ಬಿಜೆಪಿ ವಿರೋಧಿ ಅಲೆಯಿಂದ ನನ್ನ ಗೆಲುವು ಸಾಧ್ಯ : ಕೈ ಅಭ್ಯರ್ಥಿ
- ಈ ಬಾರಿ ಬಿಜೆಪಿ ವಿರೋಧಿ ಅಲೆಯಿಂದ ನನ್ನ ಗೆಲುವು ಸಾಧ್ಯ
- ಕಾಂಗ್ರೆಸ್ ಅಭ್ಯರ್ಥಿ ಆರ್. ಪ್ರಸನ್ನಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.
ಶಿವಮೊಗ್ಗ (ನ.18): ಈ ಬಾರಿ ಬಿಜೆಪಿ (BJP) ವಿರೋಧಿ ಅಲೆಯಿಂದ ನನ್ನ ಗೆಲುವು ಸಾಧ್ಯ ಎಂದು ಕಾಂಗ್ರೆಸ್ (Congress) ಅಭ್ಯರ್ಥಿ ಆರ್. ಪ್ರಸನ್ನ ಕುಮಾರ್ (R Prasanna kumar) ವಿಶ್ವಾಸ ವ್ಯಕ್ತಪಡಿಸಿದರು.
ನಗರದಲ್ಲಿ ಬುಧವಾರ ವಿಧಾನ ಪರಿಷತ್ತು (MLC Election) ಸದಸ್ಯ ಸ್ಥಾನದ ಚುನಾವಣೆಗೆ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ನಂತರ ಮಾತನಾಡಿದ ಅವರು, ಕಾಂಗ್ರೆಸ್‌ನಿಂದ ಇನ್ನೂ ಅಧಿಕೃತ ಪಟ್ಟಿಘೋಷಣೆಯಾಗದೇ ಇದ್ದರೂ ಸಹ ಪಕ್ಷದ ಮುಖಂಡರ ಸೂಚನೆಯ ಮೇರೆಗೆ ನಾಮಪತ್ರ ಸಲ್ಲಿಕೆ ಮಾಡಿದ್ದೇನೆ ಎಂದರು.
ಪಕ್ಷ ನನ್ನ ಬೆನ್ನ ಹಿಂದೆ ಇರುವುದರಿಂದ ಯಾವುದೇ ಆತಂಕ ವಿಲ್ಲ. ನಮ್ಮ ಸರ್ಕಾರ ಮಾಡಿರುವ ಉತ್ತಮ ಕೆಲಸಗಳು ಹಾಗೂ ಬಿಜೆಪಿ ಸರ್ಕಾರದ ಜನವಿರೋಧಿ ಆಡಳಿತ ಅಲ್ಲದೇ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಶೇ. 50 ಕ್ಕೂ ಹೆಚ್ಚು ಕಾಂಗ್ರೆಸ್ ಬೆಂಬಲಿಗರು ಇರುವುದರಿಂದ ನಮ್ಮ ಗೆಲುವಿಗೆ ಸಹಕಾರಿಯಾಗಲಿದೆ ಎಂದರು.
ಬೆಳಗಾವಿ ಪರಿಷತ್ ಜಿದ್ದಾಜಿದ್ದಿ : ರಾಜ್ಯದಲ್ಲಿ ವಿಧಾನ ಪರಿಷತ್ ಚುನಾವಣೆ (MLC Election)ರಂಗೇರಿದ್ದು, ಕಾಂಗ್ರೆಸ್(Congress), ಬಿಜೆಪಿ9BJP) ಹಾಗೂ ಜೆಡಿಎಸ್ ಅಭ್ಯರ್ಥಿಗಳ ಆಯ್ಕೆಯಲ್ಲಿ ನಿರತವಾಗಿವೆ. ಆದ್ರೆ, ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳ ಘೋಷಣೆಗೂ ಮುನ್ನವೇ ಬೆಳಗಾವಿಯಲ್ಲಿ (Belagavi) ಭರ್ಜರಿ ಪ್ರಚಾರ ಶುರುವಾಗಿದೆ.
ಹೌದು....ಕಾಂಗ್ರೆಸ್‌ನಿಂದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ (Laxmi Hebbalkar) ಹಾಗೂ ಬಿಜೆಪಿಯಿಂದ ರಮೇಶ್ ಜಾರಕಿಹೊಳಿ (Ramesh Jarkiholi) ಪ್ರಚಾರ ಶುರು ಮಾಡಿಕೊಂಡಿದ್ದಾರೆ.
ಪರಿಷತ್ ಚುನಾವಣೆಗೆ 98000 ಮತದಾರರು : ಚುನಾವಣೆ ಆಯೋಗ
ಟಿಕೆಟ್ ಘೋಷಣೆಗೂ ಮೊದಲೇ ಮಾಜಿ ಸಚಿವ ರಮೇಶ ಜಾರಕಿಹೊಳಿ ಸಹೋದರ ಲಖನ್ ಜಾರಕಿಹೊಳಿ ಪರವಾಗಿ ಪ್ರಚಾರ ಕೈಗೊಂಡಿದ್ರೆ, ಲಕ್ಷ್ಮೀ ಹೆಬ್ಬಾಳ್ಕರ್ ಚನ್ನರಾಜ ಹಟ್ಟಿಹೊಳಿ ಪರ ಬಿರುಸಿನ ಪ್ರಚಾರ ಮಾಡುತ್ತಿದ್ದಾರೆ.
ಅಭ್ಯರ್ಥಿಗಳ ಘೋಷಣೆಯೇ ಆಗಿಲ್ಲ
ಯೆಸ್ ಬೆಳಗಾವಿ ವಿಧಾನ ಪರಿಷತ್ ಚುನಾವಣೆಗೆ ಇನ್ನೂ ಬಿಜೆಪಿ ಹಾಗೂ ಕಾಂಗ್ರೆಸ್‌ನಿಂದ ಅಭ್ಯರ್ಥಿ ಘೋಷಣೆಯಾಗಿಲ್ಲ, ಆದ್ರೆ, ರಮೇಶ್ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಆಗಲೇ ಅಭ್ಯರ್ಥಿಗಳ ಆಯ್ಕೆ ಮಾಡಿಕೊಂಡು ಅವರು ಪರವಾಗಿ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ.
ಬಿಜೆಪಿಯಿಂದ ಲಖನ್ ಜಾರಕಿಹೊಳಿ?
ಡಿಸೆಂಬರ್ 10ರಂದು ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಟಿಕೆಟ್ ಘೋಷಣೆ ಮೊದಲೇ ಗೋಕಾಕ ಕ್ಷೇತ್ರದ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಗ್ರಾಮಪಂಚಾಯಿತಿ ಸದಸ್ಯರನ್ನು ಭೇಟಿಯಾಗಿ ಲಖನ್ ಜಾರಕಿಹೊಳಿ ಪರ ಪ್ರಚಾರ ನಡೆಸಿದ್ದಾರೆ.
ಖಾನಾಪುರದ ಹೋಟೆಲ್ ನಲ್ಲಿ ಮಾಜಿ ಶಾಸಕ ಅರವಿಂದ ಪಾಟೀಲ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಸಭೆಯಲ್ಲಿ ಮಹಾಂತೇಶ ಕವಟಗಿಮಠ ಅವರಿಗೆ ಒಂದು ಮತ, ಸಹೋದರ ಲಖನ್ ಗೆ ಒಂದು ಮತ ನೀಡುವಂತೆ ರಮೇಶ್ ಜಾರಕಿಹೊಳಿ ಮನವಿ ಮಾಡಿದ್ದಾರೆನ್ನಲಾಗಿದೆ.
ಎರಡು ದಿನಗಳ ಹಿಂದೆ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ದ್ವಿಸದಸ್ಯ ಕ್ಷೇತ್ರದಿಂದ ಸೋದರ ಲಖನ್ ಜಾರಕಿಹೊಳಿಗೆ ಬಿಜೆಪಿ ಎರಡನೇ ಅಭ್ಯರ್ಥಿಯಾಗಿ ಟಿಕೆಟ್ ನೀಡಬೇಕೆಂದು ಮನವಿ ಮಾಡಿದ್ದರು. ಬಿಜೆಪಿ ಟಿಕೆಟ್ ಸಿಗದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಲಖನ್ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್‌ನಿಂದ ಚನ್ನರಾಜ ಹಟ್ಟಿಹೊಳಿ?
ಬೆಳಗಾವಿ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್‌ನಿಂದ ಚನ್ನರಾಜ ಹಟ್ಟಿಹೊಳಿ ಅಭ್ಯರ್ಥಿಯಾಗುವ ಎಲ್ಲಾ ಸಾಧ್ಯತೆಗಳಿವೆ. ಯಾಕಂದ್ರೆ ಈಗಾಗಲೇ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಚನ್ನರಾಜ ಹಟ್ಟಿಹೊಳಿ ಅವರೇ ಕಾಂಗ್ರೆಸ್‌ನ ಅಧಿಕೃತ ಅಭ್ಯರ್ಥಿ ಎಂದು ಹೇಳಿಕೊಂಡು ಪ್ರಚಾರ ಮಾಡುತ್ತಿದ್ದಾರೆ. ಅಲ್ಲದೇ ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋಗಳನ್ನ ಹಂಚಿಕೊಂಡಿದ್ದಾರೆ.