ಬಾಗಲಕೋಟೆ: ಹೆಣ್ಣೆಂದು ಗರ್ಭಪಾತ ಮಾಡ್ಸಿದಾಗ, ಗಂಡು ಮಗು ಪತ್ತೆ!

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಮಹಾಲಿಂಗಪುರದಲ್ಲಿ ಗರ್ಭಪಾತ ಪ್ರಕರಣ ಬೆಳಕಿಗೆ ಬಂದಿದೆ. ಹೆಣ್ಣು ಎಂದು ಗರ್ಭಪಾತ ಮಾಡುವ ವೇಳೆ ಗಂಡು ಮಗು ಎಂದು ಗೊತ್ತಾಗಿದೆ. ಪಟ್ಟಣದ ಪಾಟೀಲ್​ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ಡಾ.ರಾಜೇಂದ್ರ ಪಾಟೀಲ್ ವಿರುದ್ಧ ದೂರು ನೀಡಲು ಆರೋಗ್ಯ ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ. ಮುಧೋಳ ತಾಲೂಕಿನ ರನ್ನಬೆಳಗಲಿ ಗ್ರಾಮದ 24 ವರ್ಷದ ‌ಮಹಿಳೆಗೆ 14 ವಾರಗಳ ಭ್ರೂಣದ ಗರ್ಭಪಾತ ಮಾಡಲಾಗಿದೆ. 

Another abortion case at Mahalingapura in Bagalkot district grg

ಬಾಗಲಕೋಟೆ(ಸೆ.07):  ಗರ್ಭಪಾತದಿಂದ ಮಹಾರಾಷ್ಟ್ರದ ಮಿರಜ್‌ ಮೂಲದ ಗೃಹಿಣಿಯೊಬ್ಬಳು ಮೃತಪಟ್ಟ ಘಟನೆ ಇನ್ನೂ ಹಸಿರಿರುವಾಗಲೇ ಮತ್ತೊಂದು ಗರ್ಭಪಾತ ಪ್ರಕರಣ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದಲ್ಲಿ ನಡೆದಿದೆ.

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಮಹಾಲಿಂಗಪುರದಲ್ಲಿ ಗರ್ಭಪಾತ ಪ್ರಕರಣ ಬೆಳಕಿಗೆ ಬಂದಿದೆ. ಹೆಣ್ಣು ಎಂದು ಗರ್ಭಪಾತ ಮಾಡುವ ವೇಳೆ ಗಂಡು ಮಗು ಎಂದು ಗೊತ್ತಾಗಿದೆ. ಪಟ್ಟಣದ ಪಾಟೀಲ್​ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ಡಾ.ರಾಜೇಂದ್ರ ಪಾಟೀಲ್ ವಿರುದ್ಧ ದೂರು ನೀಡಲು ಆರೋಗ್ಯ ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ. ಮುಧೋಳ ತಾಲೂಕಿನ ರನ್ನಬೆಳಗಲಿ ಗ್ರಾಮದ 24 ವರ್ಷದ ‌ಮಹಿಳೆಗೆ 14 ವಾರಗಳ ಭ್ರೂಣದ ಗರ್ಭಪಾತ ಮಾಡಲಾಗಿದೆ ಎಂದು ಹೇಳಲಾಗಿದೆ.

ಭ್ರೂಣ ಹತ್ಯೆ ಮಾಡಿಸಿ ಪ್ರಿಯಕರ ಪರಾರಿ; ಪ್ರಧಾನಿ ಮೋದಿ ಮೊರೆ ಹೋದ ಮಹಿಳೆ!

ಅಧಿಕಾರಿಗಳ ಭೇಟಿ, ಪರಿಶೀಲನೆ:

ಗರ್ಭಪಾತ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಡಿಎಚ್‌ಒ ಸುವರ್ಣ ಕುಲಕರ್ಣಿ, ಮುಧೋಳ ಟಿಎಚ್‌ಒ ಮಲಘಾಣ ಅವರು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಾತ್ರವಲ್ಲ, ಡೆಲಿವರಿ ಥಿಯೇಟರ್, ಸ್ಕ್ಯಾನಿಂಗ್ ಸೆಂಟರ್, ಎಮ್​ಆರ್​ಡಿ ರೂಮ್ ಸೀಜ್ ಮಾಡಿದ್ದಾರೆ.

ಇನ್ನು ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಬಾಗಲಕೋಟೆ ಡಿಹೆಚ್​ಒ ಸುವರ್ಣ ಕುಲಕರ್ಣಿ ಹಾಗೂ ಮುಧೋಳ ಟಿಹೆಚ್​ಒ ಮಲಘಾಣ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಕ್ಷಣ ಡೆಲಿವರಿ ಥಿಯೇಟರ್, ಸ್ಕ್ಯಾನಿಂಗ್ ಸೆಂಟರ್, ಎಮ್​ಆರ್​ಡಿ ರೂಮ್ ಸೀಜ್ ಮಾಡಿದ್ದಾರೆ.

ಇತ್ತೀಚೆಗಷ್ಟೇ ಮಹಾಲಿಂಗಪುರದಲ್ಲಿ ಗರ್ಭಪಾತದಿಂದ ಮಹಾರಾಷ್ಟ್ರ ಮಹಿಳೆ ಅಸುನೀಗಿದ್ದಳು. ಹೀಗಾಗಿ ಏಳು ಜನರ ವಿರುದ್ಧ ಎಫ್​ಐಆರ್​ ದಾಖಲಿಸಲಾಗಿತ್ತು. ಇಷ್ಟಾಗಿದ್ದರೂ ಈಗ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.

Latest Videos
Follow Us:
Download App:
  • android
  • ios