ಮಂಗಳೂರಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ರಚಿಸಿ ಅಧಿಕೃತ ಆದೇಶ
ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಸೂಚನೆಯಂತೆ ಆ್ಯಂಟಿ ಕಮ್ಯುನಲ್ ವಿಂಗ್ ಅಸ್ತಿತ್ವಕ್ಕೆ ಬಂದಿದೆ. ನೈತಿಕ ಪೊಲೀಸ್ ಗಿರಿ ಪ್ರಕರಣಗಳನ್ನು ತಡೆಗಟ್ಟುವ ಸಲುವಾಗಿ ಕ್ಷಿಪ್ರ ಕಾರ್ಯಚರಣೆಗಾಗಿ ವಿಂಗ್ ರಚನೆ ಮಾಡಲಾಗಿದೆ.
ಭರತ್ ರಾಜ್, ಏಷ್ಯಾನೆಟ್ ಸುವರ್ಣ ನ್ಯೂಸ್, ಮಂಗಳೂರು
ಮಂಗಳೂರು(ಜೂ.15): ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ರಚಿಸಿ ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಅವರು ಆದೇಶ ಹೊರಡಿಸಿದ್ದಾರೆ. ನೈತಿಕ ಪೊಲೀಸ್ ಗಿರಿ ಮತ್ತು ಕೋಮು ಗಲಭೆ ತಡೆಗೆ ಆ್ಯಂಟಿ ಕಮ್ಯುನಲ್ ವಿಂಗ್ ರಚನೆ ಮಾಡಲಾಗಿದೆ.
ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಸೂಚನೆಯಂತೆ ಆ್ಯಂಟಿ ಕಮ್ಯುನಲ್ ವಿಂಗ್ ಅಸ್ತಿತ್ವಕ್ಕೆ ಬಂದಿದೆ. ನಗರದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಗಳಿಂದ ಕಾನೂನು ಸುವ್ಯವಸ್ಥೆಗೆ ತೊಂದರೆಯಾಗಿದೆ. ನೈತಿಕ ಪೊಲೀಸ್ ಗಿರಿ ಪ್ರಕರಣಗಳನ್ನು ತಡೆಗಟ್ಟುವ ಸಲುವಾಗಿ ಕ್ಷಿಪ್ರ ಕಾರ್ಯಚರಣೆಗಾಗಿ ವಿಂಗ್ ರಚನೆ ಮಾಡಲಾಗಿದೆ ಅಂತ ಕುಲದೀಪ್ ಜೈನ್ ತಿಳಿಸಿದ್ದಾರೆ.
ಮಂಗ್ಳೂರಲ್ಲಿ ಕೋಮುವಾದ ನಿಗ್ರಹ ದಳ: ಪರಮೇಶ್ವರ್
ಮಂಗಳೂರು ನಗರದ ಸಿಸಿಬಿ ಎಸಿಪಿ ಉಸ್ತುವಾರಿಯಲ್ಲಿ "ಆ್ಯಂಟಿ ಕಮ್ಯುನಲ್ ವಿಂಗ್" ತಂಡ ರಚನೆ ಮಾಡಲಾಗಿದ್ದು, ನಗರದಲ್ಲಿ ನಡೆಯಬಹುದಾದ ನೈತಿಕ ಪೊಲೀಸ್‌ಗಿರಿ ಸಮಸ್ಯೆಯನ್ನು ನಿಭಾಯಿಸುವುದು ಇದರ ಕರ್ತವ್ಯವಾಗಿದೆ. ಈ ಹಿಂದೆ ವರದಿಯಾಗಿರುವ ಕೋಮು ವಿಚಾರಕ್ಕೆ ಸಂಬಂಧಿಸಿದ ಎಲ್ಲಾ ಕೊಲೆ, ಕೊಲೆ ಪ್ರಯತ್ನ, ದೊಂಬಿ ಪ್ರಕರಣಗಳು. ನೈತಿಕ ಪೊಲೀಸ್‌ಗಿರಿ ಮತ್ತು ಗೋವುಗಳ ಕಳ್ಳತನ, ಅಕ್ರಮ ಗೋ-ಸಾಗಾಟ, ಗೋ-ವಧೆ ಮುಂತಾದ ಪ್ರಕರಣಗಳನ್ನು ಈ ವಿಂಗ್ ಪರಿಶೀಲನೆ ನಡೆಸಲಿದೆ. ಅವುಗಳಲ್ಲಿನ ಆರೋಪಿತರುಗಳ ಚಲನವಲನಗಳ ಬಗ್ಗೆ ಪ್ರತಿನಿತ್ಯ ನಿಗಾವಹಿಸುವುದು. ಅವರುಗಳ ವಿರುದ್ಧ ಭದ್ರತಾ ಕಾಯ್ದೆಯಡಿ ಮುಚ್ಚಳಿಕೆ ಪಡೆದುಕೊಳ್ಳುವುದು. ಕೋಮು ವಿಚಾರಕ್ಕೆ ಸಂಬಂಧಪಟ್ಟಂತೆ ಕಾರ್ಯಾಚರಿಸುತ್ತಿರುವ ಎಲ್ಲಾ ಸಂಘಟನೆಗಳ ಬಗ್ಗೆ ಮಾಹಿತಿಯನ್ನ ಆ್ಯಂಟಿ ಕಮ್ಯುನಲ್ ವಿಂಗ್ ಸಂಗ್ರಹ ಮಾಡಲಿದೆ ಅಂತ ಮಾಹಿತಿ ನೀಡಿದ್ದಾರೆ.
ಮಂಗಳೂರು ನಗರದ ವಿಶೇಷ ಘಟಕದ (ಸಿಎಸ್‌ಬಿ) ಪೊಲೀಸ್ ನಿರೀಕ್ಷಕರು ಗೂ ಸಿಬ್ಬಂದಿ "ಆ್ಯಂಟಿ ಕಮ್ಯುನಲ್ ವಿಂಗ್" ನ ಸದಸ್ಯರಾಗಿರುತ್ತಾರೆ. ನೈತಿಕ ಪೊಲೀಸ್‌ಗಿರಿ ಪ್ರಕರಣಗಳನ್ನು ಹಾಗೂ ಕೋಮು ಗಲಭೆಗಳನ್ನು ತಡೆಗಟ್ಟಲು ಆ್ಯಂಟಿ ಕಮ್ಯುನಲ್ ವಿಂಗ್ ರಚನೆ ಮಾಡಲಾಗಿದೆ.