ಮಂಗಳೂರು, (ಡಿ. 19): ನಗರದಲ್ಲಿ ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಘಟನೆಯಲ್ಲಿ ಇಬ್ಬರು ಪ್ರತಿಭಟನಾಕಾರರು ಮೃತಪಟ್ಟಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಸಲಾಗುತ್ತಿದ್ದ ಪ್ರತಿಭಟನೆ ಮಧ್ಯಾಹ್ನ ಏಕಾಏಕಿ ವಿಕೋಪಕ್ಕೆ ತಿರುಗಿದ್ದು, ಪೊಲೀಸರ ಗುಂಡು ಹಾರಿಸಿದ್ದಾರೆ. ಪರಿಣಾಮ ಇಬ್ಬರು ಸಾವು ಕಂಡಿದ್ದಾರೆ. 

ಮಂಗಳೂರಿನಲ್ಲಿ ಆರದ ಪೌರತ್ವ ಕಾಯ್ದೆಯ ಕಿಚ್ಚು: ಶಾಲಾ-ಕಾಲೇಜುಗಳಿಗೆ ರಜೆ

ಜಲೀಲ್‌ ಕುದ್ರೋಳಿ (49) ಹಾಗೂ ನೌಸೀನ್‌ (23) ಮೃತಪಟ್ಟವರು. ಅಷ್ಟೇ ಅಲ್ಲದೇ ಪ್ರತಿಭಟನಾಕಾರರು ನಡೆಸಿದ್ದ ಕಲ್ಲು ತೂರಾಟದಲ್ಲಿ 20ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ.

ಪೊಲೀಸ್ ಠಾಣೆ ಮೆಲೆ ದಾಳಿ ನಡೆಸಿ ಪೊಲೀಸರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದಾಗ ಅನಿವಾರ್ಯವಾಗಿ ಬಲಪ್ರಯೋಗ ಮಾಡಲಾಯಿತು. ಇದರಿಂದ ಇಬ್ಬರು ತೀವ್ರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ.ಪಿ.ಎಸ್. ಹರ್ಷ ತಿಳಿಸಿದ್ದರು. 

ಆದ್ರೆ, ಇದೀಗ ಬಂದ ಮಾಹಿತಿ ಪ್ರಕಾರ ತೀವ್ರ ನಿಗಾ ಘಟಕದಲ್ಲಿದ್ದವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮಂಗಳೂರು: ಯಾವ ಕಾರಣಕ್ಕೆ ಗುಂಡು ಹಾರಿಸಬೇಕಾಯಿತು? ಹರ್ಷಾ ವಿವರಣೆ

ಕರ್ಫ್ಯೂ ಜಾರಿ, ಶಾಲಾ-ಕಾಲೇಜುಗಳಿಗೆ ರಜೆ
ಪ್ರತಿಭಟನೆ ವಿಕೋಪಕ್ಕೆ ತಿರುಗುತ್ತಿದ್ದಂತೆಯೇ ಮಂಗಳೂರು ಸಿಟಿಯಲ್ಲಿ ಡಿ.20ರ ಮಧ್ಯರಾತ್ರಿ ವರೆಗೆ ಕರ್ಫ್ಯೂ ಜಾರಿ ಮಾಡಲಾಗಿದೆ. ಈ ಹಿನ್ನೆಯಲ್ಲಿ ಶುಕ್ರವಾರ ಮಂಗಳೂರು ನಗರ ವ್ಯಾಪ್ತಿ ಪ್ರದೇಶದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಪೌರತ್ವ ತಿದ್ದುಪಡಿ ಕಾಯ್ದೆ ಕಿಚ್ಚಿಗೆ ಮಂಗಳೂರು ಧಗ-ಧಗ: ಕರ್ಫ್ಯೂ ಜಾರಿ

ಬಾರ್ ಮತ್ತು ರೆಸ್ಟೋರೆಂಟ್ ಬಂದ್
ಮುಂಜಾಗೃತಾ ಕ್ರಮವಾಗಿ ನಾಳೆ [ಶುಕ್ರವಾರ] ಒಂದು ದಿನ ಮದ್ಯದಂಗಡಿ, ಬಾರ್ ಮತ್ತು ರೆಸ್ಟೋರೆಂಟ್ ಬಂದ್  ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಆದೇಶ ಹೊರಡಿಸಿದ್ದಾರೆ.