ನಿನ್ನೆ ರಾತ್ರಿ ಮಹಾದೇವಿ ತೀವ್ರ ಅಸ್ವಸ್ಥರಾಗಿ ಇಂದು(ಶನಿವಾರ) ಬೆಳಗಿನ ಜಾವ ಮೃತಪಟ್ಟಿದ್ದಾಳೆ. ವೈದ್ಯರ ನಿರ್ಲಕ್ಷ್ಯದಿಂದ ಮಹಾದೇವಿ ಸಾವಾಗಿದೆ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಮ್ಸ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. 

ಬಳ್ಳಾರಿ(ಫೆ.01): ನಗರದ ವಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿ ಸಾವನ್ನಪ್ಪಿದ್ದಾಳೆ. ಹೌದು, ಜಿಲ್ಲೆಯ ಕುರುಗೋಡು ತಾಲೂಕಿನ ಕೋಳೂರು ಗ್ರಾಮದ ಮಹಾದೇವಿ(21) ಎಂಬಾಕೆಯೇ ಮೃತಪಟ್ಟ ಬಾಣಂತಿಯಾಗಿದ್ದಾಳೆ. 

ಹೆರಿಗೆಯಾಗಿ ವಾರದ ಬಳಿಕ ಮಹಾದೇವಿ ಸಾವನ್ನಪ್ಪಿದ್ದಾಳೆ. ಮಹಾದೇವಿಗೆ ವಿಮ್ಸ್ ವೈದ್ಯರು ಸಿಜರೀನ್ ಮಾಡಿ ಹೆರಿಗೆ ಮಾಡಿದ್ದರು. ಸಿಜರೀನ್ ಬಳಿಕ ಆರಾಮವಾಗಿದ್ದ ಬಾಣಂತಿ ಮಹಾದೇವಿಗೆ ಇನ್ಫಕ್ಷನ್ ಅಗಿದೆ ಎಂದು ವೈದ್ಯರು ಹೇಳಿದ್ದರು. 

ದಾವಣಗೆರೆ: ಕಳಪೆ ಆರ್‌ಎಲ್‌ ಸಲೈನ್‌ನಿಂದಾಗಿ ಒಬ್ಬ ಬಾಣಂತಿ ಸಾವು?

ಜನವರಿ 25 ರಂದು ಮಹಾದೇವಿಗೆ ವೈದ್ಯರು ಸಿಜರೀನ್ ಮಾಡಿದ್ದರು. ಮಹಾದೇವಿ ಹೆಣ್ಣುಗುವಿಗೆ ಜನ್ಮ‌ ನೀಡಿದ್ದಳು. ಮಹಗು ತಾಯಿ ಆರೋಗ್ಯವಾಗಿದ್ದರು. ಹೆರಿಗೆಯಾದ ಐದು ದಿನದ ಬಳಿಕ ಮಹಾದೇವಿಗೆ ಇನ್ಫೆಕ್ಷನ್ ಆಗಿದೆ ಎಂದು ವೈದ್ಯರು ಹೇಳಿದ್ದರಂತೆ.

ನಿನ್ನೆ ರಾತ್ರಿ ಮಹಾದೇವಿ ತೀವ್ರ ಅಸ್ವಸ್ಥರಾಗಿ ಇಂದು(ಶನಿವಾರ) ಬೆಳಗಿನ ಜಾವ ಮೃತಪಟ್ಟಿದ್ದಾಳೆ. ವೈದ್ಯರ ನಿರ್ಲಕ್ಷ್ಯದಿಂದ ಮಹಾದೇವಿ ಸಾವಾಗಿದೆ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಮ್ಸ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. 

ಕರ್ನಾಟಕದಲ್ಲಿ ಹೆಚ್ಚುತ್ತಿರುವ ಬಾಣಂತಿಯರ ಸಾವು: ಕೇಂದ್ರಕ್ಕೆ ಸಂಸದ ಡಾ.ಸುಧಾಕರ್‌ ಪತ್ರ

ಚಿಕ್ಕಬಳ್ಳಾಪುರ: ಕರ್ನಾಟಕದಲ್ಲಿ ಹೆಚ್ಚುತ್ತಿರುವ ಬಾಣಂತಿಯರ ಸಾವಿಗೆ ನ್ಯಾಯ ಕೊಡಿಸಲು, ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕು ಹಾಗೂ ಕೇಂದ್ರ ಸರ್ಕಾರದಿಂದ ಸಂಶೋಧನಾ ತಂಡವನ್ನು ಕಳುಹಿಸಿ ಪರಿಶೀಲಿಸಬೇಕೆಂದು ಸಂಸದ ಡಾ.ಕೆ.ಸುಧಾಕರ್‌ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರಿಗೆ ಬರೆದ ಪತ್ರದಲ್ಲಿ ಮನವಿ ಮಾಡಿದ್ದಾರೆ. ಕಳೆದ ಕೆಲವು ತಿಂಗಳಿಂದ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರು ಮೃತಪಡುವ ಘಟನೆ ವರದಿಯಾಗುತ್ತಿವೆ. 2024 ರ ನವೆಂಬರ್‌ವರೆಗೆ 348 ತಾಯಂದಿರು ಮೃತಪಟ್ಟಿದ್ದಾರೆ. ಆಗಸ್ಟ್‌ನಿಂದ ನವೆಂಬರ್‌ವರೆಗೆ ಕೇವಲ ನಾಲ್ಕು ತಿಂಗಳಲ್ಲಿ 217 ಪ್ರಕರಣ ವರದಿಯಾಗಿವೆ. ಈ 217 ಪ್ರಕರಣಗಳಲ್ಲಿ 179 ಪ್ರಕರಣಗಳು ಸರ್ಕಾರಿ ಆಸ್ಪತ್ರೆಗಳಿಗೆ ಸಂಬಂಧಿಸಿದ್ದಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದರು.

ನಿರ್ವಹಣೆಯಲ್ಲಿ ಲೋಪ:

ಹೆಚ್ಚಿನ ಪ್ರಕರಣಗಳು ಪಿಪಿಎಚ್‌ ಹಾಗೂ ಎಎಫ್‌ಇ, ಅನೀಮಿಯ ಹಾಗೂ ನಿರ್ವಹಣೆಯಲ್ಲಿ ಲೋಪಕ್ಕೆ ಸಂಬಂಧಿಸಿವೆ. ಆಂಟಿಬಯೋಟಿಕ್‌ ಕೊರತೆ, ತರಬೇತಿ ಹೊಂದಿರುವ ಸಿಬ್ಬಂದಿ ಕೊರತೆ ಮೊದಲಾದವು ಕೂಡ ಇದಕ್ಕೆ ಕಾರಣ. ಇದರಲ್ಲಿ ಲಿಂಜರ್ಸ್‌ ಲ್ಯಾಕ್ಟೇಟ್‌ ದ್ರಾವಣದಲ್ಲಿ ದೋಷ ಕೂಡ ಕಾರಣ ಎನ್ನಲಾಗುತ್ತಿದೆ. ಆದ್ದರಿಂದ ಈ ಕುರಿತು ಸಮಗ್ರವಾದ ಪರಿಶೀಲನೆ ನಡೆಯುವ ಅಗತ್ಯವಿದೆ. ಮೊದಲಿಗೆ, ತಾಯಂದಿರ ಮರಣಕ್ಕೆ ಕಾರಣಗಳನ್ನು ಪತ್ತೆ ಮಾಡಲು ತುರ್ತಾಗಿ ಕಾರ್ಯಯೋಜನೆ ರೂಪಿಸಬೇಕು. 

ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಮತ್ತೊಂದು ಬಾಣಂತಿ ಸಾವು!

ಜೊತೆಗೆ ಕೇಂದ್ರ ಸರ್ಕಾರದಿಂದ ಸಂಶೋಧನಾ ತಂಡವನ್ನು ಕಳುಹಿಸಿ, ಕಾರಣ ಪತ್ತೆ ಜೊತೆಗೆ, ಪರಿಹಾರವನ್ನು ಶಿಫಾರಸು ಮಾಡಬೇಕು ಎಂದು ಮನವಿ ಮಾಡಿದ್ದಾರೆ. ಗರ್ಭಿಣಿಯರ ಆರೈಕೆ ಹಾಗೂ ಹೆರಿಗೆ ಸಮಯದಲ್ಲಿ ಉತ್ತಮ ಸೇವೆ ನೀಡಲು ಸರ್ಕಾರಿ ಆಸ್ಪತ್ರೆಗಳ ಸಿಬ್ಬಂದಿಗೆ ಸೂಕ್ತ ತರಬೇತಿ ನೀಡಬೇಕಿದೆ. ಕಬ್ಬಿಣಾಂಶದ ಆಹಾರ ಸೇವನೆ, ತುರ್ತು ಆರೈಕೆ, ಪ್ರತಿ ದಿನ ಆರೋಗ್ಯ ತಪಾಸಣೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಗರ್ಭಿಣಿಯರಿಗೆ ಮಾಹಿತಿ ನೀಡಿ ಅರಿವು ಮೂಡಿಸಬೇಕು ಎಂದು ಅವರು ಪತ್ರದಲ್ಲಿ ಕೋರಿದ್ದರು. 

ತಾಯಂದಿರ ಜೀವ ಕಾಪಾಡಿ: 

ದೇಶದ ಭವಿಷ್ಯದ ದೃಷ್ಟಿಯಿಂದ ನವಜಾತ ಶಿಶು ಹಾಗೂ ತಾಯಂದಿರ ಜೀವ ಕಾಪಾಡುವುದು ಬಹಳ ಅಗತ್ಯ. ಆದ್ದರಿಂದ ತಾವು ಈ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳುವ ಮೂಲಕ ಕರ್ನಾಟಕದಲ್ಲಿ ಹಾಗೂ ಭಾರತದ ಯಾವುದೇ ಭಾಗದಲ್ಲಿ ತಾಯಂದಿರು ಮೃತಪಡದಂತೆ ಎಚ್ಚರವಹಿಸಲು ಸಾಧ್ಯವಾಗುತ್ತದೆ. ಈ ಎಲ್ಲ ಕಾರ್ಯಗಳಿಗೆ ನಾನು ಸಂಪೂರ್ಣ ಸಹಕಾರ ಹಾಗೂ ಬೆಂಬಲ ನೀಡುತ್ತೇನೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದರು.