ಮೈಸೂರು : ಮತ್ತೊಂದು ಹಗರಣ- ಸಿಎಂಗೆ ಇಚ್ಛಾಶಕ್ತಿ ಇದ್ದರೆ ಸಿಬಿಐ ತನಿಖೆಗೆ ವಹಿಸಲಿ

ಸಿದ್ದರಾಮಯ್ಯ ಅವರ ಅವಧಿಯಲ್ಲಿ ಶಿಕ್ಷಕರ ನೇಮಕಾತಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ರಾಜಕೀಯ ಇಚ್ಛಾಶಕ್ತಿ ಇದ್ದರೆ ಪ್ರಕರಣವನ್ನು ಸಿಬಿಐಗೆ ವಹಿಸಲಿ ಎಂದು ಕೆಪಿಸಿಸಿ ವಕ್ತಾರ ಎಚ್‌.ಎ. ವೆಂಕಟೇಶ್‌ ಸವಾಲು ಹಾಕಿದರು.

Another scam Karnataka If the CM has the willpower let the CBI investigate snr

 ಮೈಸೂರು (ಅ.20):  ಸಿದ್ದರಾಮಯ್ಯ ಅವರ ಅವಧಿಯಲ್ಲಿ ಶಿಕ್ಷಕರ ನೇಮಕಾತಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ರಾಜಕೀಯ ಇಚ್ಛಾಶಕ್ತಿ ಇದ್ದರೆ ಪ್ರಕರಣವನ್ನು ಸಿಬಿಐಗೆ ವಹಿಸಲಿ ಎಂದು ಕೆಪಿಸಿಸಿ ವಕ್ತಾರ ಎಚ್‌.ಎ. ವೆಂಕಟೇಶ್‌ ಸವಾಲು ಹಾಕಿದರು.

ನಗರದ ಕಾಂಗ್ರೆಸ್‌ (Congress)  ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಕ್ಷಕರ ನೇಮಕಾತಿ ಕುರಿತು ಮುಖ್ಯಮಂತ್ರಿಗಳು ಆರೋಪಿಸಿದ್ದಾರೆ. ಬೀದರ್‌ನಲ್ಲಿ ನಡೆದ ಜನಸಂಕಲ್ಪ ಯಾತ್ರೆಯಲ್ಲಿ ಬೊಮ್ಮಾಯಿ ಅವರು ಸಿದ್ದರಾಮಯ್ಯ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿದ್ದಾರೆ. ರಾಹುಲ್‌ಗಾಂಧಿಗೆ ಅಕ್ರಮದ ವರದಿ ಕಳುಹಿಸುತ್ತೇನೆ ಎಂದು ಹೇಳಿದ್ದಾರೆ. ಒಂದು ವೇಳೆ ಸಿದ್ದರಾಮಯ್ಯ ಅವರು ಅಕ್ರಮವೆಸಗಿದ್ದರೆ ಇದುವರೆಗೆ ಯಾಕೆ ತನಿಖೆ ಮಾಡಿಸಲಿಲ್ಲ? ರಾಹುಲ್‌ ಗಾಂಧಿಗೆ ಕಳುಹಿಸುವ ಉದ್ದೇಶವಾದರೂ ಏನು? ಕೇಂದ್ರ, ರಾಜ್ಯದಲ್ಲಿ ನಿಮ್ಮದೇ ಸರ್ಕಾರವಿದೆ. ಕೂಡಲೇ ತನಿಖೆ ನಡೆಸಿ ಸತ್ಯ ಹೊರಬರಲಿ ಎಂದು ಹೇಳಿದರು.

ಭಾರತ್‌ ಜೋಡೋ ಯಾತ್ರೆಯ ಯಶಸ್ಸನ್ನು ಕಂಡು ಬಿಜೆಪಿಗೆ ನಡುಕ ಶುರುವಾಗಿದೆ. ಹೀಗಾಗಿಯೇ ಬಾಲಿಶ ಹೇಳಿಕೆ ನೀಡುತ್ತಿದ್ದಾರೆ. ರಾಹುಲ್‌ಗಾಂಧಿ ಬೇಲ್‌ ಮೇಲಿದ್ದಾರೆ ಎನ್ನುವವರು ಜೈಲಿಗೆ ಹೋಗಿ ಬಂದವರನ್ನು ಸಂಸದೀಯ ಮಂಡಳಿ ಸದಸ್ಯರನ್ನಾಗಿ ಮಾಡುತ್ತಾರೆ. ಅವರ ಮಗನಿಗೆ ರಾಜ್ಯ ಉಪಾಧ್ಯಕ್ಷ ಸ್ಥಾನ ನೀಡುತ್ತಾರೆ. ಇಂತಹವರಿಗೆ ಕಾಂಗ್ರೆಸ್‌ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಅವರು ಟೀಕಿಸಿದರು.

ಅಧಿಕಾರಿಗಳ ಮೇಲೆ ಸಿಎಂಗೆ (CM)  ಹಿಡಿತವಿಲ್ಲ. ಸಚಿವರನ್ನು ನಿಯಂತ್ರಿಸಲು ಸಾಧ್ಯವಾಗಿಲ್ಲ. ಜನರಿಗೆ ನೆರವು ನೀಡಲು ಆಗುತ್ತಿಲ್ಲ. ಉಸ್ತುವಾರಿ ಸಚಿವರು ಕಾಣೆಯಾಗಿದ್ದಾರೆ. ತಪ್ಪನ್ನು ಮುಚ್ಚಿಕೊಳ್ಳಲು ಅಧಿಕಾರಿಗಳ ಮೇಲೆ ಹರಿಹಾಯುತ್ತಿದ್ದಾರೆ. ಸರ್ಕಾರ ಈಗ ಟೇಕಾಪ್‌ ಆಗಲು ಪ್ರಯತ್ನಿಸುತ್ತಿದೆ. ಇನ್ನು ಎರಡು ತಿಂಗಳಲ್ಲಿ ಚುನಾವಣಾ ಪ್ರಕ್ರಿಯೆಗಳು ಆರಂಭವಾದರೆ ಟೇಕಾಫ್‌ ಆದ ಹೆಲಿಕಾಪ್ಟರ್‌ ಲ್ಯಾಂಡ್‌ ಆಗಬೇಕಾಗುತ್ತದೆ ಎಂದು ಅವರು ಮೊದಲಿಸಿದರು.

ಜನ ಸಂಕಷ್ಟದಲ್ಲಿದ್ದರೂ ಅವರ ನೆರವಿಗೆ ನಿಲ್ಲದೆ ಸಂಕಲ್ಪ ಯಾತ್ರೆ ಮಾಡುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಪತನವಾಗಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಖಚಿತ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಪುಸ್ತಕ ರೂಪದಲ್ಲಿ ಜೋಡೋ ಯಾತ್ರೆ:

ರಾಹುಲ್‌ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್‌ ಜೋಡೋ ಯಾತ್ರೆ ಕುರಿತು ಇಂಗ್ಲಿಷ್‌ ಹಾಗೂ ಕನ್ನಡದಲ್ಲಿ ಕೃತಿ ತರುವ ಚಿಂತನೆ ಇದೆ. ಜೋಡೋ ಯಾತ್ರೆ ದೇಶದ ಇತಿಹಾಸದಲ್ಲಿ ಐತಿಹಾಸಿಕ ದಾಖಲೆಯಾಗಿ ಉಳಿಯಲಿದೆ. ಕರ್ನಾಟದಲ್ಲಿ 21 ದಿನ ಸಂಚರಿಸಿದ ಪಾದಯಾತ್ರೆಯ ಚಿತ್ರಣದ ಕುರಿತು ಪುಸ್ತಕದಲ್ಲಿ ದಾಖಲಿಸಲಾಗುವುದು. ಪಾದ ಯಾತ್ರೆಯಲ್ಲಿ ಭಾಗವಹಿಸಿದವರ ಸಂದರ್ಶನ, ರಾಹುಲ್‌ಗಾಂಧಿ ಅವರ ಭಾಷಣ ಸೇರಿದಂತೆ ಅಭೂತಪೂರ್ವ ಕ್ಷಣಗಳ ಚಿತ್ರಣ ಪುಸ್ತಕದಲ್ಲಿ ಇರುತ್ತದೆ ಎಂದರು.

ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವ ಕುಮಾರ್‌, ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಡಾ.ಬಿ.ಜೆ. ವಿಜಯ ಕುಮಾರ್‌, ನಗರಾಧ್ಯಕ್ಷ ಆರ್‌. ಮೂರ್ತಿ, ಸಿಂಡಿಕೇಟ್‌ ಮಾಜಿ ಸದಸ್ಯ ಎನ್‌. ಗೋಪಿನಾಥ್‌, ನಗರ ಪ್ರಧಾನ ಕಾರ್ಯದರ್ಶಿ ಭಾಸ್ಕರ್‌ ಎಲ್‌.ಗೌಡ, ಸೇವಾದಳದ ನಗರ ಘಟಕದ ಅಧ್ಯಕ್ಷ ಗಿರೀಶ್‌ ಇದ್ದರು.

ಸಿದ್ದರಾಮಯ್ಯ ಅವರ ಅವಧಿಯಲ್ಲಿ ಶಿಕ್ಷಕರ ನೇಮಕಾತಿಯಲ್ಲಿ ಅವ್ಯವಹಾರ ನಡೆದಿದೆ  ಎಂದು ಆರೋಪಿಸಿರುವ ಸಿಎಂ

ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ರಾಜಕೀಯ ಇಚ್ಛಾಶಕ್ತಿ ಇದ್ದರೆ ಪ್ರಕರಣವನ್ನು ಸಿಬಿಐಗೆ ವಹಿಸಲಿ

ಕೆಪಿಸಿಸಿ ವಕ್ತಾರ ಎಚ್‌.ಎ. ವೆಂಕಟೇಶ್‌ ಸವಾಲು

ಭಾರತ್‌ ಜೋಡೋ ಯಾತ್ರೆಯ ಯಶಸ್ಸನ್ನು ಕಂಡು ಬಿಜೆಪಿಗೆ ನಡುಕ

Latest Videos
Follow Us:
Download App:
  • android
  • ios