ರಾಜ್ಯದಲ್ಲಿ ಮತ್ತೊಂದು ಕೊರೋನಾ ಕೇಸ್: ಸೋಂಕಿತ ಸಂಖ್ಯೆ 27ಕ್ಕೇರಿಕೆ
ರಾಜ್ಯದಲ್ಲಿ ಕೊರೊನಾ ಸೋಂಕಿತ ಸಂಖ್ಯೆ 27ಕ್ಕೆ ಏರಿಕೆ| 10 ಲಕ್ಷ ಮಾಸ್ಕ್ ಖರೀದಿಸಲು ಮುಂದಾದ ಸರ್ಕಾರ|ಆರೋಗ್ಯ ಇಲಾಖೆಯು ಯುದ್ಧೋಪಾದಿಯಲ್ಲಿ ಸೋಂಕು ತಡೆಹಿಡಿಯಲು ಕಾರ್ಯೋನ್ಮುಖವಾಗಿದೆ|
ಬೆಂಗಳೂರು[ಮಾ.23]: ರಾಜ್ಯದಲ್ಲಿ ಮತ್ತೋಂದು ಕೊರೋನಾ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 27ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ Covid19 ಸೋಂಕಿಗೆ ಸಂಬಂಧಿಸಿದಂತೆ ಇಂದು ಬೆಳಗ್ಗೆ ಅಧಿಕಾರಿಗಳೊಂದಿಗೆ , ಸ್ಕ್ಯಾನ್ ರೇ ಕಂಪನಿಯೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿದ ಸಚಿವ ಶ್ರೀರಾಮು ಅವರು ಈ ಕೂಡಲೇ 1,000 ವೆಂಟಿಲೇಟರ್ ಖರೀದಿಗೆ ತೀರ್ಮಾನ ತೆಗೆದುಕೊಂಡಿದ್ದಾರೆ. ನಮ್ಮ ಸರ್ಕಾರ ಈಗಾಗಲೇ 10 ಲಕ್ಷ ಮಾಸ್ಕ್ ಖರೀದಿಸಲು ಕ್ರಮ ಕೈಗೊಂಡಿದೆ ಮತ್ತು 5 ಲಕ್ಷ ವೈಯಕ್ತಿಕ ರಕ್ಷಣಾ ಸಾಧನಗಳು (PPE) ಖರೀದಿಗೆ ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
1ರಿಂದ 2 ವರ್ಷ ಟೋಕಿಯೋ ಒಲಿಂಪಿಕ್ಸ್ ಮುಂದೂಡಿಕೆ?
ಆರೋಗ್ಯ ಇಲಾಖೆಯು ಯುದ್ಧೋಪಾದಿಯಲ್ಲಿ ಸೋಂಕು ತಡೆಹಿಡಿಯಲು ಕಾರ್ಯೋನ್ಮುಖವಾಗಿದೆ. ನಾಗರಿಕರು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ವಿನಂತಿಸುತ್ತೇನೆ ಎಂದು ತಿಳಿಸಿದ್ದಾರೆ.
ಮಾರ್ಚ್ 23ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ