿದರು.

ರೈತರ ಪಂಪ್‌ಸೆಟ್‌ಗೆ ಪ್ರತಿನಿತ್ಯ ಕನಿಷ್ಠ 8 ರಿಂದ 9 ಗಂಟೆಯಾದರೂ ತ್ರಿಫೇಸ್‌ ವಿದ್ಯುತ್‌ ಪೂರೈಸಬೇಕು. ಆದರೆ 3 ಗಂಟೆ ವಿದ್ಯುತ್‌ ಸರಬರಾಜು ಮಾಡದೆ ರೈತರ ಬದುಕಿನ ಜತೆ ಚೆಲ್ಲಾಟವಾಡುತ್ತಿವೆ ಎಂದು ದೂರಿದರು.

ಸರ್ಕಾರ ಕೊಬ್ಬರಿಯನ್ನು ಖರೀದಿ ಮಾಡುವಾಗ ಗರಿಷ್ಠ ಖರೀದಿ ನಿಯಮವನ್ನು ಕೈಬಿಡಬೇಕು ಮತ್ತು ರೈತರು ಬೆಳೆದು ತಂದ ಉತ್ಪನ್ನವನ್ನು ಸಂಪೂರ್ಣವಾಗಿ ಖರೀದಿ ಮಾಡಿಕೊಳ್ಳಬೇಕು. ರೈತರು ಬೆಳೆದ ಬೆಳೆಗಳನ್ನು ಕಾಲ ಕಾಲಕ್ಕೆ ಬೆಳೆ ಸಮೀಕ್ಷೆಯಲ್ಲಿ (ಫä›ಟ್‌ ಐಡಿ) ಲೋಪವಾಗದಂತೆ ರೈತರ ಉಪಸ್ಥಿತಿಯಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಸರ್ಕಾರವು ಸಕಾಲ ಕೇಂದ್ರಗಳಲ್ಲಿ ಪ್ರತಿ ಪಹಣಿಗೆ 25 ರುಪಾಯಿ ಸುಲಿಗೆ ಮಾಡುವುದನ್ನು ನಿಲ್ಲಿಸಿ, ಕೇವಲ 5 ರುಪಾಯಿ ಮಾತ್ರ ತೆಗೆದುಕೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಗಾಯದ ಮೇಲೆ ಬರೆ ಎಳೆದಂತೆ 9 ತಿಂಗಳಿಗೆ ನೈಸರ್ಗಿಕವಾಗಿ ಒಣಗಿ ಕೊಬ್ಬರಿಯಾಗಬೇಕಿದ್ದ ತೆಂಗಿನಕಾಯಿ ಹವಾಮಾನ ವೈಪರೀತ್ಯದ ಕಾರಣದಿಂದಾಗಿ ಕೊಬ್ಬರಿಯಾಗಲು ಸದ್ಯ 13 ರಿಂದ 15 ತಿಂಗಳು ಸಮಯ ತೆಗೆದುಕೊಳ್ಳುತ್ತಿದೆ. ಇದರಿಂದಾಗಿ ರೈತರ ಮೇಲೆ ಆರ್ಥಿಕ ಒತ್ತಡ ಉಂಟಾಗಿ ರೈತರು ಹಸಿ ಕೊಬ್ಬರಿಯನ್ನೇ ಮಾರುಕಟ್ಟೆಗೆ ತರುವಂತಾಗಿದೆ. ರೈತರು ಕೊಬ್ಬರಿಯನ್ನು ಭಾರಿ ನಷ್ಟಕ್ಕೆ ಮಾರಿಕೊಳ್ಳುವ ಪರಿಸ್ಥಿತಿ ಉಂಟಾಗಿದೆ. ರೈತ ಸಂಘಟನೆಗಳು ಕೊಬ್ಬರಿಗೆ ಬೆಂಬಲ ಬೆಲೆಯನ್ನು ಉತ್ಪಾದನಾ ವೆಚ್ಚಕ್ಕೆ ಅನುಗುಣವಾಗಿ ಏರಿಸಬೇಕೆಂದು ಹಲವಾರು ವರ್ಷಗಳಿಂದ ಒತ್ತಾಯ ಮಾಡುತ್ತಲೇ ಬರುತ್ತಿವೆ. ಸರ್ಕಾರದ ತೋಟಗಾರಿಕೆ ಇಲಾಖೆಯು ಕೊಬ್ಬರಿಗೆ 16,730 ರು.ಗಳ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಬೇಕೆಂದು ಕೇಂದ್ರಕ್ಕೆ ಶಿಫಾರಸು ಮಾಡಿದೆ. ಆದರೆ ರೈತರಿಗೆ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲದ ಕೇಂದ್ರ ಸರ್ಕಾರ ಪುಡಿಗಾಸಿನ ಏರಿಕೆ ಮಾಡುತ್ತಿದೆ ಎಂದು ಕಿಡಿಕಾರಿದ ಅವರು, ಈ ಅನ್ಯಾಯದ ಬಗ್ಗೆ ರಾಜ್ಯ ಸರ್ಕಾರವೂ ದಿವ್ಯ ಮೌನ ವಹಿಸಿದೆ. ಜತೆಗೆ ಜನಪ್ರತಿನಿಧಿಗಳು ಸಹ ಕಡತದ ಮೇಲೆ ಕುಳಿತು ಬಿಟ್ಟಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಪ್ರಸ್ತುತ ಕೊಬ್ಬರಿ ಬೆಲೆ 9,500ಕ್ಕೆ ಕುಸಿದಿದೆ. ರೈತರು ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಪದೇ ಪದೇ ಹೋರಾಟಗಳ ಮೂಲಕ ರಾಜ್ಯ ಸರ್ಕಾರಕ್ಕೆ ಆಗ್ರಹ ಮಾಡಿದ್ದರೂ ಕೂಡ ಸರ್ಕಾರವು ಯಾವುದೇ ದಿಟ್ಟಮತ್ತು ಸ್ಪಷ್ಟನಿರ್ಧಾರ ಕೈಗೊಳ್ಳುತ್ತಿಲ್ಲ. ಕಾರ್ಪೊರೇಟ್‌ ಕಂಪನಿಗಳಿಗೆ ಲಕ್ಷಾಂತರ ಕೋಟಿ ಸಾಲ ಮನ್ನಾ ಮಾಡುವ ಸರ್ಕಾರ, ರೈತರ ಬಗ್ಗೆ ಕಿಂಚಿತ್ತು ಮಾನವೀಯತೆಯನ್ನು ತೋರದೆ, ಕೊಬ್ಬರಿಯ ಬೆಂಬಲ ಬೆಲೆಯನ್ನು ಕೇವಲ ರು. 11,750 ನಿಗದಿ ಮಾಡಿದೆ. ಆದ್ದರಿಂದ ಈಗ ಬೀದಿಗಿಳಿದು ಹೋರಾಟ ಮಾಡುವುದು ಅನಿವಾರ್ಯವಾಗಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಚಕ್ರವರ್ತಿ ಪ್ರಕಾಶ್‌, ಕುಚ್ಚಂಗಿ ರಮೇಶ್‌ ಮತ್ತಿತರರು ಉಪಸ್ಥಿತರಿದ್ದರು.

ರಾಜ್ಯ ಸರ್ಕಾರ ಪ್ರತಿ ಕ್ವಿಂಟಲ್‌ ಕೊಬ್ಬರಿಗೆ 5 ಸಾವಿರ ರುಪಾಯಿ ಸಹಾಯಧನ ನೀಡಬೇಕು. ಸರಿಯಾದ ಸರಾಸರಿ ಗುಣಮಟ್ಟನಿಗಧಿ (ಎಫ್‌ಎಕ್ಯೂ) ನಿಯಮದಂತೆಯೇ ಕೊಬ್ಬರಿ ಖರೀದಿ ಮಾಡಿದ 72 ಗಂಟೆಯೊಳಗೆ ರೈತರ ಖಾತೆಗೆ ಹಣ ವರ್ಗಾಯಿಸಬೇಕು. ತಪ್ಪಿದಲ್ಲಿ ತಿಂಗಳಿಗೆ ಕನಿಷ್ಠ ಶೇಕಡ 5ರಂತೆ ಬಡ್ಡಿಯ ಜತೆ ಮೂರು ತಿಂಗಳ ಒಳಗೆ ರೈತರಿಗೆ ಹಣವನ್ನು ಸಂದಾಯ ಮಾಡಬೇಕು.

ರಾಯಸಂದ್ರ ರವಿಕುಮಾರ್‌ ಅಧ್ಯಕ್ಷ, ಜಿಲ್ಲಾ ಕಾಂಗ್ರೆಸ್‌ ಪ್ರಚಾರ ಸಮಿತಿ

Latest Videos
Follow Us:
Download App:
  • android
  • ios