ಬೆಂಗಳೂರು[ಮಾ.23]: ರಾಜ್ಯದಲ್ಲಿ ಮತ್ತೋಂದು ಕೊರೋನಾ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 27ಕ್ಕೆ ಏರಿಕೆಯಾಗಿದೆ. 

ರಾಜ್ಯದಲ್ಲಿ Covid19 ಸೋಂಕಿಗೆ ಸಂಬಂಧಿಸಿದಂತೆ ಇಂದು ಬೆಳಗ್ಗೆ ಅಧಿಕಾರಿಗಳೊಂದಿಗೆ , ಸ್ಕ್ಯಾನ್ ರೇ ಕಂಪನಿಯೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿದ ಸಚಿವ ಶ್ರೀರಾಮು ಅವರು ಈ ಕೂಡಲೇ 1,000 ವೆಂಟಿಲೇಟರ್ ಖರೀದಿಗೆ ತೀರ್ಮಾನ ತೆಗೆದುಕೊಂಡಿದ್ದಾರೆ. ನಮ್ಮ ಸರ್ಕಾರ ಈಗಾಗಲೇ 10 ಲಕ್ಷ ಮಾಸ್ಕ್ ಖರೀದಿಸಲು ಕ್ರಮ ಕೈಗೊಂಡಿದೆ ಮತ್ತು 5 ಲಕ್ಷ ವೈಯಕ್ತಿಕ ರಕ್ಷಣಾ ಸಾಧನಗಳು (PPE) ಖರೀದಿಗೆ ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. 

1ರಿಂದ 2 ವರ್ಷ ಟೋಕಿಯೋ ಒಲಿಂಪಿಕ್ಸ್‌ ಮುಂದೂಡಿಕೆ?

ಆರೋಗ್ಯ ಇಲಾಖೆಯು ಯುದ್ಧೋಪಾದಿಯಲ್ಲಿ ಸೋಂಕು ತಡೆಹಿಡಿಯಲು ಕಾರ್ಯೋನ್ಮುಖವಾಗಿದೆ. ನಾಗರಿಕರು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ವಿನಂತಿಸುತ್ತೇನೆ ಎಂದು ತಿಳಿಸಿದ್ದಾರೆ.
 

ಮಾರ್ಚ್ 23ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ